ನಿಗೂಢ ನಡೆ ಮರ್ಮವೇನು..? : ಸಿಎಂ ಶಿಂಧೆ, ಫಡ್ನವಿಸ್, ಅಜಿತ ಪವಾರ್ ಅವರನ್ನು ಬಾರಾಮತಿ ಮನೆಗೆ ಭೋಜನಕ್ಕೆ ಆಹ್ವಾನಿಸಿದ ಶರದ್‌ ಪವಾರ್‌…!

ಮುಂಬೈ : ಅಚ್ಚರಿಯ ನಡೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್‌ಚಂದ್ರ ಪವಾರ್) ಅಧ್ಯಕ್ಷ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಮಾರ್ಚ್ 2 ರಂದು ಮಹಾರಾಷ್ಟ್ರದ ಬಾರಾಮತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಾರಾಮತಿಯಲ್ಲಿರುವ ತಮ್ಮ ನಿವಾಸದಲ್ಲಿ ಊಟಕ್ಕೆ ಆಹ್ವಾನಿಸಿದ್ದಾರೆ. 1999 ರಲ್ಲಿ … Continued

ಕಾಂಗ್ರೆಸ್ ತೊರೆದ ಮರುದಿನವೇ ಬಿಜೆಪಿ ಸೇರಿದ ಅಶೋಕ ಚವಾಣ ; ನಾಳೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ..?

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಇಂದು, ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಚವಾಣ ಅವರು ಫೆಬ್ರವರಿ 14 ರಂದು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷಕ್ಕೆ ಆಘಾತ ನೀಡಿದ ಚವಾಣ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದ ಪ್ರಾಥಮಿಕ … Continued

ಮಹಾರಾಷ್ಟ್ರ ಆಡಳಿತಾರೂಢ ಮೈತ್ರಿಕೂಟಕ್ಕೆ ನವಾಬ್ ಮಲಿಕ್ ಸೇರ್ಪಡೆ ವಿರೋಧಿಸಿ ಎನ್‌ ಸಿಪಿಯ ಅಜಿತ್ ಪವಾರಗೆ ಪತ್ರ ಬರೆದ ಫಡ್ನವೀಸ್‌

ಮುಂಬೈ : ಎನ್‌ಸಿಪಿ ಶಾಸಕ ನವಾಬ್ ಮಲಿಕ್ ಅವರನ್ನು ಮಹಾಯುತಿ ಸಮ್ಮಿಶ್ರ ಸರ್ಕಾರಕ್ಕೆ ಸೇರ್ಪಡೆಗೊಳಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಪಕ್ಷದ ದೇವೇಂದ್ರ ಫಡ್ನವೀಸ್ ಅವರು ಮತ್ತೊಬ್ಬ ಉಪಮುಖ್ಯಮಂತ್ರಿ ಮತ್ತು ಮೈತ್ರಿಪಕ್ಷವಾದ ಎನ್‌ಸಿಪಿ ಅಜಿತ್ ಪವಾರ್ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ. ಜಾಮೀನಿನ ಮೇಲೆ ಹೊರಗಿರುವ ನವಾಬ್ ಮಲಿಕ್ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ … Continued

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಈ ವಿಚಾರವನ್ನು ಗೃಹ ಸಚಿವ ಅಮಿತ್ ಶಾ ಗಮನಕ್ಕೆ ತರುತ್ತೇನೆ-ದೇವೇಂದ್ರ ಫಡ್ನವೀಸ್

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಂಗಳವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ತಮ್ಮ ರಾಜ್ಯಗಳ ಗಡಿ ಭಾಗಗಳಲ್ಲಿ ಚಾಲ್ತಿಯಲ್ಲಿರುವ ಉದ್ವಿಗ್ನತೆಯ ಕುರಿತು ಚರ್ಚಿಸಿದರು. ಕರ್ನಾಟಕದ ಹಲವು ಭಾಗಗಳಲ್ಲಿ ಮಹಾರಾಷ್ಟ್ರದ ಬಸ್‌ಗಳ ಮೇಲೆ ನಡೆದ ದಾಳಿಯ ಬಗ್ಗೆ ಫಡ್ನವೀಸ್ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಿಂದ ಬರುವ ಎಲ್ಲಾ ಬಸ್‌ಗಳಿಗೆ ಭದ್ರತೆ … Continued

ಇಂತಹ ಕೃತ್ಯಕ್ಕೆ ಸಮರ್ಥನೆ ಇಲ್ಲ’: ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ಅಪರಾಧಿಗಳು ಜೈಲಿಂದ ಬಿಡುಗಡೆಯಾದ ನಂತರ ಭವ್ಯ ಸ್ವಾಗತ ನೀಡಿದ್ದಕ್ಕೆ ಫಡ್ನವಿಸ್

ಮುಂಬೈ: ಬಿಲ್ಕಿಸ್ ಬಾನೋ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ 11 ಮಂದಿಗೆ ಜೈಲಿನಿಂದ ಬಿಡುಗಡೆಯಾದ ನಂತರ ಭವ್ಯ ಸ್ವಾಗತ ನೀಡಿರುವುದನ್ನು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ, ಬಿಜೆಪಿಯ ದೇವೇಂದ್ರ ಫಡ್ನವೀಸ್ ತೀವ್ರವಾಗಿ ಟೀಕಿಸಿದ್ದಾರೆ. ಗುಜರಾತ್ ಸರ್ಕಾರವು ಸ್ವಾತಂತ್ರ್ಯ ದಿನದಂದು 11 ಅಪರಾಧಿಗಳನ್ನು ಬಿಡುಗಡೆ ಮಾಡಿತು. ನಂತರ ಬಿಡುಗಡೆಯಾದವರನ್ನು ಸಿಹಿತಿಂಡಿಗಳು ಮತ್ತು ಹೂಮಾಲೆಗಳೊಂದಿಗೆ ಸ್ವಾಗತಿಸಿದ ವೀಡಿಯೊಗಳನ್ನು ವ್ಯಾಪಕವಾಗಿ … Continued