ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಧ್ಯಕ್ಷರಾಗಿ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ ನೇಮಕ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (Greater Bengaluru Authority) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷರಾಗಿ ಐದು ವಲಯದ … Continued

ಡಿಸಿಎಂ ಶಿವಕುಮಾರ ಓಡಿಸಿದ್ದ ಸ್ಕೂಟರ್‌ ಮೇಲಿತ್ತು 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ; ದಂಡ ಪಾವತಿಸಿದ ಮಾಲೀಕ

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆ ಲೂಪ್ ಪರಿಶೀಲನೆಯ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಚಲಾಯಿಸಿದ್ದ ದ್ವಿಚಕ್ರ ವಾಹನದ ಮೇಲಿದ್ದ 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಿಧಿಸಲಾಗಿದ್ದ 18,500 ರೂ. ದಂಡವನ್ನು ವಾಹನ ಮಾಲೀಕರು ಪಾವತಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಆಗಸ್ಟ್ 5 ರಂದು ಹೆಬ್ಬಾಳ ಫ್ಲೈಓವರ್ ಲೂಪ್ ಪರಿಶೀಲನೆ ವೇಳೆ ಡಿಕೆ ಶಿವಕುಮಾರ ದ್ವಿಚಕ್ರ … Continued

ಡಿಸಿಎಂ ಡಿಕೆ ಶಿವಕುಮಾರ ಕಚೇರಿ, ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಕಚೇರಿ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ​ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 11 ಗಂಟೆಗೆ ಬಾಂಬ್‌ ಸ್ಪೋಟ ಮತ್ತು ಡಿಕೆಶಿ ಕಚೇರಿಯಲ್ಲಿ ಬಾಂಬ್ ಸ್ಫೋಟವಾಗಲಿದೆ ಎಂದು ಇ-ಮೇಲ್‌ ಬಂದಿತ್ತು. ತಕ್ಷಣ ಪೊಲೀಸರು, … Continued

ಡಿಸಿಎಂ ಡಿಕೆ ಶಿವಕುಮಾರ ಬೆಂಗಾವಲು ವಾಹನ ಪಲ್ಟಿ

ಮಂಡ್ಯ: ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಎಕ್ಸ್‌ಪ್ರೆಸ್ ಹೈವೇಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ … Continued

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ : ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ಮಹತ್ವದ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (Karnataka Public School) ಎಲ್‌ಕೆಜಿ (LKG)ಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಲು ನಿರ್ಧರಿಸಿದೆ. ಈ ಕುರಿತು … Continued

ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಡಿಕೆ ಶಿವಕುಮಾರ (DK Shivakumar) ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರೆ ಮುಖ್ಯಮಂತ್ರಿ ಬದಲಾಗಬೇಕು ಎಂದು ಹೇಳಿಕೆ ನೀಡಿದ್ದ ರಾಮನಗರದ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಕೆಪಿಸಿಸಿಯಿಂದ ನೋಟಿಸ್‌ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಹೇಳಿಕೆ … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ: ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್ ಮಾತ್ರ ಎಂದ ಖರ್ಗೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಹಿರಂಗವಾಗಿ ಚರ್ಚಿಸುತ್ತಿರುವಾಗ, ಸೋಮವಾರ (ಜೂನ್ 30, 2025) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂತಹ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ ಮತ್ತು ಈ ವಿಚಾರದಲ್ಲಿ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬೇಡಿ ಎಂದು ಪಕ್ಷದ ನಾಯಕರಿಗೆ ಹೇಳಿದ್ದಾರೆ. ಅಕ್ಟೋಬರ್‌ನಲ್ಲಿ … Continued

ಬೆಂಗಳೂರು ಕಾಲ್ತುಳಿತದ ಘಟನೆ : ಕಾಂಗ್ರೆಸ್‌ ಹೈಕಮಾಂಡ್‌ ನಿಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರಗೆ ದೆಹಲಿಗೆ ಬುಲಾವ್‌…

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವಿಗೀಡಾದ ಘಟನೆಯ ಕೆಲವು ದಿನಗಳ ನಂತರ, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರಿಗೆ ದೆಹಲಿಗೆ ಬುಲಾವ್‌ ನೀಡಿದೆ ಎಂದು ತಿಳಿದುಬಂದಿದೆ. ಕಾಲ್ತುಳಿತ ಘಟನೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹೈಕಮಾಂಡ್  ಮಂಗಳವಾರ ಬೆಳಿಗ್ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ ಅವರಿಗೆ … Continued

ವೀಡಿಯೊ..| ಬೆಂಗಳೂರು ಕಾಲ್ತುಳಿತ ; ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಡಿಕೆ ಶಿವಕುಮಾರ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿದಲ್ಲಿ 11 ಜನರು ಸಾವಿಗೀಡಾದ ದುರಂತದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಣ್ಣೀರಿಟ್ಟಿದ್ದಾರೆ. ಶಿವಕುಮಾರ ಅವರು ತಾವು ಕಂಡ ಹೃದಯ ವಿದ್ರಾವಕ ದೃಶ್ಯಗಳನ್ನು ವಿವರಿಸಿದ್ದಾರೆ. ʼಕಾಲ್ತುಳಿತದಲ್ಲಿ (Bengaluru Stampede) “ನಾನು ಮಕ್ಕಳ ಬಗ್ಗೆ ಚಿಂತಿತನಾಗಿದ್ದೇನೆ, ಅವರು 15 ವರ್ಷ ವಯಸ್ಸಿನವರು ಎಂದು ನಾನು ನೋಡಿದೆ. … Continued

ರಾಜ್ಯ ಸರ್ಕಾರಕ್ಕೆ ಮುಜುಗರ ; ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗವರ್ನರ್

ಬೆಂಗಳೂರು : ವಿಪಕ್ಷಗಳ ವಿರೋಧದ ನಡೆಯು ಸದನದಲ್ಲಿ ಅಂಗೀಕಾರವಾಗಿದ್ದ ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲರು ಸಹಿ ಹಾಕದೆ ವಾಪಸ್ ಕಳುಹಿಸಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಅನಮೋದನೆ ಸಿಕ್ಕಿತ್ತು. ಆದರೆ, ಇದೀಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ಕೆಲವೊಂದು ಸ್ಪಷ್ಟನೆ ಕೇಳಿ … Continued