ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ : ಶಾಲೆಗಳಿಗೆ ರಜೆ ಘೋಷಣೆ

ನವದೆಹಲಿ: ದೆಹಲಿಯಲ್ಲಿ ಕಳೆದೊಂದು ವಾರದಿಂದ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಮಟ್ಟಕ್ಕೆ ಕುಸಿದಿರುವುದರಿಂದ ನವೆಂಬರ್ 10ರ ವರೆಗೆ ಶಾಲೆಗಳಿಗೆ ರಜೆ ವಿಸ್ತರಿಸಲಾಗಿದೆ. 5ನೇ ತರಗತಿಯವರೆಗಿನ ಎಲ್ಲಾ ಶಾಲೆಗಳನ್ನು ನವೆಂಬರ್‌ 10ರ ವರೆಗೆ ಬಂದ್ ಮಾಡುವಂತೆ ಆದೇಶವನ್ನು ವಿಸ್ತರಿಸಲಾಗಿದೆ. 6ರಿಂದ 12 ನೇ ತರಗತಿಯವರೆಗಿನ ಶಾಲೆಗಳನ್ನು ಬಂದ್ ಮಾಡುವ ಅಗತ್ಯವಿಲ್ಲ, ಆದರೂ ಈ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ … Continued

ವೈದ್ಯಕೀಯ ಪವಾಡ…: ಅಪಘಾತದಿಂದ ಪ್ರಜ್ಞಾಹೀನಳಾಗಿ ವೆಂಟಿಲೇಟರ್‌ನಲ್ಲಿದ್ದಾಗಲೇ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ ಮಹಿಳೆ…!

ನವದೆಹಲಿ : ವೈದ್ಯಕೀಯ ಪವಾಡವೊಂದರಲ್ಲಿ, ಮಾರಣಾಂತಿಕ ರಸ್ತೆ ಅಪಘಾತದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ವೆಂಟಿಲೇಟರ್‌ನಲ್ಲಿದ್ದ ಮಹಿಳೆಯೊಬ್ಬರು ಕಳೆದ ವಾರ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ (ಏಮ್ಸ್) ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಾಗಿದೆ. ನಂದಿನಿ ತಿವಾರಿ (22) ಅವರನ್ನು ಅಕ್ಟೋಬರ್ 17 ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿತ್ತು. ಮಹಿಳೆ … Continued

ಕ್ರಿಕೆಟ್‌ ವಿಶ್ವಕಪ್ 2023 : ಇಂಗ್ಲೆಂಡಿಗೆ ಆಘಾತ, ಅಫ್ಘಾನಿಸ್ತಾನದ ವಿರುದ್ಧ ಹೀನಾಯವಾಗಿ ಸೋತ ಹಾಲಿ ವಿಶ್ವ ಚಾಂಪಿಯನ್….!

ನವದೆಹಲಿ: ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 69 ರನ್‌ಗಳ ಅಂತರದಿಂದ ಗೆಲ್ಲುವ ಮೂಲಕ ಅಫ್ಘಾನಿಸ್ತಾನ ತಂಡವು ವಿಶ್ವಕಪ್ ಇತಿಹಾಸದಲ್ಲಿ ಅತಿ ದೊಡ್ಡ ಬುಡಮೇಲು ಫಲಿತಾಂಶವನ್ನು ದಾಖಲಿಸಿದೆ. ಬ್ಯಾಟಿಂಗ್ ಆಗಿರಲಿ ಅಥವಾ ಬೌಲಿಂಗ್ ಆಗಿರಲಿ, ಎಲ್ಲದರಲ್ಲಿಯೂ ಅಫ್ಘಾನಿಸ್ತಾನ ತಂಡವು ಇಂಗ್ಲಿಷ್ ತಂಡಕ್ಕೆ ಪುನರಾಗಮನಕ್ಕೆ ಅವಕಾಶವನ್ನೇ ನೀಡಲಿಲ್ಲ. ಅಫ್ಘಾನಿಸ್ತಾನದ 284 … Continued

ಅಕ್ಟೋಬರ್ 9 ರಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ನವದೆಹಲಿ: ಪ್ರಸ್ತುತ ರಾಜಕೀಯ ಪರಿಸ್ಥಿತಿ, ಜಾತಿ ಗಣತಿ ಮತ್ತು ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆ ಸಿಡಬ್ಲ್ಯುಸಿ (CWC) ಅಕ್ಟೋಬರ್ 9 ರಂದು ದೆಹಲಿಯಲ್ಲಿ ಸಭೆ ನಡೆಸಲಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಅಧಿಕಾರವನ್ನು ಬರಲು ಹಾಗೂ ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಅಧಿಕಾರವನ್ನು … Continued

ದೆಹಲಿ ಮದ್ಯ ನೀತಿ ಪ್ರಕರಣ : ಮನೆ ಇ.ಡಿ. ದಾಳಿ ನಡೆದ ಕೆಲವೇ ಗಂಟೆಗಳ ನಂತರ ಎಎಪಿ ನಾಯಕ ಸಂಜಯ ಸಿಂಗ್ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿಯ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (AAP)ಕ್ಕೆ ಜಾರಿ ನಿರ್ದೇಶನಾಲಯವು ಶಾಕ್‌ ನೀಡಿದೆ. (ED). ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರನ್ನು ಇ.ಡಿ. ಇಂದು ಬುಧವಾರ (ಅಕ್ಟೋಬರ್‌ 4) ಬಂಧಿಸಿದೆ. ಬುಧವಾರ ಬೆಳಗ್ಗೆಯಿಂದಲೇ ಸಂಸದರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ … Continued

ಎನ್‌ಐಎ ದಾಳಿಯಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ ಭಯೋತ್ಪಾದಕ ದೆಹಲಿಯಲ್ಲಿ ಬಂಧನ

ನವದೆಹಲಿ: ಶಂಕಿತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಭಯೋತ್ಪಾದಕ ಮತ್ತು ಇತರ ಇಬ್ಬರು ಭಯೋತ್ಪಾದಕ ಶಂಕಿತರನ್ನು ದೆಹಲಿ ಪೊಲೀಸ್ ವಿಶೇಷ ದಳ ಸೋಮವಾರ ಬಂಧಿಸಿದೆ. ಐಸಿಸ್ ಭಯೋತ್ಪಾದಕ ಮೊಹಮ್ಮದ್ ಶಹನವಾಜ್ ಅಲಿಯಾಸ್ ಶಫಿ ಉಜ್ಜಮಾ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದು, ಆತನ ತಲೆಗೆ 3 ಲಕ್ಷ ರೂ.ಘೋಷಿಸಲಾಗಿತ್ತು. ದೆಹಲಿಯಲ್ಲಿ ಐಸಿಸ್ ಮಾಡ್ಯೂಲ್‌ನ ಸುಳಿವು … Continued

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕೆಂಪು ಅಂಗಿ ತೊಟ್ಟು ʼಹಮಾಲಿʼಯಾದ ರಾಹುಲ್ ಗಾಂಧಿ | ವೀಕ್ಷಿಸಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ದೆಹಲಿಯ ಆನಂದ್ ವಿಹಾರ ರೈಲು ನಿಲ್ದಾಣದಲ್ಲಿ ಹಮಾಲರನ್ನು ಭೇಟಿ ಮಾಡಿದರು ಮತ್ತು ಕೆಂಪು “ಕೂಲಿ” ಶರ್ಟ್ ಮತ್ತು ಕೈಗೆ ಬ್ಯಾಡ್ಜ್ ಕಟ್ಟಿಕೊಂಡು ತಲೆಯ ಮೇಲೆ ಲಗೇಜ್ ಹೊತ್ತುಕೊಂಡು ಸಾಗಿದರು. ವೈರಲ್ ಕ್ಲಿಪ್‌ನಲ್ಲಿ, ವಯನಾಡ್ ಸಂಸದ ತಲೆಯ ಮೇಲೆ ಟ್ರಾಲಿ ಬ್ಯಾಗ್ ಇರಿಸುತ್ತಿರುವುದು ಹಾಗೂ ಪೋರ್ಟರ್‌ಗಳು ಅವರನ್ನು ಸುತ್ತುವರೆದಿರುವುದನ್ನು … Continued

ಕಾವೇರಿ ವಿವಾದ: ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಕೇಂದ್ರ ಜಲಶಕ್ತಿ ಸಚಿವರ ಭೇಟಿ

ನವದೆಹಲಿ : ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯದ ಜನಪ್ರತಿನಿಧಿಗಳು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಗುರುವಾರ ಭೇಟಿಯಾಗಿದ್ದಾರೆ. ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಗಜೇಂದ್ರ ಸಿಂಗ್ ಶೇಖಾವತ್ ನಿವಾಸದಲ್ಲಿ ಭೇಟಿಯಾಗಿ ನೀರು ಹಂಚಿಕೆ ವಿವಾದದ ಕುರಿತು ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ … Continued

ಕಾವೇರಿ ವಿವಾದ : ನದಿಯಲ್ಲಿ ನೀರಿಲ್ಲ ಎಂದು ಸುಪ್ರೀಂ ಕೋರ್ಟಿಗೆ ಇಂದು ಅರ್ಜಿ ; ಸಿಎಂ ಸಿದ್ದರಾಮಯ್ಯ

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ‘ನದಿಯಲ್ಲಿ ನೀರು ಇಲ್ಲ’ ಎಂದು ಗುರುವಾರ (ಸೆಪ್ಟೆಂಬರ್‌ 21) ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಸಭೆಯ ಬಳಿಕ ಮಾತನಾಡಿದ ಅವರು, “ ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು. ಬೇರೆ ಕೆಲಸವಿದ್ದ ಹಿನ್ನೆಲೆಯಲ್ಲಿ … Continued

ದೆಹಲಿಯಲ್ಲಿ ಬಿಜೆಪಿ ವರಿಷ್ಠರ ಭೇಟಿಯಾಗಲಿರುವ ಕುಮಾರಸ್ವಾಮಿ : ಮೈತ್ರಿ ಮಾತುಕತೆಯೇ ಪ್ರಮುಖ ಅಜೆಂಡಾ

ರಾಮನಗರ: 2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಉಭಯ ಪಕ್ಷಗಳ ನಡುವೆ ಸಂಭವನೀಯ ಮೈತ್ರಿ ಕುರಿತು ಚರ್ಚಿಸಲು ಬಿಜೆಪಿ ಕೇಂದ್ರ ನಾಯಕತ್ವವನ್ನು ಭೇಟಿ ಮಾಡಲು ಸೆಪ್ಟೆಂಬರ್ 21 ರಂದು ನವದೆಹಲಿಗೆ ತೆರಳುವುದಾಗಿ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಕುರಿತು ಮಾಧ್ಯಮ ವರದಿಗಳು ಕೇವಲ ಊಹಾಪೋಹ … Continued