ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ; ಶ್ರೀಗಳು ಹೇಳಿದ್ದೇನು..?

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುವಂತೆ ಭಕ್ತರು ಒತ್ತಾಯಿಸಿದ್ದು, ಶೀಘ್ರದಲ್ಲಿ I ಈ ಬಗ್ಗೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು. ಧಾರವಾಡದಲ್ಲಿ ಮಂಗಳವಾರ ನಡೆದ ಭಕ್ತರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಾನೇ ಸ್ಪರ್ಧೆ ಮಾಡುವಂತೆ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ, … Continued

ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

ಹುಬ್ಬಳ್ಳಿ: ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ಮಠಾಧೀಶರು ಮಾರ್ಚ್‌ 31ರ ಒಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಿ ಎಲ್ಲ ಸಮುದಾಯದವರೂ ಒಪ್ಪುವ ಸೂಕ್ತ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿಯ ಹೈಕಮಾಂಡ್‍ಗೆ ಗಡುವು ನೀಡಿದ್ದಾರೆ. ಹುಬ್ಬಳ್ಳಿಯ ಮೂರುಸಾವಿರಮಠದಲ್ಲಿ … Continued

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ (96 ವರ್ಷ) ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ಮೂಲತಃ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ … Continued

ಧಾರವಾಡ : ಅಳು ನಿಲ್ಲಿಸದೆ ನಿದ್ದೆ ಹಾಳು ಮಾಡಿತೆಂದು 1 ವರ್ಷದ ಮಗುವನ್ನು ಗೋಡೆಗೆ ಎಸೆದು ಸಾಯಿಸಿದ ತಂದೆ…!

ಧಾರವಾಡ: ಮಗು ಅಳುತ್ತದೆ ಎಂಬ ಕಾರಣಕ್ಕೆ ತಂದೆಯೊಬ್ಬ ಮಗುವನ್ನು ನೆಲಕ್ಕೆ ಬಡಿದು ಕೊಂದ ಹೃದಯ ವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಯಾದವಾಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಗು ಶ್ರೇಯಾ(1) ಶಂಭುಲಿಂಗಯ್ಯ ಹಾಗೂ ಸವಿತಾ ದಂಪತಿಯ ಪುತ್ರಿ. ಶಂಭುಲಿಂಗಯ್ಯ ಎಂಬಾತ ಕುಡಿತದ ದಾಸನಾಗಿದ್ದು, ಈ ಕಾರಣಕ್ಕೆ ನಿತ್ಯವೂ ದಂಪತಿಯ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈಗ … Continued

ಎರಡು ಕಾರು, ಲಾರಿ ಮಧ್ಯೆ ಸರಣಿ ಅಪಘಾತ : ನಾಲ್ವರು ಸಾವು, ನಾಲ್ವರಿಗೆ ಗಾಯ

ಹುಬ್ಬಳ್ಳಿ: ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ (Dharwad) ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಜನವರಿ 6) ಬೆಳಗಿನ ಜಾವ ಸಂಭವಿಸಿದೆ. ಘಟನೆಯಲ್ಲಿ ಹಾಸನದ ‌ಮೂಲದ ಮೂವರು, ಬೆಂಗಳೂರಿನ ಓರ್ವ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಕಾರು ಹಾಗೂ … Continued

ಬಾಲ್ ಕ್ಯಾಚ್​ ಹಿಡಿಯುವಾಗ ವಿದ್ಯುತ್ ಸ್ಪರ್ಶ: ಬಾಲಕ ಸಾವು

ಧಾರವಾಡ : ಗೆಳೆಯರೊಂದಿಗೆ ಸೇರಿ ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ಎ‌ಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶ್ರೇಯಸ್ ಶಿನ್ನೂರ(16 ವರ್ಷ) ಎಂದು ಗುರುತಿಸಲಾಗಿದೆ. ಸ್ನೇಹಿತನ ಪ್ರಾಣವನ್ನು ಉಳಿಸಲು ಯತ್ನಿಸಿದ ಮತ್ತೋರ್ವ ಬಾಲಕನಿಗೆ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೇಯಸ್‌ ಶುಕ್ರವಾರ … Continued

ಧಾರವಾಡ: ಖ್ಯಾತ ಹಿಂದೂಸ್ತಾನೀ ಗಾಯಕಿ ಡಾ. ಸುಲಭಾ ದತ್ತ ನೀರಲಗಿ ಇನ್ನಿಲ್ಲ

ಧಾರವಾಡ : ದಿ.ಗಂಗೂಬಾಯಿ ಹಾನಗಲ್ ಅವರ ಹಿರಿಯ ಶಿಷ್ಯೆ ಹಾಗೂ ಧಾರವಾಡದ ಪ್ರಸಿದ್ಧ ಹಿಂದೂಸ್ತಾನೀ ಸಂಗೀತಗಾರರಾದ ಡಾ. ಸುಲಭಾ ದತ್ತ ನೀರಲಗಿ (೬೮) ಅವರು ಶನಿವಾರ (ನವೆಂಬರ್‌ ೧೮) ನಿಧನರಾಗಿದ್ದಾರೆ. ಧಾರವಾಡದ ರಜತಗಿರಿ ನಿವಾಸಿಯಾಗಿದ್ದ ಡಾ. ಸುಲಭಾ ದತ್ತ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರು, ಪತಿ, ಇಬ್ಬರು ಪುತ್ರಿಯರು, ಅಪಾರ ಬಂಧು ಬಳಗ … Continued

ಡಾ.ಡಿ.ಸಿ ಪಾವಟೆ ಅತ್ಯುತ್ತಮ ಎನ್‌ ಎಸ್‌ ಎಸ್‌ ಸ್ವಯಂಸೇವಕ ಪ್ರಶಸ್ತಿಗೆ ಪ್ರಜ್ವಲ್‌ ಆಯ್ಕೆ

ಧಾರವಾಡ : ಧಾರವಾಡದ ಕರ್ನಾಟಕ ಕಲಾ ಕಾಲೇಜಿನ ಬಿ.ಎ.ಅಂತಿಮ ವರ್ಷದ ವಿದ್ಯಾರ್ಥಿ ಪ್ರಜ್ವಲ್‌ ವಿ.ಟಿ.ಅವರು “2021-2022 ನೇ ಸಾಲಿನ ವಿಶ್ವವಿದ್ಯಾನಿಲಯ ಮಟ್ಟದ ಡಾ.ಡಿ.ಸಿ ಪಾವಟೆ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ (NSS) ಸ್ವಯಂಸೇವಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೂಲತಃ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಪ್ರಜ್ವಲ್‌ ಪದವಿ ಪೂರ್ವ ಕಾಲೇಜಿನಲ್ಲಿದ್ದಾಗಲೇರಾಷ್ಟ್ರೀಯ ಸೇವಾ ಯೋಜನೆ … Continued

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅನುಮತಿ

ಹುಬ್ಬಳ್ಳಿ : ಗಣೇಶನ ಹಬ್ಬದ ನಿಮಿತ್ತ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರು ಶುಕ್ರವಾರ ರಾತ್ರಿ ಈ ಕುರಿತು ಆದೇಶ ಮಾಡಿದರು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಎರಡು ದಿನದಿಂದ … Continued

ಧಾರವಾಡ: ಟ್ಯಾಂಕರ್​ನಿಂದ ಅನಿಲ ಸೋರಿಕೆ: ಧಾರವಾಡ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಬಂದ್‌, ವಿದ್ಯುತ್ ಸಂಪೂರ್ಣ ಕಡಿತ

ಧಾರವಾಡ: ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಎಲ್​ಪಿಜಿ ಟ್ಯಾಂಕರಿನಿಂದ ಗ್ಯಾಸ್ ಸೋರಿಕೆ ಆಗುತ್ತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪೂರ್ಣ ಕಡಿತಗೊಳಿಸಿದ್ದಲ್ಲದೆ ಜನರ ಓಡಾಟಕ್ಕೂ ನಿರ್ಬಂಧ ವಿಧಿಸಲಾಗಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಬೆಳಗಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಗ್ಯಾಸ್‌ ಟ್ಯಾಂಕರ್‌ ಬೇಲೂರು ಬಳಿಯ ಅಂಡರ್​ಪಾಸ್​ನಲ್ಲಿ ಸಿಲುಕಿಕೊಂಡ ನಂತರ ಗ್ಯಾಸ್‌ ಸೋರಿಕೆಯ ಭೀತಿ ಎದುರಾಗಿದೆ. ಲಾರಿಯನ್ನು ಹೈಕೋರ್ಟ್ ಬಳಿಯ … Continued