ವ್ಯಾಪಕ ಮಳೆ | ಇಂದು ಧಾರವಾಡ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ : ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಇರುವುದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಂಜೆಯಿಂದ ವ್ಯಾಪಕವಾಗಿ ಮಳೆ ಆಗುತ್ತಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ಜೂ.12 ರಂದು ಒಂದು … Continued

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ ; ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಬಣ ಪುನರಾಯ್ಕೆ

ಧಾರವಾಡ: ಇಲ್ಲಿನ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಚುನಾವಣೆಯಲ್ಲಿ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಬಣ ಭರ್ಜರಿ ಗೆಲುವು ಸಾಧಿಸಿದೆ. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ 135 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಒಂದೇ ಬಣದ ಎಲ್ಲ ಅಭ್ಯರ್ಥಿಗಳು … Continued

ಧಾರವಾಡದಲ್ಲೂ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ…!?

ಧಾರವಾಡ : ಶಿವಮೊಗ್ಗ, ಬೀದರ ಬಳಿಕ ಇದೀಗ ಧಾರವಾಡದಲ್ಲಿಯೂ ಜನಿವಾರ ಕತ್ತರಿಸಿ ನಂತರ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿರುವ ಘಟನೆ ನಡೆದಿದೆ ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಹುರಕಡ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಧಾರವಾಡ ನಗರದ ಜೆಎಸ್‌ಎಸ್ (JSS) ಕಾಲೇಜಿನ ವಿದ್ಯಾರ್ಥಿ ನಂದನ್ ಏರಿ ಎಂಬವರು … Continued

ಹುಬ್ಬಳ್ಳಿಯ ಉಣಕಲ್ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಭೇಟಿ…

ಹುಬ್ಬಳ್ಳಿ: ಬಾಲಿವುಡ್ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಐತಿಹಾಸಿಕ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕ ಭೇಟಿ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಶಾಸಕ ಮಹೇಶ ಟೆಂಗಿನಕಾಯಿ ಸಹ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನಕ್ಕ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟ … Continued

ಹಿರಿಯ ಸಾಹಿತಿ, ಬಹು ಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ವಿಧಿವಶ

ಧಾರವಾಡ : ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹು ಭಾಷಾ ಪಂಡಿತ, ಹಿರಿಯ ಸಾಹಿತಿ, ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ (92) ) ಶುಕ್ರವಾರ (ಮಾರ್ಚ್ 14) ನಗರದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933 ಜನವರಿ 6ರಂದು ಜನಿಸಿದರು. … Continued

ಬೆಂಗಳೂರು-ಧಾರವಾಡ ವಂದೇ ಭಾರತ ರೈಲು ಬೆಳಗಾವಿ ವರೆಗೆ ವಿಸ್ತರಣೆ ; ಶೆಟ್ಟರ

ಬೆಳಗಾವಿ : ಬೆಂಗಳೂರು-ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ” ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸಲಾಗಿದ್ದು, ನೂತನ ವೇಳಾ ಪಟ್ಟಿಯಂತೆ ಶೀಘ್ರದಲ್ಲಿ ತನ್ನ ನೂತನ ಸಂಚಾರವನ್ನು ಬೆಳಗಾವಿಯಿಂದ ಆರಂಭಿಸಲಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಈ ಕುರಿತು ಫೆಬ್ರವರಿ 10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೊಂದಿಗೆ, ಕೇಂದ್ರ … Continued

ಕರ್ನಾಟಕ ವಿವಿ ಕನ್ನಡ ಪಠ್ಯದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಆರೋಪ ; ಭುಗಿಲೆದ್ದ ವಿವಾದ

ಧಾರವಾಡ: ಕರ್ನಾಟಕ ವಿಶ್ವ ವಿದ್ಯಾಲಯದ (Karnatak University) ಪಠ್ಯದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ಈಗ ಪಠ್ಯ ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕ ವಿಶ್ವ ವಿದ್ಯಾಲಯದ ಪ್ರಸಾರಂಗ ಮುದ್ರಿಸಿರುವ, ಪದವಿ ಕನ್ನಡ ಪಠ್ಯ ಪುಸ್ತಕದ ಬೆಳಗು -1 ಕೃತಿಯಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟಾಗಿದೆ ಎಂದು ಧಾರವಾಡದ ನ್ಯಾಯವಾದಿ ಅರುಣ ಜೋಶಿ ಆಕ್ಷೇಪಿಸಿದ್ದಾರೆ. ʼʼಬಿಎ, … Continued

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕಿಸಿ ಮತ್ತೊಂದು ಮಹಾನಗರ ಪಾಲಿಕೆ ರಚನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರಸ್ತುತ … Continued

ಶೈಕ್ಷಣಿಕ-ಸಾಂಸ್ಕೃತಿಕ ಚಿಂತಕ ಡಾ. ಎಸ್.ಎಲ್. ಕಾಡದೇವರಮಠ ; ಡಿ.18ರಂದು ಅಭಿನಂದನಾ ಗ್ರಂಥ ಲೋಕಾರ್ಪಣೆ

(ಬುಧವಾರ (೧೮-೧೨-೨೦೨೪ರಂದು) ಸಾಯಂಕಾಲ ೫:೩೦ ಗಂಟೆಗೆ ತುಮಕೂರಿನ ಶ್ರೀ ಸಿದ್ಧಗಂಗಾಮಠದಲ್ಲಿ ಡಾ. ಎಸ್.ಎಲ್. ಕಾಡದೇವರಮಠ ಅವರ ೭೦ನೇ ವರ್ಷದ ಅಂಗವಾಗಿ ಗ್ರಂಥ ಗಾರುಡಿಗ ಅಭಿನಂದನಾ ಗ್ರಂಥ ಲೋಕಾರ್ಪಣೆ ಗೊಳ್ಳಲಿದ್ದು, ತನ್ನಿಮಿತ್ತ ಲೇಖನ) ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಶಿವಶಂಕರ ಲಿಂಗಯ್ಯ ಕಾಡದೇವರಮಠ ತಮ್ಮ ಕಾರ್ಯಕ್ಷೇತ್ರವನ್ನಾಗಿರಿಸಿ ಕೊಂಡಿದ್ದು ತುಮಕೂರನ್ನು. ೭೦ರ ವಯಸ್ಸಿನ (ಜನನ: ನವಂಬರ್‌ … Continued

ಮಳೆ ; ನಾಳೆ (ಜು.27) ಧಾರವಾಡ ಜಿಲ್ಲೆಯ ಶಾಲೆ-ಪಿಯು ಕಾಲೇಜುಗಳಿಗೆ ರಜೆ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಮುಂದುವರೆದ ಪರಿಣಾಮ ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಶನಿವಾರ (ಜು.27)ದ ವರೆಗೆ ರಜೆ ವಿಸ್ತರಿಸಲಾಗಿದೆ‌. ಜುಲೈ 25 ಮತ್ತು 26 ರಂದು ಎರಡು ದಿನ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮಳೆ ಮುಂದುವರೆದ … Continued