ಮುಂಬೈ, ದೆಹಲಿಯಲ್ಲಿ ಕೋವಿಡ್ -19 ಪ್ರಕರಣಗಳು ಮತ್ತೆ ಉಲ್ಬಣದತ್ತ..!

ಮುಂಬೈ/ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದ ಹಣಕಾಸು ರಾಜಧಾನಿ ಮುಂಬೈಯಲ್ಲಿ 6,347 ಹೊಸ ಕೋವಿಡ್ -19 ಸೋಂಕುಗಳು ದಾಖಲಾಗಿದೆ. ಹಾಗೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2,716 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ ಮಹಾರಾಷ್ಟ್ರ ರಾಜ್ಯ ಆರೋಗ್ಯ ಇಲಾಖೆಯ ಪ್ರಕಾರ, ಮುಂಬೈನ 6,347 ಪ್ರಕರಣಗಳಲ್ಲಿ 5,712 ರೋಗ ಲಕ್ಷಣಗಳಿಲ್ಲದವರು. ಕಳೆದ 24 ಗಂಟೆಗಳಲ್ಲಿ 451 ರೋಗಿಗಳು … Continued

ದೆಹಲಿಯಲ್ಲಿ 3.8 ಡಿಗ್ರಿ ಸೆಲ್ಸಿಯಸ್‌ಗೆ ಇಳಿದ ಕನಿಷ್ಠ ತಾಪಮಾನ

ನವದೆಹಲಿ: ಶುಕ್ರವಾರ (ಡಿಸೆಂಬರ್ 31) ರಾಷ್ಟ್ರ ರಾಜಧಾನಿಯಲ್ಲಿ ಚಳಿಗಾಳಿ ಪರಿಸ್ಥಿತಿಗಳು ಚಾಲ್ತಿಯಲ್ಲಿರುವುದರಿಂದ ದೆಹಲಿಯ ಜನರು ಕೊರೆಯುವ ಚಳಿಯಲ್ಲಿಯೇ ಹೊಸ ವರ್ಷ ಆಚರಿಸಲು ಸಿದ್ಧರಾಗಿದ್ದಾರೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನಗರದಲ್ಲಿ ಕನಿಷ್ಠ ತಾಪಮಾನವು 3.8 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಗುರುವಾರ (ಡಿಸೆಂಬರ್ 30) ನಗರದಲ್ಲಿ ಚಳಿಗಾಳಿ ಆವರಿಸಿದ್ದು, ಒಂದು ದಿನದ ಹಿಂದಿನ ತಾಪಮಾನ 8.4 … Continued

ದೆಹಲಿ-ರಾಜಸ್ಥಾನದಲ್ಲಿ ತಲಾ 4 ಓಮಿಕ್ರಾನ್ ಪ್ರಕರಣಗಳು ದೃಢ..: ಭಾರತದಲ್ಲಿ ಸೋಂಕಿತರ ಸಂಖ್ಯೆ 49ಕ್ಕೆಏರಿಕೆ

ನವದೆಹಲಿ: ದೆಹಲಿಯಲ್ಲಿ ಮತ್ತೆ 4 ಓಮಿಕ್ರಾನ್​ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ ಓಮಿಕ್ರಾನ್​ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಅಲ್ಲದೆ, ರಾಜಸ್ಥಾನದಲ್ಲಿಯೂ ಮತ್ತೆ 4 ಕೇಸ್​ ದಾಖಲಾಗಿದ್ದು, ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13ಕ್ಕೆ ಏರಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ಏರಿದೆ. ನಿನ್ನೆ ಗುಜರಾತ್​​ನಲ್ಲಿ ವ್ಯಕ್ತಿಯೊಬ್ಬರಲ್ಲಿ ಓಮಿಕ್ರಾನ್​ ದೃಢಪಟ್ಟಿತ್ತು. … Continued

ಮೇಕೆದಾಟು ಯೋಜನೆ ಜಾರಿ ಬಗ್ಗೆ ಜಲಶಕ್ತಿ ಸಚಿವರಿಗೆ ಮನವರಿಕೆ; ಶೀಘ್ರವೇ ಡಿಪಿಆರ್​ಗೆ ಮಾನ್ಯತೆ:ಸಿಎಂ ಬೊಮ್ಮಾಯಿ

ನವದೆಹಲಿ: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಮುಂದಿಟ್ಟು ಕೇಂದ್ರ ಜಲಶಕ್ತಿ ಸಚಿವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಶೀಘ್ರದಲ್ಲೇ ಡಿಪಿಆರ್​ಗೆ ಮಾನ್ಯತೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಸಮಯ ಕೇಳಿದ್ದೇನೆ. ಅವರಿಗೆ ವೈಯಕ್ತಿಕ ಕೆಲಸವಿರುವ … Continued

ಸಂಪುಟ ವಿಸ್ತರಣೆ : ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆಗೆ ದೆಹಲಿಗೆ ತೆರಳಿದ ಸಿಎಂ

ಬೆಂಗಳೂರು: ಸಂಪುಟ ವಿಸ್ತರಣೆ ಕುರಿತು ಕೇಂದ್ರದ ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ದೆಹಲಿಗೆ ತೆರಳಿದರು. ರಾಷ್ಟ್ರ ರಾಜಧಾನಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಬಹುಶಹ ನಾಳೆ ಸಭೆ ನಡೆಯುವ ಸಾಧ್ಯತೆಯಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು. ಸಂಪುಟ ವಿಸ್ತರಣೆ … Continued

ಕೊರೊನಾ ಸಾಂಕ್ರಾಮಿಕ ಹರಡಿದ ನಂತರ ದೆಹಲಿಯಲ್ಲಿ ಅತಿಹೆಚ್ಚು ಏಕದಿನ ಪ್ರಕರಣ ದಾಖಲು.!!

ನವ ದೆಹಲಿ: ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ನಂತರ ಇದೇ ಮೊದಲ ಬಾರಿಗೆ ದೆಹಲಿಯು ಈ ವರೆಗಿನಾತಿಹೆಚ್ಚು ದೈನಂದಿನ ಪ್ರಕರಣಗಳನ್ನು ಬುಧವಾರ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯು17,282 ಹೊಸ ಪ್ರಕರಣಗಳನ್ನುವರದಿ ಮಾಡಿದೆ. ದೆಹಲಿಯ ಒಟ್ಟು ಸೋಂಕಿತರ ಸಂಖ್ಯೆ 7,67,438 ಕ್ಕೆ ಏರಿದೆ ಎಂದು ಆರೋಗ್ಯ ಬುಲೆಟಿನ್ ತಿಳಿಸಿದೆ.ರಾಷ್ಟ್ರ ರಾಜಧಾನಿ ಕಳೆದ 24 ಗಂಟೆಗಳಲ್ಲಿ 100 … Continued

ದೆಹಲಿಯಲ್ಲಿ ತೀವ್ರ ಶಾಖದ ಅಲೆ, 76 ವರ್ಷದಲ್ಲೇ ಮಾರ್ಚಿನಲ್ಲಿ ಅತಿ ಹೆಚ್ಚು ಉಷ್ಣತೆ ಎಂದ ಐಎಂಡಿ..!

ನವ ದೆಹಲಿ: ಹೋಳಿ ದಿನದಂದು ದೆಹಲಿಯು ಹೋಳಿಯ ದಿನವೇ ಗರಿಷ್ಠ ತಾಪಮಾನ ಕಂಡಿತು. ಈ ದಿನ 40.1 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿತ್ತು. ಇದು 76 ವರ್ಷಗಳಲ್ಲಿ ಮಾರ್ಚಿನಲ್ಲಿ ಕಂಡ ಅತಿ ಹೆಚ್ಚು ತಾಪಮಾನದ ದಿನವಾಗಿದೆ ಎಂದು ಭಾರತ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ನಗರಕ್ಕೆ ಪ್ರತಿನಿಧಿ ದತ್ತಾಂಶವನ್ನು ಒದಗಿಸುವ ಸಫ್ದರ್ಜಂಗ್ ವೀಕ್ಷಣಾಲಯವು ಗರಿಷ್ಠ … Continued

ದೆಹಲಿ ಮಸೂದೆ ವಿವಾದ: ರಾಜ್ಯಸಭೆಯಲ್ಲಿ ಗದ್ದಲ

ನವ ದೆಹಲಿ: ದೆಹಲಿಯಲ್ಲಿ ಚುನಾಯಿತ ಸರ್ಕಾರದ ಅಧಿಕಾರಗಳನ್ನು ಮೊಟಕುಗೊಳಿಸಿ, ಲೆಫ್ಟಿನೆಂಟ್ ಗವರ್ನರ್‌ಗೆ ಮತ್ತಷ್ಟು ಅಧಿಕಾರ ನೀಡುವ ಕೇಂದ್ರ ಸರ್ಕಾರದ ಹೊಸ ಮಸೂದೆ ವಿರುದ್ಧ ರಾಜ್ಯಸಭೆಯಲ್ಲಿ ಬುಧವಾರ ತೀವ್ರ ಕೋಲಾಹಲ ಉಂಟಾಯಿತು. ಹಣಕಾಸು ಮಸೂದೆ ಕುರಿತು ಚರ್ಚೆಯ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡುವಾಗ ಆಡಳಿತ ಹಾಗೂ ಪ್ರತಿಪಕ್ಷಗಳ ಮಧ್ಯೆ ತಿವ್ರ ವಾಗ್ವಾದ ನಡೆಯಿತು. … Continued

ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ: ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

ನವ ದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡುವ ಮಸೂದೆ- ದೆಹಲಿಯ ರಾಷ್ಟ್ರೀಯ ರಾಜಧಾನಿ ಸರ್ಕಾರ (ತಿದ್ದುಪಡಿ) ಮಸೂದೆ-2021 ಯನ್ನು ಲೋಕಸಭೆಯಲ್ಲಿ ಸೋಮವಾರ (ಮಾ.೨೨) ಅಂಗೀಕರಿಸಲಾಗಿದೆ. ಈ ತಿದ್ದುಪಡಿ ಮಸೂದೆಯಲ್ಲಿ ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್‌ ಅಧಿಕಾರ ವ್ಯಾಪ್ತಿ ಹೆಚ್ಚಿದ್ದು, ಈಗ ಈ ಕಾಯ್ದೆಯಿಂದ ಅವರಿಗೆ ಮತ್ತಷ್ಟು ಬಲ … Continued

ಕೊರೊನಾ ಹೆಚ್ಚಳ: ದೆಹಲಿ ತಬ್ಲಿಘಿ ಜಮಾತ್ ಸಭೆ ಉಲ್ಲೇಖಿಸಿದ್ದ ಎಂಬಿಬಿಎಸ್ ಪುಸ್ತಕ ಹಿಂಪಡೆದ ಸರ್ಕಾರ

ಮುಂಬೈ: ದೇಶದಲ್ಲಿ ಕೊರೊನಾ ಸೋಂಕಿನ ಸ್ಫೋಟಕ್ಕೆ ಸಂಬಂಧಿಸಿದಂತೆ, ನವದೆಹಲಿಯಲ್ಲಿನ ತಬ್ಲಿಘಿ ಜಮಾತ್ ಸಭೆ ಉಲ್ಲೇಖಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾದ ಕಾರಣ ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ 2ನೇ ವರ್ಷಕ್ಕೆ ಸಂಬಂಧಿಸಿದ ಇದರ ಉಲ್ಲೇಖ ಇರುವ ಪುಸ್ತಕ ಹಿಂಪಡೆದಿರುವುದಾಗಿ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಹೊರತರಲಾಗಿದ್ದ ಎಸ್ಸೆನ್ಶಿಯಲ್ಸ್ ಆಫ್ ಮೆಡಿಕಲ್ ಮೈಕ್ರೊಬಯಾಲಜಿ” ಪುಸ್ತಕದ ಮೂರನೇ ಆವೃತ್ತಿಯಲ್ಲಿ ತಬ್ಲಿಘಿ ಜಮಾತ್ ಸಭೆಯ ಉಲ್ಲೇಖ ಮಾಡಲಾಗಿತ್ತು. … Continued