ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಇನ್ನಿಲ್ಲ

ನವದೆಹಲಿ : ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ (73) ಅವರು ಡಿಸೆಂಬರ್ 15 ರಂದು (ಭಾನುವಾರ) ಅಮೆರಿಕದಲ್ಲಿ ನಿಧನರಾಗಿದ್ದಾರೆ. ತಹೃದಯ ಸಂಬಂಧಿ ಸಮಸ್ಯೆಗಳಿಂದ ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾದ ನಂತರ ಅವರು ನಿಧನರಾದರು. ಜಾಕೀರ್‌ ಹುಸೇನ್ ಅವರ ಮ್ಯಾನೇಜರ್ ಪ್ರಕಾರ, ಅವರು ರಕ್ತದೊತ್ತಡದ ಸಮಸ್ಯೆಗಳಿಂದ ಬಳಲುತ್ತಿದ್ದರು. ತಬಲಾವನ್ನು … Continued

ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತ ಲೀಲಾವತಿ ಬೈಪಾಡಿತ್ತಾಯ ನಿಧನ

ಮಂಗಳೂರು: ಯಕ್ಷಗಾನ ರಂಗದ ಮೊದಲ ಮಹಿಳಾ ವೃತ್ತಿಪರ ಭಾಗವತರಾಗಿ ಗುರುತಿಸಿಕೊಂಡಿದ್ದ ಲೀಲಾವತಿ ಬೈಪಡಿತ್ತಾಯ (77) ನಿಧನರಾಗಿದ್ದಾರೆ. ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯ ಅವರ ಪತ್ನಿ. ಲೀಲಾವತಿ ಬೈಪಾಡಿತ್ತಾಯ ಅವರು ಸುಮಾರು ನಾಲ್ಕು ದಶಕಗಳ ಕಾಲ ತೆಂಕುತಿಟ್ಟಿನ ಭಾಗವತರಾಗಿ ಮನೆಮಾತಾಗಿದ್ದರು. ಪಿಟೀಲು ವಾದಕ ಪದ್ಮನಾಭ ಸರಳಾಯರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿತಿದ್ದರು. ಲೀಲಾವತಿ ಬೈಪಡಿತ್ತಾಯ … Continued

ಮಾಜಿ ಸಚಿವ ಮನೋಹರ ತಹಶೀಲ್ದಾರ ನಿಧನ

ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ (78) ಇಂದು, ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಆಸ್ಪತ್ರೆಯಲ್ಲಿಅವರು ನಿಧನರಾಗಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ ತಹಶೀಲ್ದಾರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು … Continued

ಲೆಜೆಂಡರಿ ಫ್ಯಾಷನ್ ಡಿಸೈನರ್ ರೋಹಿತ್ ಬಾಲ್ ನಿಧನ

ನವದೆಹಲಿ : ಖ್ಯಾತ ಫ್ಯಾಷನ್‌ ಡಿಸೈನರ್‌ ರೋಹಿತ್‌ ಬಾಲ್‌ (Rohit Bal) ಶುಕ್ರವಾರ (ನ.1) ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಫ್ಯಾಷನ್‌ ಡಿಸೈನ್‌ ಕೌನ್ಸಿಲ್‌ ಆಫ್‌ ಇಂಡಿಯಾ (Fashion Design Council of India) ರೋಹಿತ್‌ ಬಾಲ್‌ ಅವರ ನಿಧನವನ್ನು ಖಚಿತಪಡಿಸಿದೆ. ಬಾಲ್ ಅವರ ನಿಧನದ ಸುದ್ದಿಯನ್ನು ಫ್ಯಾಷನ್‌ ಡಿಸೈನ್‌ ಕೌನ್ಸಿಲ್‌ ಆಫ್‌ ಇಂಡಿಯಾ … Continued

ನಾಲ್ಕು ಬಾರಿ ಪ್ರೇಮಾಂಕುರ…ಆದರೂ ರತನ್ ಟಾಟಾ ಮದುವೆಯಾಗಲಿಲ್ಲ ಯಾಕೆ …?!

ಖ್ಯಾತ ಕೈಗಾರಿಕೋದ್ಯಮಿ ಮತ್ತು ಲೋಕೋಪಕಾರಿ ರತನ್ ಟಾಟಾ ಅವರು ಬುಧವಾರ 86 ನೇ ವಯಸ್ಸಿನಲ್ಲಿ ನಿಧನರಾದರು. ರಕ್ತದೊತ್ತಡದಲ್ಲಿ ಹಠಾತ್ ಕುಸಿತವನ್ನು ಅನುಭವಿಸಿದ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಬುಧವಾರ ರಾತ್ರಿ ಮೃತಪಟ್ಟಿದ್ದು, ವ್ಯಾಪಾರ ಮತ್ತು ಲೋಕೋಪಕಾರದ ಜಗತ್ತಿನಲ್ಲಿ ಸಾಟಿಯಿಲ್ಲದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರ ವೃತ್ತಿಪರ … Continued

ರತನ್ ಟಾಟಾ : ಶಿಕ್ಷಣದಿಂದ ಹಿಡಿದು ಲೋಕೋಪಕಾರದ ವರೆಗೆ…ಟಾಟಾ ಪರಂಪರೆಯ ಹಿಂದಿನ ವ್ಯಕ್ತಿ

ಭಾರತದ ಕಾರ್ಪೊರೇಟ್ ವಲಯದ ಭೂದೃಶ್ಯದ ಹೃದಯಭಾಗದಲ್ಲಿ, ಒಂದು ದೊಡ್ಡ ಹೆಸರು ರತನ್ ಟಾಟಾ, ದೂರದೃಷ್ಟಿಯ ನಾಯಕತ್ವ ಮತ್ತು ಸಾಮಾಜಿಕ ಜವಾಬ್ದಾರಿಗೆ ಅಚಲವಾದ ಬದ್ಧತೆಯಿಂದ ಪ್ರತಿಧ್ವನಿಸಿದವರು ರತನ್ ಟಾಟಾ. ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷರಾದ ರತನ್‌ ಟಾಟಾ ಅಕ್ಟೋಬರ್ 9 ರಂದು 86 ನೇ ವಯಸ್ಸಿನಲ್ಲಿ ನಿಧನರಾದರು. ರತನ್ ಟಾಟಾ ಅವರ ಶಿಕ್ಷಣ, ವೃತ್ತಿ, ತತ್ವಶಾಸ್ತ್ರ, ಆಸಕ್ತಿಗಳು … Continued

ಹಿರಿಯ ಕೈಗಾರಿಕೋದ್ಯಮಿ-ರಾಷ್ಟ್ರೀಯ ಐಕಾನ್‌ ರತನ್ ಟಾಟಾ ಇನ್ನಿಲ್ಲ

ಮುಂಬೈ : ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎಮೆರಿಟಸ್ ರತನ್ ಟಾಟಾ ಅವರು ಬುಧವಾರ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರಕ್ತದೊತ್ತಡದಲ್ಲಿ ಹಠಾತ್ ಕುಸಿತದಿಂದಾಗಿ ಅವರನ್ನು ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ನಂತರ ಅವರು ತೀವ್ರ ನಿಗಾ ಘಟಕದಲ್ಲಿ ಗಂಭೀರ ಸ್ಥಿತಿಯಲ್ಲಿದ್ದರು. ಸೋಮವಾರ (ಅಕ್ಟೋಬರ್ 7) ಸಾಮಾಜಿಕ ಮಾಧ್ಯಮದಲ್ಲಿ … Continued

ಹೃದಯ ಸ್ತಂಭನ : 48ನೇ ವಯಸ್ಸಿನಲ್ಲಿ ಜನಪ್ರಿಯ ಹಿಂದಿ ಕಿರುತೆರೆ ನಟ ವಿಕಾಸ್ ಸೇಥಿ ನಿಧನ

ಮುಂಬೈ: 48ರ ವಯಸ್ಸಿನಲ್ಲೇ ಖ್ಯಾತ ಕಿರುತೆರೆ ನಟ ನಟ ವಿಕಾಸ್ ಸೇಥಿ (Vikas Sethi) ನಿಧನರಾಗಿದ್ದಾರೆ. ಅವರು ಹೃದಯ ಸ್ತಂಭನದಿಂದ ಭಾನುವಾರ(ಸೆ.8ರಂದು) ಮಲಗಿದ್ದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ದೇಹವನ್ನು ಕೂಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರು ಪತ್ನಿ ಜಾನ್ವಿ ಸೇಥಿ ಮತ್ತು ಅವರ ಅವಳಿ ಮಕ್ಕಳನ್ನು ಅಗಲಿದ್ದಾರೆ. 2000 ಇಸವಿಯ ಆರಂಭದಲ್ಲಿ ಹಿಂದಿ ಕಿರುತೆರೆಯಲ್ಲಿ … Continued

ಭರತನಾಟ್ಯ-ಕೂಚಿಪುಡಿಯ ಅಭಿಜಾತ ನೃತ್ಯಪಟು, ಪದ್ಮವಿಭೂಷಣ ಯಾಮಿನಿ ಕೃಷ್ಣಮೂರ್ತಿ ನಿಧನ

ನವದೆಹಲಿ: ಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿ ಯಾಮಿನಿ ಕೃಷ್ಣಮೂರ್ತಿ (84) ಅವರು ಶನಿವಾರ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅವರು ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದರು ಮತ್ತು ಕಳೆದ ಏಳು ತಿಂಗಳಿಂದ ಐಸಿಯುನಲ್ಲಿದ್ದರು ಎಂದು ಯಾಮಿನಿ ಕೃಷ್ಣಮೂರ್ತಿ ಅವರ ಮ್ಯಾನೇಜರ್ ಮತ್ತು ಕಾರ್ಯದರ್ಶಿ ಗಣೇಶ ತಿಳಿಸಿದ್ದಾರೆ. ಅಂತಿಮ ಶ್ರದ್ಧಾಂಜಲಿಗಾಗಿ ಕೃಷ್ಣಮೂರ್ತಿ ಅವರ ಪಾರ್ಥಿವ … Continued

ಕನ್ನಡದ ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ  (57  ಇಂದು, ಗುರುವಾರ (ಜುಲೈ 11) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಅವರು  ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ ವಸ್ತಾರೆ ಅವರನ್ನು ವಿವಾಹವಾಗಿದ್ದರು.  ಬೆಂಗಳೂರು ದೂರದರ್ಶನದಲ್ಲಿ ಸಿನೀಯರ್‌ ಗ್ರೇಡ್‌ ನಿರೂಪಕಿಯಾಗಿದ್ದರು. ಎರಡು ವರ್ಷಗಳ ಹಿಂದೆ ಶ್ವಾಸಕೋಶದ ಕ್ಯಾನ್ಸರ್‌ (Lung cancer) … Continued