ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಸೂಚನೆ: ದಿನೇಶ ಗುಂಡೂರಾವ್

ಬೆಂಗಳೂರು: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಪತಂಜಲಿ … Continued

ಬಿಜೆಪಿ ಶಾಸಕ ಯತ್ನಾಳ ವಿರುದ್ಧ ಸಚಿವ ದಿನೇಶ ಗುಂಡೂರಾವ್‌ ಪತ್ನಿ ದೂರು

ಬೆಂಗಳೂರು : ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ’ ಎಂಬ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಹೇಳಿಕೆ ವಿರುದ್ಧ ಈಗ ಸಚಿವ ದಿನೇಶ ಗುಂಡೂರಾವ್‌ ಅವರ ಪತ್ನಿ ಟಬು ಗುಂಡೂರಾವ್ ದೂರು ದಾಖಲಿಸಿದ್ದಾರೆ. ಯತ್ನಾಳರ ಹೇಳಿಕೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಸಂಜಯ ನಗರ ಪೊಲೀಸ್ ಠಾಣೆಗೆ … Continued

ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದೂರು ದಾಖಲು

ಬೆಂಗಳೂರು: ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸಚಿವ ದಿನೇಶ ಗುಂಡೂರಾವ್ ಕುಟುಂಬದವರನ್ನು ಅವಮಾನಿಸಿರುವ ಶಾಸಕ ಯತ್ನಾಳ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶೇಷಾದ್ರಿಪುರ ಪೊಲೀಸ್ … Continued

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿಲ್ಲ : ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಬೆಂಗಳೂರಿನ ನಗರತಪೇಟೆಯಲ್ಲಿ ಲೌಡ್‌ ಸ್ಪೀಕರಿನಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದ್ದು, ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ ಎಂದು ತಿಳಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. … Continued

ಕರ್ನಾಟಕದಲ್ಲಿ ಕಲರ್‌ ಕಾಟನ್ ಕ್ಯಾಂಡಿ ನಿಷೇಧ : ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ ; ನಿಯಮ ಮೀರಿದ್ರೆ ಜೈಲು-ದಂಡ

ಬೆಂಗಳೂರು : ರಾಜ್ಯದಲ್ಲಿ ಕಲ‌ರ್ ಕಾಟನ್ ಕ್ಯಾಂಡಿ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಒಂದು ವೇಳೆ ಕೃತಕ ಬಣ್ಣದ ಕಾಟನ್ ಕ್ಯಾಂಡಿ ಮಾರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಣ್ಣ ಬಳಸದೇ ಇರುವ ಕಾಟನ್ ಕ್ಯಾಂಡಿ ಮಾರಬಹುದು ಎಂದು … Continued

ರಾಜ್ಯದಲ್ಲಿ 190 ಅಗತ್ಯ ಔಷಧಿಗಳ ದಾಸ್ತಾನು ಇಲ್ಲ: ಆರೋಗ್ಯ ಸಚಿವ ಗುಂಡೂರಾವ್

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾಗುವ 410 ಅಗತ್ಯ ಔಷಧಗಳ ಪೈಕಿ 190 ಔಷಧಗಳ ದಾಸ್ತಾನು ಇಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಸೋಮವಾರ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳು ಲಭ್ಯವಾಗದೆ ಬಡ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಕುರಿತು ವಿಧಾನ ಪರಿಷತ್‌ ಸದಸ್ಯ ಎಚ್‌.ಎಸ್‌. ಗೋಪಿನಾಥ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಾವು … Continued

ಮಂಗನ ಕಾಯಿಲೆ ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ : ದಿನೇಶ ಗುಂಡೂರಾವ್‌

ಉಡುಪಿ : ಮಂಗನ ಕಾಯಿಲೆಗೆ ಲಸಿಕೆ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದರು. ಐಸಿಎಂಆರ್ ನವರು ವ್ಯಾಕ್ಸಿನ್ ತಯಾರಿಕೆಗೆ … Continued

ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ : ದಿನೇಶ ಗುಂಡೂರಾವ್

ಬೆಂಗಳೂರು: ಕೋವಿಡ್ ಸೋಂಕಿಗೆ ಒಳಗಾದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ (ಮನೆ ಪ್ರತ್ಯೇಕತೆ)ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ನಿಟ್ಟಿನಲ್ಲಿ ಸಚಿವ ದಿನೇಶ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮದವರ … Continued

ಕೇರಳದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ : ಕರ್ನಾಟಕದ ಆಸ್ಪತ್ರೆಗಳ ಪೂರ್ವ ಸಿದ್ಧತೆ ಪರಿಶೀಲನೆ

ಬೆಂಗಳೂರು: ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ವರದಿಗಳಿಂದ ಎಚ್ಚೆತ್ತಿಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಲು ನಿರ್ಧರಿಸಿದೆ. ಮಂಗಳವಾರ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಸರ್ಕಾರ ಕರೆದಿದೆ. ಶನಿವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮದ ಮೂಲಕ ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಸಭೆಯ ನಂತರ ಮಾಧ್ಯಮದವರ … Continued