ಮೂರು ಡಿಸಿಎಂಗಳು ಬೇಕು, ಕಾಂಗ್ರೆಸ್‌ ಹೈಕಮಾಂಡಿಗೆ ಪತ್ರ ಬರೆಯುವೆ : ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆಗೆ ಕಾಂಗ್ರೆಸ್‌ನಲ್ಲಿ ಸಂಚಲನ

ತುಮಕೂರು: ಸಚಿವ ಕೆ.ಎನ್.ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಕೈ ಪಾಳಯದಲ್ಲಿ ಸಂಚಲನವನ್ನು ಸೃಷ್ಟಿಸಿದೆ. ಡಿ.ಕೆ. ಶಿವಕುಮಾರ ಜತೆಗೆ ಇನ್ನೂ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಕೋರಿ ಹೈಕಮಾಂಡ್‌ಗೆ ಪತ್ರ ಬರೆಯುತ್ತೇನೆ ಎಂದು ಸಚಿವ ರಾಜಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ ಅವರು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಇನ್ನೂ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಬೇಕು … Continued