ವರದಾ-ಬೇಡ್ತಿ ನದಿ ಜೋಡಣೆ ಯೋಜನೆ ಡಿಪಿಆರ್‌ ಶೀಘ್ರ ಸಿದ್ಧಪಡಿಸಲು ಒತ್ತಾಯಿಸಿ ಸಿಎಂಗೆ ಬೊಮ್ಮಾಯಿ ಪತ್ರ

ಬೆಂಗಳೂರು: ವರದಾ-ಬೆಡ್ತಿ ನದಿ ಜೋಡಣೆ ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್)ಯನ್ನು ಶೀಘ್ರವಾಗಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಅವರನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಿಗೆ ಪತ್ರ ಬರೆದಿರುವ … Continued

ಫಾರಂ-7 ವಿವಾದ : ನಕಲಿ ಆಕ್ಷೇಪಣೆ ಸಲ್ಲಿಸಿದವರ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗದ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR) ಪ್ರಕ್ರಿಯೆಯ ವೇಳೆ ಮತದಾರರ ಹೆಸರನ್ನು ಸಾಮೂಹಿಕವಾಗಿ ಅಳಿಸಲು ನಕಲಿ ಆಕ್ಷೇಪಣೆಗಳನ್ನು ಸಲ್ಲಿಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ (EC) ಆದೇಶಿಸಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ “ಚುನಾವಣಾ ವಂಚನೆ” ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗುರುವಾರ … Continued

ಡಿಕೆ ಶಿವಕುಮಾರ ಸರ್ಕಾರದ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribes Development Corporation)ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿರಂತರವಾಗಿ ನಡೆಸುತ್ತಿರುವ ರಾಜಕೀಯ ದಾಳಿಯ ನಡುವೆಯೇ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಜೆ ಡಿ.ಕೆ. ಶಿವಕುಮಾರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಘೋಷಿಸುವ ವೇಳೆ ಅವರು ಕಣ್ಣೀರು ಹಾಕಿದ್ದಾರೆ. … Continued

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಇಬ್ಬರಿಗೆ ಖಾತೆ ಬದಲು; ಯಾರಿಗೆ ಯಾವ ಖಾತೆ ? ಇಲ್ಲಿದೆ ವಿವರ

ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ ಸಂಪುಟದ ಮಂತ್ರಿಗಳಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಆಗಸ್ಟ್ 3ರಂದು ಪ್ರಮಾಣ ವಚನ ಸ್ವೀಕರಿಸಿದ 19 ನೂತನ ಸಚಿವರಿಗೆ ಖಾತೆ (Portfolios) ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ರಾಮಲಿಂಗಾರೆಡ್ಡಿ ಹಾಗೂ ಮುನಿಯಪ್ಪನವರ ಖಾತೆಗಳನ್ನ ಬದಲಾವಣೆ ಮಾಡಲಾಗಿದೆ. ಪ್ರಮುಖವಾಗಿ … Continued

ಸಚಿವ ಸಂಪುಟ ವಿಸ್ತರಣೆ ; ಕೊನೆ ಕ್ಷಣದ ಬದಲಾವಣೆಗಳು, ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ, ರಾಜೀನಾಮೆ ಮಾತುಗಳು…ಪ್ರತಿಭಟನೆಗಳು

ಬೆಂಗಳೂರು: ಸುಮಾರು ಎರಡು ತಿಂಗಳುಗಳ ಕಾಲ ಎಐಸಿಸಿ ಮಟ್ಟದಲ್ಲಿ ನಡೆದ ಸುದೀರ್ಘ ಸಮಾಲೋಚನೆಗಳ ಬಳಿಕ ಅಂತಿಮಗೊಂಡಿದ್ದ ಕಾಂಗ್ರೆಸ್‌ನ ಬಹುನಿರೀಕ್ಷಿತ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ, ಕೊನೆಯ ಕ್ಷಣದ ಬದಲಾವಣೆಗಳು, ಆಂತರಿಕ ಅಸಮಾಧಾನ, ರಾಜೀನಾಮೆ ನೀಡುವುದಾಗಿ ಘೋಷಣೆ ಹಾಗೂ ಪ್ರತಿಭಟನೆಗಳಿಂದಾಗಿ ಭಾರೀ ಸುದ್ದಿಯಾಗಿದೆ ಸೋಮವಾರ ಎಐಸಿಸಿ 20 ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದರೂ, ದಿನವಿಡೀ ಗೊಂದಲ ಮತ್ತು … Continued

ಸಿಎಂ ಡಿಕೆ ಶಿವಕುಮಾರ ಸಚಿವ ಸಂಪುಟದಲ್ಲಿ 9 ಜಿಲ್ಲೆಗಳ ಶಾಸಕರಿಗೆ ಸಿಗದ ಸಚಿವ ಸ್ಥಾನ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ೯ ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಸೋಮವಾರ (ಆಗಸ್ಟ್‌ 3) ನಡೆದ ಸಚಿವ ಸಂಪುಟದ ವಿಸ್ತರಣೆ ವೇಳೆ 19 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, 9 ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ.  ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಉಡುಪಿ, ಬೀದರ, ವಿಜಯನಗರ ಜಿಲ್ಲೆಗಳಿಗೆ ಮಂತ್ರಿ … Continued

ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದಲ್ಲಿ ಟ್ವಿಸ್ಟ್: ಒಬ್ಬರಿಗೆ ಕೈತಪ್ಪಿದ ಸಚಿವ ಸ್ಥಾನ ; ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟವು ಸೋಮವಾರ ಸಂಜೆ ವಿಸ್ತರಣೆಯಾಯಿತು. ಆದರೆ ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಅನುಮೋದಿಸಿದ್ದರೂ, ಕೊನೆಯ ಕ್ಷಣದಲ್ಲಿ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು 19 … Continued

ಶಿವಕುಮಾರ ಸಚಿವ ಸಂಪುಟ ವಿಸ್ತರಣೆ : ಇಂದು ಸಂಜೆ ಪ್ರಮಾಣವಚನ ; ಯಾರಿಗೆಲ್ಲ ಸಚಿವ ಸ್ಥಾನ..? ಇಲ್ಲಿದೆ ಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅನುಮೋದನೆ ನೀಡಿದ್ದು, ಒಟ್ಟು 19 ಶಾಸಕರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲು ಒಪ್ಪಿಗೆ ಸೂಚಿಸಿದೆ. ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ನಿರೀಕ್ಷೆ ನಡುವೆಯೇ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ. ವಿಶೇಷವಾಗಿ, 10 ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿ … Continued

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ ? ದೆಹಲಿಗೆ ತೆರಳಲಿರುವ ಸಿಎಂ ಡಿಕೆ ಶಿವಕುಮಾರ

ಬೆಂಗಳೂರು: ಬಹುದಿನಗಳ ನಿರೀಕ್ಷೆಯಾಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿನ ರಾಜ್ಯದ ಕಾಂಗ್ರೆಸ್‌ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗೆ ವೇಗ ಸಿಕ್ಕಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ ಸೋಮವಾರ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಶಿವಕುಮಾರ ಜೊತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. … Continued

ಮುಂಗಾರು ಕೊರತೆ : ಡ್ಯಾಂನಲ್ಲಿ ನೀರಿಲ್ಲ ; ಇದರ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ; ಸಿಎಂ ಶಿವಕುಮಾರ

ಬೆಂಗಳೂರು: ಈ ವರ್ಷ ದೇಶದಲ್ಲಿ ತೀವ್ರ ಮಳೆ ಕೊರತೆ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರನ್ನೇ ನಂಬಿಕೊಂಡು ಬೆಳೆ ಬೆಳೆಯುವುದುಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗುರುವಾರ ರೈತರಿಗೆ ಸಲಹೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Continued