ಕನ್ನಡದ ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ  (57  ಇಂದು, ಗುರುವಾರ (ಜುಲೈ 11) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಅವರು  ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ ವಸ್ತಾರೆ ಅವರನ್ನು ವಿವಾಹವಾಗಿದ್ದರು.  ಬೆಂಗಳೂರು ದೂರದರ್ಶನದಲ್ಲಿ ಸಿನೀಯರ್‌ ಗ್ರೇಡ್‌ ನಿರೂಪಕಿಯಾಗಿದ್ದರು. ಎರಡು ವರ್ಷಗಳ ಹಿಂದೆ ಶ್ವಾಸಕೋಶದ ಕ್ಯಾನ್ಸರ್‌ (Lung cancer) … Continued

ಹೊನ್ನಾವರ : ಪ್ರಸಿದ್ಧ ಯಕ್ಷಗಾನ ವೇಷಧಾರಿ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ

ಹೊನ್ನಾವರ : ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಪ್ಪೆಕೆರೆ ಮಹಾದೇವ ಹೆಗಡೆ(74) ಮಂಗಳವಾರ ರಾತ್ರಿ (ಜುಲೈ 9) ಹೊನ್ನಾವರದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ. ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಿಂದ ಯಕ್ಷಗಾನ ಕಲಿತು, ನಂತರ ಯಕ್ಷಗಾನದ ದಿಗ್ಗಜ ಕೆರೆಮನೆ ಮಹಾಬಲ … Continued

ಖ್ಯಾತ ಸಾಹಿತಿ ಡಾ.ಕಮಲಾ ಹಂಪನಾ ನಿಧನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ, ನಾಡೋಜಾ ಡಾ. ಕಮಲ ಹಂಪನಾ ಅವರು ಶನಿವಾರ (ಜೂನ್ 22) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಮಲ ಹಂಪನಾ ಅವರು ಪತಿ, ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿ … Continued

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ ನಿಂದ ಬಿದ್ದು ಸಾವು ; ಆತ್ಮಹತ್ಯೆ ಶಂಕೆ

ಬೆಂಗಳೂರು: ಕ್ರಿಕೆಟಿಗ, ಟೀಂ ಇಂಡಿಯಾ (Team India) ಮಾಜಿ ಆಟಗಾರ ಕರ್ನಾಟಕದ ವೇಗಿ ಡೇವಿಡ್‌ ಜಾನ್ಸನ್‌ (52) ಅಪಾರ್ಟ್ಮೆಂಟ್‌ನಿಂದ ಬಿದ್ದು ಸಾವಿಗೀಡಾಗಿದ್ದು, ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಕೊತ್ತನೂರು ಬಳಿ ಇರುವ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ ಎನ್ನಲಾಗಿದ್ದು, ತಕ್ಷಣವೇ ಅವರನ್ನ ಆಸ್ಪತ್ರೆಗೆ … Continued

ಖ್ಯಾತ ಸರೋದ್ ವಾದಕ ಪಂಡಿತ ರಾಜೀವ ತಾರಾನಾಥ ನಿಧನ

ಮೈಸೂರು : ಖ್ಯಾತ ಸರೋದ್ ವಾದಕ ಪಂಡಿತ ರಾಜೀವ ತಾರಾನಾಥ (93) ಅವರು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಮಂಗಳವಾರ (ಜೂನ್ 11) ನಿಧನರಾಗಿದ್ದಾರೆ. ಕುವೆಂ‍ಪು ನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಚೇತರಿಸಕೊಳ್ಳುತ್ತಿದ್ದರು. … Continued

ಮೀಡಿಯಾ ಬ್ಯಾರನ್- ರಾಮೋಜಿ ರಾವ್ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಹೈದರಾಬಾದ್‌ : ತೆಲುಗು ಮೀಡಿಯಾ ಬ್ಯಾರನ್ ಮತ್ತು ಹೈದರಾಬಾದ್‌ನ ಫಿಲ್ಮ್ ಸಿಟಿಯ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ರಾಮೋಜಿ ರಾವ್ ಅವರ ಸುಪ್ರಸಿದ್ಧ ಪ್ರಯಾಣವು ಜೂನ್ 8, 2024 ರಂದು ಕೊನೆಗೊಂಡಿತು, ಅವರು ಹೃದಯ ಸಂಬಂಧಿ ತೊಡಕುಗಳಿಂದ ನಿಧನರಾದರು. ಭಾರತೀಯ ಮಾಧ್ಯಮ ಮತ್ತು ಮನರಂಜನೆ ಕ್ಷೇತ್ರದಲ್ಲಿ … Continued

‘ಐಸ್‌ಕ್ರೀಂ ಮ್ಯಾನ್‌’ ಖ್ಯಾತಿಯ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ ಕಾಮತ್ ನಿಧನ

ಮುಂಬೈ: ಭಾರತದ ಟಾಪ್ ಐಸ್ ಕ್ರೀಮ್ ಬ್ರ್ಯಾಂಡ್‌ಗಳಲ್ಲಿ ಒಂದಾದ ನ್ಯಾಚುರಲ್ಸ್ ಐಸ್ ಕ್ರೀಮ್ ಸಂಸ್ಥಾಪಕ ರಘುನಂದನ ಶ್ರೀನಿವಾಸ ಕಾಮತ್ (70) ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮುಂಬೈನ ಎಚ್.ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ನಿಧನರಾದರು. ಎಂದು ಹೇಳುತ್ತವೆ. ರಘುನಂದನ ಕಾಮತ್ ಅವರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಸಾಧಾರಣ ಹಿನ್ನೆಲೆಯಿಂದ ಬಂದ ಅವರು, 400 ಕೋಟಿ … Continued

ಬಿಜೆಪಿ ಹಿರಿಯ ನಾಯಕ- ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ನಿಧನ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ಅವರು ಸೋಮವಾರ ಸಂಜೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್‌)ಯಲ್ಲಿ ನಿಧನರಾದರು. 72 ವರ್ಷದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದರು. ಒಂದು ಕಾಲದಲ್ಲಿ ಬಿಹಾರದಲ್ಲಿ ಬಿಜೆಪಿಯ ಚಿರಪರಿಚಿತ ಮುಖವಾಗಿದ್ದ ಧೀಮಂತ … Continued

ರಸ್ತೆ ಅಪಘಾತದಲ್ಲಿ ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರ ಜಯರಾಂ ಸಾವು

ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ (Pavithra Jayaram)ಆಂಧ್ರಪ್ರದೇಶದ ಕರ್ನೂಲು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು, ಭಾನುವಾರ ಬೆಳಿಗ್ಗೆ ಆಂಧ್ರ ಪ್ರದೇಶದ … Continued

ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ಅಪಾರ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ 67ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ಗುರುವಾರ (ಏ.25) ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued