12 ತಾಸುಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯ ನಂತರ ಕೂಡಿಕೊಂಡಿದ್ದ 1 ವರ್ಷದ ಅವಳಿಗಳನ್ನು ಯಶಸ್ವಿಯಾಗಿ ಬೇರ್ಪಡಿಸಿದ ಏಮ್ಸ್‌ ವೈದ್ಯರು….

ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ (AIIMS) 12 ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯ ನಂತರ ಕಳೆದ ವರ್ಷ ಜನಿಸಿದ್ದ ಎದೆ ಮತ್ತು ಹೊಟ್ಟೆ ಸೇರಿಕೊಂಡಿದ್ದ ಸಂಯೋಜಿತ ಅವಳಿ ಮಕ್ಕಳಾದ ರಿದ್ಧಿ ಮತ್ತು ಸಿದ್ಧಿ ಅವರನ್ನು ಯಶಸ್ವಿಯಾಗಿ ಬೇರ್ಪಡಿಸಲಾಗಿದೆ ಎಂದು ವೈದ್ಯರು ಬುಧವಾರ ತಿಳಿಸಿದ್ದಾರೆ. ಎಐಐಎಂಎಸ್‌ನ ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ … Continued

ವಿಪಕ್ಷ ನಾಯಕನ ಆಯ್ಕೆ ವಿಚಾರ: ಕೇಂದ್ರದ ಇಬ್ಬರು ವೀಕ್ಷಕರು ಇಂದು ಬೆಂಗಳೂರಿಗೆ, ಯಡಿಯೂರಪ್ಪ ಮಾಹಿತಿ

ನವದೆಹಲಿ: ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಇದೇವೇಳೆ ಬಿಜೆಪಿ (BJP) ಹೈಕಮಾಂಡ್‌ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗಾಗಿ ಇಬ್ಬರು ವೀಕ್ಷಕರನ್ನು ಬೆಂಗಳೂರಿಗೆ ಕಳುಹಿಸಲಿದೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಸಭೆಯ ನಂತರ ಮಾತನಾಡಿದ ಬಿ.ಎಸ್‌. ಯಡಿಯೂರಪ್ಪ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸೋಮವಾರ … Continued

ಹಾಡಹಗಲೇ ಜನನಿಬಿಡ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿ, ಗನ್ ತೋರಿಸಿ ಹಣ ದೋಚಿದ ದುಷ್ಕರ್ಮಿಗಳು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜನದಟ್ಟಣೆಯ ಸುರಂಗ ಮಾರ್ಗದಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಇಂಡಿಯಾ ಗೇಟ್‌ನಿಂದ ರಿಂಗ್ ರೋಡ್‌ಗೆ ಸಂಪರ್ಕ ಕಲ್ಪಿಸುವ ಪ್ರಗತಿ ಮೈದಾನದ ಸುರಂಗ ಮಾರ್ಗದಲ್ಲಿ ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಡೆಲಿವರಿ ಏಜೆಂಟನ ಕಾರು ಅಡ್ಡಗಟ್ಟಿ ಗನ್ ತೋರಿಸಿ ಕಾರಿನಲ್ಲಿದ್ದ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ. ಸಜನಕುಮಾರ ಪಟೇಲ್‌ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದು, ಅವರು … Continued

ಅಮಿತ್ ಶಾ ಭೇಟಿ ಮಾಡಿದ ಸಿದ್ದರಾಮಯ್ಯ; ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ ಎಂದು ತಿಳಿಸಿದ ಸಿಎಂ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ರಾತ್ರಿ ಭೇಟಿ ಮಾಡಿದ್ದಾರೆ. ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಕುರಿತು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ. ಇದು ಸೌಹಾರ್ದ ಭೇಟಿಯಾಗಿದ್ದು, ಆದರೂ ರಾಜ್ಯದ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ವಿಷಯ … Continued

ಸಂಪುಟ ವಿಸ್ತರಣೆ : ಬುಧವಾರ ಸಿದ್ದರಾಮಯ್ಯ-ಶಿವಕುಮಾರ ದೆಹಲಿಗೆ..?

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬುಧವಾರ ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ವರದಿಯಾಗಿದೆ. ನಾಳೆ ಸಂಜೆ 6 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾತರ ಒಟ್ಟಾಗಿಯೇ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ನಾಯಕರ ಜೊತೆ ಸಂಪುಟ … Continued

ಸುಪ್ರೀಂ ಕೋರ್ಟ್ ತೀರ್ಪಿನ ಕೆಲವೇ ಗಂಟೆಗಳ ನಂತರ ಸೇವಾ ಕಾರ್ಯದರ್ಶಿಯನ್ನು ತೆಗೆದುಹಾಕಿದ ದೆಹಲಿ ಕೇಜ್ರಿವಾಲ್ ಸರ್ಕಾರ

ನವದೆಹಲಿ : ಅಧಿಕಾರಶಾಹಿಗಳ ನಿಯಂತ್ರಣ ಮತ್ತು ನಿಯೋಜನೆ ಕುರಿತು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ ನಂತರ ದೆಹಲಿಯ ಅರವಿಂದ ಕೇಜ್ರಿವಾಲ್‌ ಸರ್ಕಾರ, ದೆಹಲಿ ಸರ್ಕಾರದ ಸೇವಾ ಇಲಾಖೆಯ ಕಾರ್ಯದರ್ಶಿ ಆಶಿಶ್‌ ಮೋರೆ ಅವರನ್ನು ಎತ್ತಂಗಡಿ ಮಾಡಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಮುಖ ಆಡಳಿತಾತ್ಮಕ ಪುನರ್ರಚನೆಯ ಎಚ್ಚರಿಕೆಯೊಂದಿಗೆ ಹಲವು ವರ್ಗಾವಣೆಗಳಲ್ಲಿ ಮೊದಲನೆಯ ಕ್ರಮ ಕೈಗೊಂಡಿದ್ದಾರೆ. ಸುಪ್ರೀಂ … Continued

ಒಂದೇ ದಿನದಲ್ಲಿ ಹೊಸದಾಗಿ 1,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳನ್ನು ದಾಖಲಿಸಿದ ದೆಹಲಿ, ಮಹಾರಾಷ್ಟ್ರ

ನವದೆಹಲಿ: ಮಹಾರಾಷ್ಟ್ರವು ಬುಧವಾರ 1,000 ಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ಮತ್ತು ಒಂಬತ್ತು ಸಾವುಗಳನ್ನು ವರದಿ ಮಾಡಿದೆ. ರಾಜ್ಯವು 1,115 ಹೊಸ ಸೋಂಕುಗಳನ್ನು ವರದಿ ಮಾಡಿದೆ, ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 5,421 ಕ್ಕೆ ಒಯ್ದಿದೆ. ಮುಂಬೈನಲ್ಲಿ ಅತಿ ಹೆಚ್ಚು 1,577 ಪ್ರಕರಣಗಳು, ನಂತರ ಥಾಣೆಯಲ್ಲಿ 953, ಪುಣೆಯಲ್ಲಿ 776 ಮತ್ತು ನಾಗ್ಪುರದಲ್ಲಿ 548 … Continued

ನಡ್ಡಾ ಭೇಟಿಯಿಂದ ಸಮಾಧಾನವಾಗಿದೆ, ಎರಡು ದಿನದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ: ಜಗದೀಶ ಶೆಟ್ಟರ್

ನವದೆಹಲಿ : ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬುಧವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದರು. ನಡ್ಡಾ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಶೆಟ್ಟರ್ ಅವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಧನಾತ್ಮಕ ಚರ್ಚೆ ನಡೆದಿದ್ದು, … Continued

ಟಿಕೆಟ್​ ಗೊಂದಲ: ಹೈಕಮಾಂಡ್​ ಬುಲಾವ್ ನಂತರ ದೆಹಲಿಗೆ ಹೊರಟ ಜಗದೀಶ ಶೆಟ್ಟರ

ಹುಬ್ಬಳ್ಳಿ: ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದಂತೆ, ತಮ್ಮ ಹೆಸರು ಇಲ್ಲದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಅವರನ್ನು ಹೈಕಮಾಂಡ್​ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ದೆಹಲಿಗೆ ಹೋಗುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ದೆಹಲಿಗೆ ಬರುವಂತೆ … Continued

ದೆಹಲಿ : ವಿಮಾನದ ಟಾಯ್ಲೆಟ್‌ನಲ್ಲಿ 1.95 ಕೋಟಿ ಮೌಲ್ಯದ ಚಿನ್ನ ಪತ್ತೆ…!

ನವದೆಹಲಿ: ವಿಮಾನದ ಶೌಚಾಲಯಲ್ಲಿ ಅಡಗಿಸಿಟ್ಟಿದ್ದ ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ನಾಲ್ಕು ಚಿನ್ನದ ಗಟ್ಟಿಗಳನ್ನು ದೆಹಲಿಯಲ್ಲಿ ವಶ ಪಡಿಸಿಕೊಳ್ಳಲಾಗಿದೆ. ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿನ ಕಸ್ಟಮ್ಸ್ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಈ ಮೊದಲು ಪ್ರಯಾಣಿಕರು ಘನಿಕೃತರೂಪದ ಚಿನ್ನವನ್ನು ಒಳ ಉಡುಪು, ಸೂಟ್‍ಕೇಸ್, ಶೂ, ಬೆಲ್ಟ್ ಹಾಗೂ ಇತರ ರೂಪದಲ್ಲಿ … Continued