ಸ್ವತಂತ್ರ ಭಾರತದಲ್ಲಿ ರಾಜೀನಾಮೆ ನೀಡಿದ ಕೇಂದ್ರ ಸಚಿವರು ; ರಾಜೀನಾಮೆ ನೀಡಿದ್ದು ಯಾವ ಕಾರಣಕ್ಕೆ…?

ನವದೆಹಲಿ : ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವು ವಾರಗಳಿಂದ ನಡೆದ ವಿದ್ಯಾರ್ಥಿ ನೇತೃತ್ವದ ಪ್ರತಿಭಟನೆಗಳ ನಂತರ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಅವರು ಜುಲೈ 25ರಂದು ರಾಜೀನಾಮೆ ನೀಡಿದ್ದಾರೆ. ದೇಶದ ಅತ್ಯಂತ ಮಹತ್ವದ ಪ್ರವೇಶ ಪರೀಕ್ಷೆಗಳಲ್ಲೊಂದಾದ ನೀಟ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಹೊಣೆ ಹೊತ್ತು ರಾಜೀನಾಮೆ … Continued

ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ; ರಾಜಕೀಯ ಹಿನ್ನಡೆಯೋ ಅಥವಾ ಲೆಕ್ಕಾಚಾರದ ನಡೆಯೋ..?

ಉನ್ನತ ಮಟ್ಟದ ರಾಜಕೀಯ ತಂತ್ರಗಳಲ್ಲಿ ಸಮಯದ ಆಯ್ಕೆ ಎಂದಿಗೂ ಆಕಸ್ಮಿಕವಾಗಿರುವುದಿಲ್ಲ. ಅದೇ ರೀತಿ ಅಧಿಕಾರದ ಸ್ಥಾನದಿಂದ ಹಿಂದೆ ಸರಿಯುವ ನಿರ್ಧಾರಗಳೂ ಬಹುತೇಕ ದೊಡ್ಡ ರಾಜಕೀಯ ಲೆಕ್ಕಾಚಾರದ ಭಾಗವಾಗಿರುತ್ತವೆ. ಶನಿವಾರ (ಜುಲೈ 25) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ರಾಜೀನಾಮೆ ಸಲ್ಲಿಸಿ, “ನನ್ನ ಯುವ ಸ್ನೇಹಿತರಿಗೆ” ಉದ್ದೇಶಿಸಿದ ಎರಡು ಪುಟಗಳ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. … Continued

ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಪ್ರಲ್ಹಾದ ಜೋಶಿಗೆ ಕೇಂದ್ರ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ

ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ನೀಟ್‌ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನಂತರ ಪ್ರತಿಭಟನೆಗಳ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಭವನ ಅಂಗೀಕರಿಸಿದ್ದು, ಸದ್ಯ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿರುವ ಪ್ರಲ್ಹಾದ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ … Continued

ಕೇಂದ್ರದ ಜೊತೆ 3ನೇ ಸುತ್ತಿನ ಮಾತುಕತೆ ಯಶಸ್ವಿ : ದೆಹಲಿ ಜಂತರ್‌ ಮಂತರ್‌ ಪ್ರತಿಭಟನೆ ಅಂತ್ಯಗೊಳಿಸಿದ ಸಿಜೆಪಿ

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಕ್ರೋಚ್‌ ಜನತಾ ಪಾರ್ಟಿ (CJP) ತನ್ನ ಪ್ರತಿಭಟನೆಯನ್ನು “ತಕ್ಷಣದಿಂದಲೇ ಜಾರಿಗೆ ಬರುವಂತೆ” ಹಿಂಪಡೆದಿದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿದ್ದ ಬೆಂಬಲಿಗರಿಗೆ ಮನೆಗೆ ಹಿಂತಿರುಗುವಂತೆ ಮನವಿ ಮಾಡಿದೆ. ಶುಕ್ರವಾರ ಅಪರಾಹ್ನ ನಡೆದ ಸರ್ಕಾರ ಮತ್ತು ‘ಸಿಜೆಪಿ’ ಜಂಟಿ … Continued

ನೀಟ್ ಪೇಪರ್ ಸೋರಿಕೆ ಪ್ರಕರಣ : ಹೋರಾಟಕ್ಕೆ ಮಣಿದ ಕೇಂದ್ರ ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ಕಳೆದ ಒಂದು ತಿಂಗಳಿನಿಂದ ದೇಶಾದ್ಯಂತ ನಡೆಯುತ್ತಿರುವ ನೀಟ್ (NEET) ಪೇಪರ್ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧದ ವಿದ್ಯಾರ್ಥಿ ಹೋರಾಟಕ್ಕೆ ಕೊನೆಗೂ ಕೇಂದ್ರ ಸರ್ಕಾರ ತಲೆಬಾಗಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನ್ … Continued

ಸಿಜೆಪಿ ‘ಚಲೋ ಸಂಸತ್’ ಮೆರವಣಿಗೆಗೆ ತಡೆ: ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ಪೊಲೀಸ್ ಅನುಮತಿ ನಿರಾಕರಿಸಿದ್ದರೂ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರು ‘ಚಲೋ ಸಂಸತ್’ ಪ್ರತಿಭಟನೆಗಾಗಿ ದೆಹಲಿಯಲ್ಲಿ ಸೇರಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಟಿಯರ್‌ ಗ್ಯಾಸ್‌ ಶೆಲ್‌ಗಳನ್ನು ಸಿಡಿಸಿದ್ದು, ಲಾಠಿ ಪ್ರಹಾರವನ್ನೂ ನಡೆಸಿದರು. ಮುಖ್ಯವಾಗಿ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಜಂತರ್ ಮಂತರ್ … Continued

ಸೋನಂ ವಾಂಗ್ಚುಕ್ ಆರೋಗ್ಯದ ಮೇಲೆ ಪ್ರತಿದಿನ ನಿಗಾ ವಹಿಸಿ ; ಕೇಂದ್ರ–ದೆಹಲಿ ಸರ್ಕಾರಗಳಿಗೆ ದೆಹಲಿ ಹೈಕೋರ್ಟ್‌ ನಿರ್ದೇಶನ

ನವದೆಹಲಿ: ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹಾಗೂ ವೈದ್ಯಕೀಯ ಸ್ಥಿತಿಯನ್ನು ಪ್ರತಿದಿನ ಸರ್ಕಾರಿ ವೈದ್ಯರು ಪರಿಶೀಲಿಸಬೇಕು ಮತ್ತು ಅವರ ಜೀವ ರಕ್ಷಿಸಲು ಅಗತ್ಯವಿರುವ ಎಲ್ಲ ವೈದ್ಯಕೀಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ದೇವೇಂದ್ರಕುಮಾರ ಉಪಾಧ್ಯಾಯ … Continued

ಜೂ.6 ರಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ ದಿಪ್ಕೆ ಭಾರತಕ್ಕೆ ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

 ನವದೆಹಲಿ: ದೇಶದಲ್ಲಿ ಇತ್ತೀಚೆಗೆ ನಡೆದ ಪರೀಕ್ಷಾ ಅಕ್ರಮಗಳು ಹಾಗೂ ವಿವಾದಗಳಿಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಜಿರಳೆ ಜನತಾ ಪಾರ್ಟಿ) ಸಂಸ್ಥಾಪಕ ಅಭಿಜೀತ ದಿಪ್ಕೆ ಅವರು ಜೂನ್ 6 ರಂದು ದೆಹಲಿಯಲ್ಲಿ ಬೃಹತ್ … Continued

ಚಳಿಗಾಲದ ಅಂತ್ಯಕ್ಕೆ ಇಂಧನ ಬೆಲೆ ಕುಸಿತ: ಪೆಟ್ರೋಲಿಯಂ ಸಚಿವ ಪ್ರಧಾನ್‌ ವಿಶ್ವಾಸ

ಇಂಧನ ಬೆಲೆ ಚಳಿಗಾಲದ ಅಂತ್ಯಕ್ಕೆ ಕಡಿಮೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಬೆಲೆಯಲ್ಲಿನ ಹೆಚ್ಚಳ ಗ್ರಾಹಕರ ಮೇಲೆ ವ್ಯಾಪಕ ಪರಿಣಾಮ ಬೀರಿದೆ. ಚಳಿಗಾಲವು ಮುಗಿಯುತ್ತಿದ್ದಂತೆ ಬೆಲೆಗಳು ಸ್ವಲ್ಪ ಕಡಿಮೆಯಾಗುತ್ತವೆ. ಇಂಧನ ಬೆಲೆ ಹೆಚ್ಚಳವು ಅಂತರರಾಷ್ಟ್ರೀಯ ವಿಷಯವಾಗಿದೆ. ಬೇಡಿಕೆಯ ಹೆಚ್ಚಳದಿಂದಾಗಿ ಬೆಲೆ ಹೆಚ್ಚಾಗಿದೆ. ಚಳಿಗಾಲದಲ್ಲಿ ಇದು ಸಂಭವಿಸುತ್ತದೆ ಎಂದು … Continued