ಡಿಕೆ ಶಿವಕುಮಾರ್ ನನಗೆ ಗಾಡ್ ಫಾದರ್, ಅವರ ಬಳಿ ಕ್ಷಮೆ ಕೋರುತ್ತೇನೆ, ಈ ವಿಷಯ ಇಲ್ಲಿಗೇ ಕೈಬಿಡಬೇಕು: ಸಲೀಂ

posted in: ರಾಜ್ಯ | 0

ಬೆಂಗಳೂರು: ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಎಂ.ಎ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಗುರುವಾರ ಕೈಮುಗಿದು ಕ್ಷಮೆ ಕೋರಿದ್ದಾರೆ. ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಕುರಿತು ಲಘುವಾಗಿ ಮತ್ತು ಬೇಜವಾಬ್ದಾರಿಯಿಂದ ಮಾತನಾಡಿದ ಕಾರಣ ಸಲೀಂ ಅವರನ್ನು ಪಕ್ಷದ ಶಿಸ್ತುಪಾಲನಾ ಸಮಿತಿ … Continued

ಕಲಬುರಗಿ ಪಾಲಿಕೆ ಅಧಿಕಾರ: ದೇವೇಗೌಡರ ಜೊತೆ ಖರ್ಗೆ ಮಾತುಕತೆ -ಡಿಕೆಶಿ

posted in: ರಾಜ್ಯ | 0

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ವಿಚಾರವಾಗಿ ಪಕ್ಷದ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಜೆಡಿಎಸ್ ರಾಷ್ಟ್ರೀಯ ನಾಯಕರಾದ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕಲಬುರಗಿ ವಿಚಾರವಾಗಿ ಜೆಡಿಎಸ್ ನಾಯಕರಾದ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಜತೆ ನೇರವಾಗಿ ಮಾತನಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, … Continued

 ಗದಿಗೆಪ್ಪಗೌಡರ ಒಳ ಬಿಟ್ಟವರು ಯಾರು: ವಿವರಣೆ ಕೇಳಿದ ಡಿಕೆಶಿ..?

posted in: ರಾಜ್ಯ | 0

ಹುಬ್ಬಳ್ಳಿ: ನಗರದ ಕ್ಯುಬಿಕ್ಸ್ ಹೊಟೇಲ್‌ನಲ್ಲಿ ನಡೆದ ಕಾಂಗ್ರೆಸ್ ಸಂಘಟನಾ ಸಭೆಗೆ ಯಾವುದೇ ಆಹ್ವಾನವಿಲ್ಲದೆ ಒಳಬಂದು ಗದ್ದಲಕ್ಕೆ ಮುಂದಾದ ಗಿರೀಶ ಗದಿಗೆಪ್ಪಗೌಡರನ್ನು ಒಳಗೆ ಬಿಟ್ಟವರು ಯಾರು ಎಂದು ವಿವರಣೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಕಾಂಗ್ರೆಸ್ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ .ಆದರೆ ಅಧಿಕೃತವಾಗಿ ಯಾರೂ ತಿಳಿಸಿಲ್ಲ. ಕೆಪಿಸಿಸಿ ಅಧ್ಯಕ್ಷರ ಎದುರೇ ಮುಜುಗರ … Continued

ಪೊಲೀಸರು ಬೇಕಾದ್ರೆ ಕೇಸ್‌ ಹಾಕಲಿ, ನಾವು ಸರ್ಕಾರದ ವಿರುದ್ಧ ಹೋರಾಟ ಮಾಡಿಯೇ ಮಾಡ್ತೇವೆ:ಡಿಕೆಶಿ

posted in: ರಾಜ್ಯ | 0

ಶಿರಸಿ:ರಾಜ್ಯದಲ್ಲಿ ಕೊರೊನಾ ಸಮಯದಲ್ಲಿ ಜನ ಬಹಳ ನೋವು ಅನುಭವಿಸಿದ್ದಾರೆ. ಅದರ ನಡುವೆ ರಾಜ್ಯ ಹಾಗೂ ಕೇಂದ್ರದಲ್ಲಿ ಬೆಲೆ ಏರಿಕೆಯಿಂದ ಎಲ್ಲರಿಗೂ ವಿಪರೀತ ತೊಂದರೆಯಾಗುತ್ತಿದೆ. ಇದರ ವಿರುದ್ಧ ಹೋರಾಡುವ ರಾಷ್ಟ್ರ ಹಾಗೂ ರಾಜ್ಯದ ಕಾರ್ಯಕ್ರಮಕ್ಕೂ ಮುನ್ನ ಮಾರಿಕಾಂಬ ದೇವಿಯ ಆಶೀರ್ವಾದ ಪಡೆಯಲು ಶಿರಸಿಗೆ ಆಗಮಿಸಿದ್ದೇನೆ. ಈ ದೇವಿಯ ಇತಿಹಾಸದ ಬಗ್ಗೆ ತಿಳಿದಿದ್ದೇನೆ. ನಮ್ಮ ದುಃಖವನ್ನು ದೂರಮಾಡುವ ಶಕ್ತಿ … Continued

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ’

posted in: ರಾಜ್ಯ | 0

ಬೆಂಗಳೂರು: ಗುಂಪುಗಾರಿಕೆ ಮಾಡಿ ಪಕ್ಷವನ್ನು ಹಾಳು ಮಾಡುವವರು ನಮಗೆ ಬೇಡವೇ ಬೇಡ. ವ್ಯಕ್ತಿ ಪೂಜೆ ಬಿಟ್ಟು, ಪಕ್ಷ ಪೂಜೆ ಮಾಡುವ, ಪಕ್ಷದ ಸಿದ್ಧಾಂತ ಮತ್ತು ನಾಯಕತ್ವ ನಂಬಿ ಬರುವವರನ್ನು ಮಾತ್ರ ಕಾಂಗ್ರೆಸ್ ಗೆ ಸೇರಿಸಿಕೊಳ್ಳಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಹಾಸನ ಜಿಲ್ಲೆ ಬೇಲೂರು ಪುರಸಭೆಗೆ ಆಯ್ಕೆ ಆಗಿರುವ ಕಾಂಗ್ರೆಸ್ ಸದಸ್ಯರನ್ನು … Continued

1200 ಕೋಟಿ ರೂ. ಪರಿಹಾರ ಯಡಿಯೂರಪ್ಪ ತಮ್ಮ ಮನೆಯಿಂದ ಕೊಟ್ರಾ: ಡಿಕೆಶಿ ಪ್ರಶ್ನೆ

posted in: ರಾಜ್ಯ | 0

ಹುಬ್ಬಳ್ಳಿ:ಕೊರೊನಾ ಲಸಿಕೆಗಾಗಿ ನಾವು 100 ಕೋಟಿ ಕೊಟ್ಟರೆ ಅದಕ್ಕೆ ಕೊಂಕು ಮಾತನಾಡುವ ಬಿಜೆಪಿಯವರು, ಕೇವಲ 1200 ಕೋಟಿ ರೂ.ಗಳ ಕೊರೊನಾ ಪರಿಹಾರ ಪ್ಯಾಕೇಜ್ ಕೊಟ್ಟು ಸಾಕಷ್ಟು ಪ್ರಚಾರ ತೆಗೆದುಕೊಳ್ಳುತ್ತಾರೆ. ಆ 1200 ಕೋಟಿ ರೂ.ಯಡಿಯೂರಪ್ಪ ತಮ್ಮ ಮನೆಯಿಂದ ಕೊಟ್ಟಿದ್ದಾರೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ … Continued

ಪರಿಸ್ಥಿತಿ ಕೈಮೀರಿದ ಮೇಲೆ ಸರ್ವಪಕ್ಷಗಳ ಸಭೆ ಕರೆದ ಸಿಎಂ; ಡಿಕೆಶಿ ಟೀಕೆ

posted in: ರಾಜ್ಯ | 0

ಬೆಂಗಳೂರು: ಕೋವಿಡ್ ಚರ್ಚೆಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆದಿರುವುದು ದೊಡ್ಡ ವಿಚಾರವೇನಲ್ಲ. ಈಗ ಸಮಯ ಮೀರಿ ಹೋದ ಮೇಲೆ ಮುಖ್ಯಮಂತ್ರಿಗಳು ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಭೆ ಎನ್ನುವುದು ವೈಯಕ್ತಿಕ ವಿಚಾರವಲ್ಲ. ಇದು ರಾಜ್ಯ ವಿಚಾರ. ಸರ್ಕಾರ … Continued

ನನಗೆ ಪ್ರತಿಭಟನೆ ಸ್ವಾಗತ ಕೋರಿದವರಿಗೆ ಅಭಿನಂದನೆಗಳು; ಡಿಕೆಶಿ

posted in: ರಾಜ್ಯ | 0

ಬೆಳಗಾವಿ: ಪ್ರತಿಭಟನೆ ಮೂಲಕ ನನಗೆ ಸ್ವಾಗತ ಮಾಡುತ್ತಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ. ಅವರ ಸ್ವಾಗತ, ಪ್ರೀತಿ ವಿಶ್ವಾಸಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಈ ಸ್ವಾಗತವೇ ನಮಗೆ ದೊಡ್ಡ ಶಕ್ತಿಯಾಗುತ್ತದೆ. ಅವರು ಎಂತೆಂಥಾ ಘನಕಾರ್ಯಕ್ಕೆ ಈ ಸ್ವಾಗತ ಮಾಡುತ್ತಿದ್ದಾರೆ ಗೊತ್ತಿದೆಯಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನ … Continued

ಡಿಕೆಶಿ, ಬೆಂಬಲಿಗರ ಕಾರಿನ ಮೇಲೆ ರಮೇಶ ಜಾರಕಿಹೊಳಿ ಬೆಂಬಲಿಗರ ಕಲ್ಲು ತೂರಾಟ, ಗನ್‌ಮ್ಯಾನ್‌ ಎಳೆದಾಡಿದರು

posted in: ರಾಜ್ಯ | 0

ಬೆಳಗಾವಿ: ಬೆಳಗಾವಿ ಸಾಂಬ್ರಾ ಏರ್ಪೋರ್ಟ್ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಬೆಂಬಲಿಗರ ವಾಹನಗಳ ಮೇಲೆ ಹಾಗೂ ಎಸ್ಕಾರ್ಟ್‌ ವಾಹನದ ಮೇಲೆ  ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಾಟ ಮಾಡಿದ್ದಾರೆ. ಡಿ.ಕೆ. ಶಿವಕುಮಾರ ಬೆಂಗಲಿಗರ ಕಾರಿನ ಗಾಜುಗಳು ಪುಡಿಯಾಗಿದೆ. ಅಲ್ಲದೆ ಡಿ.ಕೆ.ಶಿವಕುಮಾರ ಅವರ ಗನ್‌ಮ್ಯಾನ್‌ ಅವರನ್ನು  ಎಳೆದಾಡಿದ್ದಾರೆ. ನಂತರ ಗನ್‌ಮ್ಯಾನ್‌ ಬೇರೆ … Continued

ನನಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ, ಹತಾಶೆ ಮಾತಿಗೆ ಉತ್ತರಿಸುವುದಿಲ್ಲ; ಡಿಕೆಶಿ

posted in: ರಾಜ್ಯ | 0

ಹೊಸೂರು:’ನನಗೂ ಸಿಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖೆ ಮಾಡಲಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸಿಡಿ ಪ್ರಕರಣದಲ್ಲಿ ಯುವತಿಯನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಂತ್ರಸ್ತ ಯುವತಿ ಪೋಷಕರ ಆರೋಪದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಪಾಪ, ಅವರು ಹತಾಶರಾಗಿದ್ದಾರೆ, … Continued