ರಾಹುಲ್ ಗಾಂಧಿ ವಿರುದ್ಧ ಎಎಪಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್‌

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅದರ ದೆಹಲಿಯ ಉನ್ನತ ನಾಯಕತ್ವದ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ‘ಅಪ್ರಾಮಾಣಿಕ’ ಎಂದು ಗೇಲಿ ಮಾಡಿ ಪೋಸ್ಟರ್‌ ಅಂಟಿಸಿದ್ದಕ್ಕೆ ಕೆರಳಿರುವ ಕಾಂಗ್ರೆಸ್ ಪಕ್ಷವು ಶನಿವಾರ ಚುನಾವಣೆ ಆಯೋಗ (EC)ಕ್ಕೆ ತನ್ನ ದೂರನ್ನು ದಾಖಲಿಸಿದೆ. ಕಾಂಗ್ರೆಸ್ ನಾಯಕರ ನಿಯೋಗವು ವಕೀಲರ ತಂಡದ ಜೊತೆ … Continued

ತನ್ನದೇ ಮದುವೆ ಕಾರ್ಡ್‌ ಕೊಡಲು ಹೋಗುವಾಗ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಮದುಮಗ…!

ನವದೆಹಲಿ: ದುರಂತದ ಘಟನೆಯೊಂದರಲ್ಲಿ, ತನ್ನ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ನೀಡಲು ಹೋಗಿದ್ದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಕಾರಿಗೆ ಬೆಂಕಿ ಹೊತ್ತುಕೊಂಡು ಹಚ್ಚಿ ಸುಟ್ಟು ಕರಕಲಾದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಜಿಪುರದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮದುಮಗ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ನಾವಡ ನಿವಾಸಿಯಾಗಿರುವ ಅನಿಲ ಎಂಬವರ … Continued

ಅರವಿಂದ ಕೇಜ್ರಿವಾಲ್‌, ಸಿಸೊಡಿಯಾಗೆ ಹೊಸ ಸಂಕಷ್ಟ ; ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಇ.ಡಿ.ವಿಚಾರಣೆಗೆ ಕೇಂದ್ರದ ಒಪ್ಪಿಗೆ

ನವದೆಹಲಿ: ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಂಕಷ್ಟ ಎದುರಾಗಿದೆ. ಕೇಂದ್ರ ಗೃಹ ಸಚಿವಾಲಯವು ಈಗ ರದ್ದಾಗಿರುವ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ. … Continued

ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಒಂದೇ ಹಂತದಲ್ಲಿ ಮತದಾನ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಪ್ರಕಟಿಸಿದ್ದು, ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮಂಗಳವಾರ ತಿಳಿಸಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರು, “ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ಹೊಸ ದಾಖಲೆ ಮಾಡಲಿದ್ದೇವೆ” ಎಂದು ಅವರು … Continued

ವೀಡಿಯೊ..| ತಂದೆಯನ್ನು ಬದಲಾಯಿಸಿದ್ದಾರೆ ಎಂಬ ಬಿಜೆಪಿ ನಾಯಕನ ಹೇಳಿಕೆಗೆ ಉತ್ತರ ನೀಡುವಾಗ ಕಣ್ಣೀರು ಹಾಕಿದ ದೆಹಲಿ ಸಿಎಂ ಅತಿಶಿ

ನವದೆಹಲಿ: ಬಿಜೆಪಿ ನಾಯಕ ರಮೇಶ ಬಿಧುರಿ ಅವರು ಭಾನುವಾರ ಅತಿಶಿ ತಮ್ಮ ತಂದೆಯನ್ನು ಬದಲಾಯಿಸಿದ್ದಾರೆ ಎಂದು ವೈಯಕ್ತಿಕವಾಗಿ ವಾಗ್ದಾಳಿ ನಡೆಸಿದ ನಂತರ ದೆಹಲಿ ಮುಖ್ಯಮಂತ್ರಿ ಅತಿಶಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಕಣ್ಣೀರಾದರು. ರಮೇಶ ಬಿಧುರಿ ತಮ್ಮ ಉಪನಾಮದ (ಅಡ್ಡ ಹೆಸರು) ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಅತಿಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲ್ಕಾಜಿ ವಿಧಾನಸಭಾ ಕ್ಷೇತ್ರದ … Continued

ವೀಡಿಯೊ..| ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಪಂಚಭೂತಗಳಲ್ಲಿ ಲೀನ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ಇಂದು, ಶನಿವಾರ ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕೆಂಪು ಕೋಟೆಯ ಹಿಂಭಾಗದಲ್ಲಿರುವ ನಿಗಮ್‌ಬೋಧ್‌ಘಾಟ್‌ನಲ್ಲಿ ಸಿಖ್‌ ಸಂಪ್ರದಾಯ ಪ್ರಕಾರ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಡೆಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ ಧನಕರ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ … Continued

ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಡಿಸೆಂಬರ್ 28ರಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಂತ್ಯಕ್ರಿಯೆ

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ಬೆಳಿಗ್ಗೆ 11:45 ಕ್ಕೆ ದೆಹಲಿಯ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ. ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಗುರುವಾರ 92 ನೇ ವಯಸ್ಸಿನಲ್ಲಿ ಏಮ್ಸ್‌ನಲ್ಲಿ ಕೊನೆಯುಸಿರೆಳೆದ ಮಾಜಿ ಪ್ರಧಾನಿಯವರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. “ಡಾ. ಮನಮೋಹನ್ … Continued

ಮಾಜಿ ಪ್ರಧಾನಿ ಮನಮೋಹನ ಸಿಂಗ್ ದೆಹಲಿ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 92 ವರ್ಷದ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ಘಟಕಕ್ಕೆ ದಾಖಲಿಸಲಾಯಿತು ಎಂದು ಹೇಳಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ … Continued

ವೀಡಿಯೊ | ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಜನರು

ನವದೆಹಲಿ: ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ರಾಜೌರಿ ಗಾರ್ಡನ್‌ನಲ್ಲಿರುವ ಜಂಗಲ್ ಜಾಂಬೋರಿ ರೆಸ್ಟೋರೆಂಟ್‌ನಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಭಯಭೀತರಾದ ಜನರು ಹತ್ತಿರದ ಕಟ್ಟಡದ ಛಾವಣಿಗೆ ಹಾರಿ ಬಚಾವ್‌ ಆಗಿದ್ದಾರೆ. ಗಾಯವಾದ ವ್ಯಕ್ತಿಯೊಬ್ಬನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ … Continued

ದೆಹಲಿಯ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ;$30,000 ಹಣಕ್ಕೆ ಬೇಡಿಕೆ

ನವದೆಹಲಿ : ಇಮೇಲ್‌ ಮೂಲಕ ದೆಹಲಿಯ ಸುಮಾರು 40 ಶಾಲೆಗಳಿಗೆ ಸೋಮವಾರ (ಡಿ. 9)ರ ಬೆಳಗ್ಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಮನೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ʼʼಪಶ್ಚಿಮ ವಿಹಾರದ ಜಿಕೆ ಗೋಯೆಂಕಾ ಮತ್ತು ಡಿಪಿಎಸ್‌ ಆರ್‌ಕೆ ಪುರಂ ಶಾಲೆ ಸೇರಿದಂತೆ 40 ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ … Continued