ಲೋಕಸಭಾ ಚುನಾವಣೆ : 3-4 ದಿನದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ; ಡಿಕೆಶಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಮೂರ್ನಾಲ್ಕು ದಿನಗಳಲ್ಲಿ ಸಿದ್ಧವಾಗಲಿದೆ, ಸಮೀಕ್ಷಾ ತಂಡವು ವರದಿ ಸಲ್ಲಿಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದರು. ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದ್ದು, ಅವರು ತಮ್ಮತಮ್ಮ ಲೋಕಸಭಾ ಕ್ಷೇತ್ರದ, … Continued

ಐದು ವರ್ಷವೂ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ

ಹೊಸಪೇಟೆ : ಯಾವ ಉಹಾಪೋಹಗಳಿಗೂ ಕಿವಿಗೊಡಬೇಡಿ. ಪೂರ್ಣ ಐದು ವರ್ಷ ಕಾಂಗ್ರೆಸ್‌ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕೆಲಸ ಇಲ್ಲದೇ ಇರುವವರು ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡುತ್ತಾರೆ ಎಂದು … Continued

ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ದೂರು ದಾಖಲು

 ಬೆಂಗಳೂರು: ಬಿಜೆಪಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ ಅವರು ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ರಮೇಶ ಜಾರಕಿಹೊಳಿ ಅವರು ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಜೊತೆಗೆ ಆಧಾರ ರಹಿತವಾಗಿ ಆರೋಪಗಳನ್ನು ಮಾಡಿದ್ದಾರೆ. … Continued

ಡಿ.ಕೆ. ಶಿವಕುಮಾರ ಕಾಣೆಯಾಗಿದ್ದಾರೆ, ಹುಡುಕಿಕೊಟ್ಟವರಿಗೆ….: ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕುರಿತು ಬಿಜೆಪಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ‘ಡಿ.ಕೆ.ಶಿವಕುಮಾರ್​ ಕಾಣೆಯಾಗಿದ್ದಾರೆ, ದಯವಿಟ್ಟು ಹುಡುಕಿಕೊಡಿ’ ಎಂದು ಕಾಣೆಯಾದವರ ಜಾಹೀರಾತು ಮಾದರಿಯಲ್ಲಿ ಪೋಸ್ಟರ್​ ರಚಿಸಿ ಹಂಚಿಕೊಂಡಿದೆ. “ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ‘ದೊಡ್ಡಮಟ್ಟದಲ್ಲಿ ಸಹಕರಿಸಿದ’ ಋಣವನ್ನು ತೀರಿಸಲು ಹಾಗೂ ಲೋಕಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಕುರ್ಚಿಗೆ ಲಾಬಿ ಮಾಡಲು, ಕಾವೇರಿಯನ್ನು ಸ್ಟಾಲಿನ್‌ ನಾಡಿಗೆ ಬೇಕಾಬಿಟ್ಟಿಯಾಗಿ … Continued

ಕೆಪಿಸಿಸಿ ವಕ್ತಾರರಾಗಿ ಆಯನೂರು ಮಂಜುನಾಥ ನೇಮಕ

ಬೆಂಗಳೂರು : ಒಂದು ತಿಂಗಳ ಹಿಂದಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಆದೇಶ ಹೊರಡಿಸಿದ್ದು, ಆಯನೂರು ಮಂಜುನಾಥ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ … Continued

ಆಪರೇಷನ್‌ ಹಸ್ತ ; ಬೇರೆ ಬೇರೆ ಪಕ್ಷಗಳ 42ಕ್ಕೂ ಹೆಚ್ಚು ನಾಯಕರ ಅರ್ಜಿ ನನ್ನ ಮುಂದಿದೆ ಎಂದ ಡಿ.ಕೆ.ಶಿವಕುಮಾರ

ಬೆಂಗಳೂರು : ಕಾಂಗ್ರೆಸ್ ಸೇರಲು ಕಾಯುತ್ತಿರುವ ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಅವರ ಹೆಸರುಗಳನ್ನು ಈಗ ಬಹಿರಂಗ ಪಡಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೊಸ ಬಾಂಬ್ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬೇರೆ ಪಕ್ಷದ ಮುಖಂಡರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗದೀಶ ಶೆಟ್ಟರ ಮತ್ತು ಲಕ್ಷ್ಮಣ ಸವದಿ … Continued

ಕಾವೇರಿ ಸಭೆ : ಕಾನೂನು ಸಲಹಾ ಸಮಿತಿ ರಚಿಸಲು ಸಿಎಂಗೆ ತಜ್ಞರ ಸಲಹೆ

ಬೆಂಗಳೂರು : ಕಾವೇರಿ ಸೇರಿದಂತೆ ರಾಜ್ಯದ ಎಲ್ಲಾ ನದಿ ವಿವಾದಗಳಿಗೆ ಸಂಬಂಧಿಸಿದಂತೆ ಕಾನೂನು ಸಲಹಾ ಸಮಿತಿ ರಚಿಸುವಂತೆ ರಾಜ್ಯದ ನಿವೃತ್ತ ನ್ಯಾಯಮೂರ್ತಿಗಳು ಮತ್ತು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ ಪಾಲ್ಗೊಂಡಿದ್ದ ಶುಕ್ರವಾರ … Continued

ಡಿಸಿಎಂ ಡಿ.ಕೆ. ಶಿವಕುಮಾರ ಟಿಪ್ಪಣಿ ಆಧರಿಸಿ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ, ನಿಯೋಜನೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು 2023ರ ಆಗಸ್ಟ್‌ 10ರಂದು ಬರೆದಿರುವ ಟಿಪ್ಪಣಿ ಆಧರಿಸಿ ಕೈಗೊಳ್ಳಲಾಗಿದ್ದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಬೆಂಗಳೂರಿನ ಅನೀಸ್ ಫಾತಿಮಾ ಸೇರಿದಂತೆ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ-ಕಿರಿಯ ಆರೋಗ್ಯ ಪರಿವೀಕ್ಷಕರು, ಎಸ್‌ಡಿಎ, ಎಫ್‌ಡಿಎ, … Continued

ನಾನು ಗುತ್ತಿಗೆದಾರರ ಬಳಿ ಕಮಿಷನ್ ಕೇಳಿದ್ದರೆ ರಾಜಕೀಯದಿಂದ ನಿವೃತ್ತಿ ; ಡಿಸಿಎಂ ಶಿವಕುಮಾರ

ಬೆಂಗಳೂರು: ನಾನು ಗುತ್ತಿಗೆದಾರರ ಬಳಿ 15% ಕಮಿಷನ್ ಕೇಳಿದ್ದರೆ ಇಂದೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ತಮ್ಮ ವಿರುದ್ಧ ಕಮಿಷನ್ ಆರೋಪ ಹಿನ್ನೆಲೆ ಈ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾಕೆ ಬಿಲ್ ಪಾವತಿ ಮಾಡಿಲ್ಲ..? ಗುತ್ತಿಗೆದಾರರ ಬಿಲ್ ಪಾವತಿ ಮಾಡಲು ಆಗ ಯಾರು ಅಡ್ಡಿ ಮಾಡಿದ್ದರು … Continued

ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧ: ಉಲ್ಲಂಘಿಸಿದವರಿಗೆ 50,000 ರೂ. ದಂಡ

ಬೆಂಗಳೂರು: ಬೆಂಗಳೂರಿನಲ್ಲಿ ಆಗಸ್ಟ್ 15ರ ಬಳಿಕ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧಿಸಲಾಗಿದ್ದು, ಅನುಮತಿಯಿಲ್ಲದೆ ಯಾರಾದರೂ ಫ್ಲೆಕ್ಸ್, ಬ್ಯಾನರ್ ಹಾಕಿದಲ್ಲಿ 50,000 ರೂ. ದಂಡ ವಿಧಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾನರ್, ಫ್ಲೆಕ್ಸ್ ಯಾರದೇ ಆಗಿರಲಿ ಅದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಗಳನ್ನು … Continued