ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನ

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ ನಟ, ಬಿಗ್‌ ಬಾಸ್‌ ಖ್ಯಾತಿಯ ಪ್ರಥಮ್‌ ಅವರ ಮುಖಕ್ಕೆ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ದೊಡ್ಡಬಳ್ಳಾಪುರ ಎಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ್ದಾಗ ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದರ್ಶನ್‌ ಫ್ಯಾನ್ಸ್‌ ಎನ್ನಲಾಗಿದ್ದ ಕೆಲವರ ವಿರುದ್ಧ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದರು. ಈ … Continued

ದೊಡ್ಡಬಳ್ಳಾಪುರ : ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಶವವಾಗಿ ಪತ್ತೆ

ದೊಡ್ಡಬಳ್ಳಾಪುರ:  ಕೋಳಿಫಾರಂ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ದೊಡ್ಡಬೆಳವಂಗಲ ಬಳಿ ಹೊಲೆಯರಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟ ನೇಪಾಳ ಮೂಲದ ನಾಲ್ವರನ್ನು ಕಾಲೇ ಸರೇರಾ (60), ಲಕ್ಷ್ಮಿ ಸರೇರಾ (50), ಉಷಾ ಸರೇರಾ (40) ಹಾಗೂ ಫೂಲ್ ಸರೇರಾ … Continued

ಕ್ರಿಕೆಟ್ ಪಂದ್ಯದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ: ಇಬ್ಬರಿಗೆ ಚೂರಿಯಿಂದ ಇರಿದು ಕೊಲೆ

ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಈ ಘಟನೆ ನಡೆದ ವರದಿಯಾಗಿದ್ದು, ಕೊಲೆಯಾದವರನ್ನು ಭರತ ಹಾಗೂ ಪ್ರತೀಕ ಎಂದು ಗುರುತಿಸಲಾಗಿದೆ. ಶಿವರಾತ್ರಿ ಪ್ರಯುಕ್ತ ಬಿಜೆಪಿ ಮುಖಂಡರಾದ ಧೀರಜ್​ ಎಂಬವರು ಕ್ರಿಕೆಟ್ ಟೂರ್ನಮೆಂಟ್ … Continued

ಪ್ರವೀಣ ನೆಟ್ಟಾರು ಹತ್ಯೆ : ಇಂದು ನಡೆಯಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ರದ್ದು

ಬೆಂಗಳೂರು: ‘ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಇಂದು, ಗುರುವಾರ (ಜುಲೈ 28) ಬಿಜೆಪಿ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶ- ‘ಜನೋತ್ಸವ’ ಕಾರ್ಯಕ್ರಮ ರದ್ದುಪಡಿಸಲಾಗಿದೆ. ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ 12:30 ಗಂಟೆಗೆ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ … Continued