ಧಾರವಾಡ ಅಭಿನಯ ಭಾರತಿ ವಿನೂತನ ಪ್ರಯತ್ನ: ರಂಗಭೂಮಿ ದಿನಾಚರಣೆ ನಿಮಿತ್ತ 24 ತಾಸುಗಳ ನಿರಂತರ ಫೇಸ್ಬುಕ್ ಲೈವ್‌ ಶೋ..!

ಧಾರವಾಡ: ಕರ್ನಾಟಕದ ಪ್ರತಿಷ್ಠಿತ ರಂಗಸಂಸ್ಥೆಗಳಲ್ಲಿ ಒಂದಾದ ಅಭಿನಯ ಭಾರತಿ ಪ್ರತಿವರ್ಷದಂತೆ ಈ ಬಾರಿಯೂ ವಿಶ್ವ ರಂಗಭೂಮಿ ದಿನಾಚರಣೆಯನ್ನು ಮಾರ್ಚ್ 27ರಂದು ಭಾನುವಾರ ಬೆಳಿಗ್ಗೆ 10:30ಕ್ಕೆ ಧಾರವಾಡ ದ ರಂಗಾಯಣ ಆವರಣದಲ್ಲಿರುವ ಸಂಸ್ಕೃತಿ ಸಮುಚ್ಚಯ ಸಭಾಗೃಹದಲ್ಲಿ ಆಚರಿಸಲಿದೆ. ಈ ಬಾರಿ ಧಾರವಾಡದ ರಂಗಾಯಣವೂ ಅಭಿನಯ ಭಾರತೀಯಜೊತೆ ಕೈಗೂಡಿಸಿದ್ದು ಸಂಯುಕ್ತ ಆಶ್ರಯದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಹಮ್ಮಿಕೊಂಡಿದೆ ನಿರಂತರ 24 … Continued

ಸ್ವಾಸ್ಥ್ಯ ಸಮಾಜಕ್ಕೆ ಲಿಂಗ ಸಮಾನತೆ ಅವಶ್ಯ: ವಾಣಿಶ್ರೀ ಪ್ರಸಾದ

ಧಾರವಾಡ: ಸಮಾಜದಲ್ಲಿ ಮಹಿಳೆಯರು, ಪುರುಷರು ಪ್ರತಿಯೊಂದರಲ್ಲೂ ಸರಿ ಸಮಾನರು. ಇದರಲ್ಲಿ ಯಾವುದೇ ಭೇದ-ಭಾವ ಇರಬಾರದು ಎಂದು ಧಾರವಾಡದ ವಾಣಿಶ್ರೀ ಅಜಿತ ಪ್ರಸಾದ ಹೇಳಿದರು. ವಿದ್ಯಾಗಿರಿಯ ಜೆ.ಎಸ್.ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಮಹಿಳೆಯರಿಗೆ ವಿದ್ಯಾಭ್ಯಾಸ, ಉದ್ಯೋಗಾವಕಾಶ … Continued

ಶೀಘ್ರವೇ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ : ಸಚಿವ ಶಿವರಾಮ ಹೆಬ್ಬಾರ

ಧಾರವಾಡ : ವಿವಿಧ ರೀತಿಯ ವಾಹನಗಳನ್ನು ದಿನನಿತ್ಯ ಓಡಿಸುವ ಚಾಲಕರು, ಕ್ಲೀನರ್‌ಗಳ ಬದುಕು ರಕ್ಷಿಸಲು ಮತ್ತು ಅವರ ಮಕ್ಕಳು, ಕುಟುಂಬ ಸದಸ್ಯರಿಗೆ ನೆರವಾಗಲು ಕಾರ್ಮಿಕ ಕಲ್ಯಾಣ ಮಂಡಳಿಯಂತೆ ರಾಜ್ಯದಲ್ಲಿ ಶೀಘ್ರವಾಗಿ ಚಾಲಕರ ಕಲ್ಯಾಣ ಮಂಡಳಿ (ಡ್ರೈವರ್ ಬೋರ್ಡ್) ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾ ಹೇಳಿದ್ದಾರೆ. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗುರುವಾರ … Continued

ವ್ರತ-ಧರ್ಮಾಚರಣೆ ಇಂದಿನ ಅವಶ್ಯ : ಸೋಂದಾ ಜೈನ ಮಠದ ಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ

ಧಾರವಾಡ: ಅಹಿಂಸೆ, ಅಪರಿಗ್ರಹ ಇಂದಿನ ಅವಶ್ಯಕತೆಗಳಾಗಿವೆ. ಹಿಂಸೆಯಿಂದ ಇಡೀ ವಿಶ್ವವೇ ನಲುಗಿ ಹೋಗಿದೆ. ವ್ರತ-ಧರ್ಮಾಚರಣೆಯಿಂದ ಮನಸ್ಸಿಗೆ ಶಾಂತಿ ಪ್ರಾಪ್ತಿಯಾಗಿ ನಮ್ಮಲ್ಲಿರುವ ಕೆಟ್ಟ ವಿಚಾರಗಳನ್ನು ದೂರವಿಡಬಹುದು. ಆಗ ಸಮಾಜದಲ್ಲಿ ಶಾಂತಿ, ಸಾಮರಸ್ಯ ಉಂಟಾಗುತ್ತದೆ ಎಂದು ಸೋಂದಾ ಜೈನ ಮಠದ ಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಹೇಳಿದರು. ಧಾರವಾಡ ನಗರದ ಸನ್ಮತಿ ಜಿನ ಮಂದಿರದಲ್ಲಿ ನಡೆದ ನೂತನ ಏಕಶಿಲಾ … Continued

ಧಾರವಾಡ: ಕೂರಿಗೆ ತಜ್ಞ ಅಬ್ದುಲ್ ಖಾದರ್ ನಡಕಟ್ಟಿನರಿಗೆ ಪದ್ಮಶ್ರೀ ಪುರಸ್ಕಾರದ ಗೌರವ

ಧಾರವಾಡ: ಈ ಬಾರಿ ಧಾರವಾಡ ಜಿಲ್ಲೆಯ ಕೂರಿಗೆ ತಜ್ಞ ಅಬ್ದುಲ್ ಖಾದರ್ ನಡಕಟ್ಟಿನ (69 ವರ್ಷ) ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ನಿವಾಸಿ ಅಬ್ದುಲ್ ಖಾದರ್ ನಡಕಟ್ಟಿನ ಅವರು ಬಿತ್ತನೆ ಕೂರಿಗೆ ಅನ್ವೇಷಣೆ ಮಾಡಿದ್ದು, ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿದೆ. ಅವರು ಬಿತ್ತನೆ ಸಮಸ್ಯೆ ಕಂಡುಕೊಂಡು ಅನುಕೂಲಕರ ಕೂರಿಗೆ ಅಭಿವೃದ್ಧಿಪಡಿಸಿದ್ದಾರೆ. ಅಲ್ಲದೇ ವಿವಿಧ … Continued

ಕವಿ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ; ಚಿಕಿತ್ಸೆ ಮುಂದುವರಿಕೆ

ಧಾರವಾಡ: ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿಗಳಾದ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಆಸ್ಪತ್ರೆಯಲ್ಲಿ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾಡಳಿತ ಎಸ್.ಡಿ.ಎಮ್. ಆಸ್ಪತ್ರೆಯ ಮ್ಯಾನೆಜ್‌ಮೆಂಟ್‌ ಜೊತೆ ನಿರಂತರ ಸಂಪರ್ಕದಲ್ಲಿದ್ದು ನಾಡೋಜ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದ ಅಗತ್ಯ ಕ್ರಮವಹಿಸಿದೆ … Continued

ಧಾರವಾಡ: ಜೆಎಸ್ಎಸ್ ಕನ್ನಡ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಕರಕುಶಲ ವಸ್ತುಗಳ ಪ್ರದರ್ಶನ

ಧಾರವಾಡ: ೨೦೨೨ನೇ ಹೊಸವರ್ಷದ ಪ್ರಯುಕ್ತ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಕರಕುಶಲ (ಕ್ರಾಫ್ಟ್‌) ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಮಕ್ಕಳು ವಿವಿಧ ವಸ್ತುಗಳ ಮಾದರಿಗಳನ್ನು ಕಡಿಮೆ ಖರ್ಚಿನಲ್ಲಿ ಮಾಡಿ ಪ್ರದರ್ಶಿಸಿದರು. ಇದು ಮಕ್ಕಳ ಪ್ರತಿಭೆ ಬಿಂಬಿಸುವ ಪ್ರದರ್ಶನವಾಗಿತ್ತು. ಈ ಕಾರ್ಯಕ್ರಮವನ್ನು ಜೆ.ಎಸ್.ಎಸ್ ಸಂಸ್ಥೆಯ ಐ.ಟಿ.ಐ ಕಾಲೇಜಿನ ಪ್ರಾಚಾರ್ಯರಾದ ಮಹಾವೀರ ಉಪಾಧ್ಯೆಯವರು ಉದ್ಘಾಟಿಸಿದರು. … Continued

ದಿ. ಆರ್.ಎಸ್ ಹುಕ್ಕೇರಿಕರ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಧಾರವಾಡ: ಕಾಲಕಾಲಕ್ಕೆ ಹಲವಾರು ಪ್ರಾತಸ್ಮರಣಿಯರು ಜನ್ಮತಾಳುತ್ತಾರೆ. ಅವರ ಆಗಮನದಿಂದ ದೇಶ ರಾಜ್ಯ ಸುಭಿಕ್ಷೆ ಕಾಣುತ್ತದೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಜನಿಸಿದ ರಾಮರಾವ್ ಹುಕ್ಕೇರಿಕರವರು ಅಂತಹ ಮಹನೀಯರಲ್ಲಿ ಒಬ್ಬರು. ಅವರು ಅಂದು ಸ್ಥಾಪಿಸಿದ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ಇಂದು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಾದದಿಂದ ಪ್ರತಿವರ್ಷ ಸಾವಿರಾರು ಮಕ್ಕಳ ವಿದ್ಯಾರ್ಜನೆಗೆ ದಾರಿಯಾಗಿದೆ ಎಂದು ಜೆ.ಎಸ್.ಎಸ್ ಸಂಸ್ಥೆ … Continued

ಧಾರವಾಡ: ಬಿಜೆಪಿ ನಾಯಕ ರಾಜೇಂದ್ರ ಗೋಖಲೆ ನಿಧನ

ಧಾರವಾಡ: ಬಿಜೆಪಿ ಮುಖಂಡ, ರಾಮನಗರ ನಿವಾಸಿ ರಾಜೇಂದ್ರ ಗೋಖಲೆ (63) ಭಾನುವಾರ ಪುಣೆಯಲ್ಲಿ ನಿಧನರಾದರು. ಕಳೆದ ಮೂರು ತಿಂಗಳುಗಳಿಂದ ಅವರು ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಪುಣೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಬಾಲ್ಯದಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ, ಬಿಜೆಪಿ … Continued

ಧಾರವಾಡ ಜೈನ ಮಿಲನದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ

ಧಾರವಾಡ: ಧಾರವಾಡ ಜೈನ ಮಿಲನ ವತಿಯಿಂದ ಧಾರವಾಡ ಜಿಲ್ಲೆಯಲ್ಲಿ ಓದುತ್ತಿರುವ ಜೈನ, ಬಡ ಪ್ರತಿಭಾವಂತ ಪ್ರಥಮ ವರ್ಷದ ಪಿ.ಯು.ಸಿ, ಪ್ಯಾರಾಮೆಡಿಕಲ್, ಐ.ಟಿ.ಐ, ಡಿಪ್ಲೋಮಾ, ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಂಪರ್ಕ ಸಂಖ್ಯೆ, ವಿಳಾಸ, ಇತ್ಯಾದಿ ವಿವರಗಳನ್ನು ನಮೂದಿಸಿದ ವಿನಂತಿ ಅರ್ಜಿಯೊಂದಿಗೆ, ಪ್ರವೇಶ ಶುಲ್ಕ ಪಾವತಿಸಿದ ರಶೀದಿ, ಜಾತಿ, ಆದಾಯ ಪ್ರಮಾಣ … Continued