ಧಾರವಾಡ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಸಾವು

ಧಾರವಾಡ: ಕಾರು ಪಲ್ಟಿಯಾಗಿ ಇಬ್ಬರು ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ವಿನಯ ಹಿರೇಮಠ (24) ಹಾಗೂ ಸಂದೀಪ (29) ಎಂದು ಗುರುತಿಸಲಾಗಿದೆ. ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ಇವರು ಊಟ ಮಾಡಿಕೊಂಡು ವಾಪಸ್‌ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಓರ್ವ ಸ್ಥಳದಲ್ಲೇ … Continued

ಕಲಘಟಗಿ: ನೇಣು ಬಿಗಿದುಕೊಂಡು ಸಹೋದರಿಯರ ಆತ್ಮಹತ್ಯೆ

ಧಾರವಾಡ: ತಾಯಿ ಮನೆಯಲ್ಲಿ ಇಲ್ಲದಿರುವಾಗ ಸಹೋದರಿಯರಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು 19 ವರ್ಷದ ಭೂಮಿಕಾ ಹಡಪದ ಹಾಗೂ 17 ವರ್ಷದ ಕಾವೇರಿ ಹಡಪದ ಎಂದು ಗುರುತಿಸಲಾಗಿದೆ. ಕಲಘಟಗಿಯ ಬೆಂಡಿಗೇರಿ ಓಣಿಯ ಬಾಡಿಗೆ ಮನೆಯಲ್ಲಿ ಕುಟುಂಬ ವಾಸವಾಗಿದ್ದು ಇಂದು, ಭಾನುವಾರ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ … Continued

ಧಾರವಾಡ: ಮೇ 23ರಂದು ಟಾಟಾ ಮೋಟರ್ಸ್‌ ಕ್ಯಾಂಪಸ್ ಸಂದರ್ಶನ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ನಲ್ಲಿ ಧಾರವಾಡದ ಬೇಲೂರಿನ ಟಾಟಾ ಮೋಟರ್ಸ್‌ ಅವರಿಂದ ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗಾಗಿ ಮೇ 23ರಂದು ಬೆಳಿಗ್ಗೆ 9:30ಕ್ಕೆ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ. ಐ.ಟಿ.ಐ ಡಿಸೈಲ್ ಮೆಕಾನಿಕ್, ಮೆಕಾನಿಕ್ ಮೊಟಾರ್ ವೆಹಿಕಲ್, ಇಲೆಕ್ಟ್ರೀಶಿಯನ್, ವೆಲ್ಡರ್, ಫಿಟ್ಟರ್, ಇಲೆಕ್ಟ್ರಾನಿಕ್ ಮೆಕಾನಿಕ್ ಉತ್ತೀರ್ಣರಾದ, ಎಸ್.ಎಸ್.ಎಲ್.ಸಿಯಲ್ಲಿ 50% ಪ್ರತಿಶತ ಹಾಗೂ ಐ.ಟಿ.ಐ ನಲ್ಲಿ … Continued

ಜೆಇಇ ಮೇನ್ಸ್‌ ಪರೀಕ್ಷೆ: ಜೆ.ಎಸ್.ಎಸ್. ಆರ್.ಎಸ್.ಹುಕ್ಕೇರಿಕರ ಪಿಯು ಕಾಲೇಜ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಧಾರವಾಡ: ಧಾರವಾಡ ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಸಂಸ್ಥೆಯ ಆರ್.ಎಸ್. ಹುಕ್ಕೇರಿಕರ ಪದವಿಪೂರ್ವ ಮಹಾವಿದ್ಯಾಲಯದ 2022-2023ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜೆ.ಇ.ಇ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಜೆ.ಇ.ಇ ಪರೀಕ್ಷೆಯಲ್ಲಿ ಹಾಜರಾದ 08 (ಎಂಟು) ವಿದ್ಯಾರ್ಥಿಗಳು ಜೆ.ಇ.ಇ. ಬಿ.ಇ/ಬಿ.ಟೆಕ್ ವಿಭಾಗದ ಮೇನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು, ಅಡ್ವಾನ್ಸಡ್‌ ಪರೀಕ್ಷೆ ಬರೆಯುವ ಅರ್ಹತೆ … Continued

ದ್ವಿತೀಯ ಪಿಯುಸಿ ಪರೀಕ್ಷೆ : ಧಾರವಾಡದ ಅರ್ಜುನ ಕಾಲೇಜು ನೂರಕ್ಕೆ ೧೦೦ ಫಲಿತಾಂಶ

ಧಾರವಾಡ: ಧಾರವಾಡದ ಅರ್ಜುನ(ಶಾಂತಿನಿಕೇತನ) ವಿಜ್ಞಾನ ಪದವಿ-ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಕಾಲೇಜು ನೂರಕ್ಕೆ ೧೦೦ ಫಲಿತಾಂಶ ಪಡೆದಿದೆ. ವಿದ್ಯಾರ್ಥಿನಿ ಪ್ರಜಾ ನಾಯಕ ಅವರು ೬೦೦ ಕ್ಕೆ ೫೭೬ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಾತ್ವಿಕ ಹೆಗಡೆ (೫೭೫ ಅಂಕಗಳು), ಕಿರಣಕುಮಾರ ಮಡಿವಾಳ (೫೭೦ ಅಂಕಗಳು), ಸವಿತ್ರು … Continued

ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಇಲ್ಲ ಅನುಮತಿ : ಅರ್ಜಿ ವಜಾಗೊಳಿಸಿದ ಹೈಕೋರ್ಟ್​​

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಕಾಂಗ್ರೆಸ್​ ನಾಯಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ತಾನು ಚುನಾವಣೆಗೆ ಸ್ಪರ್ಧಿಸಿದ್ದರಿಂದ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ವಿನಯ​ ಕುಲಕರ್ಣಿ ಪರ ವಕೀಲರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ್ ಕುಲಕರ್ಣಿ 30 … Continued

ಧಾರವಾಡ: ಚಾಕುವಿನಿಂದ ಇರಿದು ಗ್ರಾಪಂ ಉಪಾಧ್ಯಕ್ಷನ ಹತ್ಯೆ

ಧಾರವಾಡ: ಗ್ರಾಮದ ಜಾತ್ರೆಯಲ್ಲಿ ಪ್ರಸಾದ ವಿತರಣೆ ವಿಷಯಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಬಿಜೆಪಿ ಯುವ ಮುಖಂಡ ಹಾಗೂ ಕೋಟೂರ ಗ್ರಾಪಂ ಉಪಾಧ್ಯಕ್ಷ ಪ್ರವೀಣ ಕಮ್ಮಾರ (36) ಎಂಬವರನ್ನು ಹತ್ಯೆ ಮಾಡಿದ ಘಟನೆ ತಾಲೂಕಿನ ಕೋಟೂರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಗ್ರಾಮದ ಉಡಚಮ್ಮ ದೇವಿ ಜಾತ್ರೆ ಸಂದರ್ಭದಲ್ಲಿ ಪ್ರಸಾದ ವಿತರಣೆ ವಿಷಯಕ್ಕೆ ಸಂಬಂಧಿಸಿದಂತೆ … Continued

ಭೀಕರ ರಸ್ತೆ ಅಪಘಾತ: ಬಾಲಕ ಸೇರಿ ಐವರು ಸ್ಥಳದಲ್ಲೇ ಸಾವು

ಧಾರವಾಡ: ಕಾರು- ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರ್‌ನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಮಂಜುನಾಥ ಮುದ್ದೋಜಿ ಇತ್ತೀಚೆಗೆ ಭಾರತೀಯ ಸೇನೆಗೆ ನೇಮಕಗೊಂಡಿದ್ದರು. ಅವರು ಹೈದ್ರಾಬಾದ್‌ಗೆ ತರಬೇತಿ ಕೇಂದ್ರಕ್ಕೆ … Continued

ಐದು ವರ್ಷಗಳಿಗೊಮ್ಮೆ ನಡೆಯುವ ಬಮ್ಮಿಗಟ್ಟಿ ಗ್ರಾಮದೇವಿಯರ ಜಾತ್ರೆಗೆ ಚಾಲನೆ

ಕಲಘಟಗಿ : ಐದು ವರ್ಷಗಳಿಗೊಮ್ಮೆ ನಡೆಯುವ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವಕ್ಕೆ ಬುಧವಾರ ವಿಧ್ಯುಕ್ತ ಚಾಲನೆ ನೀಡಲಾಯಿತು. ಕಲಘಟಗಿಯ ಹನ್ನೆರಡು ಮಠದ ರೇವಣಸಿದ್ಧೇಶ್ವರ ಶಿವಾಚಾರ್ಯರ ಸಮ್ಮುಖದಲ್ಲಿ ಆಲದಕಟ್ಟಿ ಗ್ರಾಮಸ್ಥರಿಂದ ಗ್ರಾಮದೇವಿಯರಿಗೆ ತವರು‌ ಮನೆಯ ಉಡಿ ತುಂಬುವ ಮೂಲಕ ಜಾತ್ರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಬಮ್ಮಿಗಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಉಡಿ … Continued

ಧಾರವಾಡ: ವೇತನಕ್ಕಾಗಿ ಮೊಬೈಲ್‌ ಟವರ್‌ ಏರಿದ ಜಲಮಂಡಳಿ ನೌಕರ…!

ಧಾರವಾಡ: ಎಂಟು ತಿಂಗಳುಗಳಿಂದ ವೇತನವಿಲ್ಲದ ಜಲಮಂಡಳಿ ಕಾರ್ಮಿಕರು ವೇತನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ, ಆಡಳಿತದಿಂದ ಸರಿಯಾದ ಸ್ಪಂದನೆ ಸಿಗದ ಕಾರಣ ಕಾರ್ಮಿಕನೊಬ್ಬ ಧಾರವಾಡದ ಜುಬ್ಲಿ ವೃತ್ತದಲ್ಲಿರುವ ಮೊಬೈಲ್ ಟವರ್ ಏರಿ ವಿನೂತನವಾಗಿ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಆದರೆ ಉಳಿದವರು ಗಾಬರಿಯಾಗುವಂತೆ ಮಾಡಿದ್ದಾನೆ. ನೀರು ಸರಬರಾಜು ನೌಕರರ ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ … Continued