ಡಾ.ಅಜಿತ ಪ್ರಸಾದಗೆ ಬಂಗಾರದ ಪದಕ ನೀಡಿ ಸನ್ಮಾನಿಸಿದ ಡಾ.ವೀರೇಂದ್ರ ಹೆಗ್ಗಡೆ

ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ದಶಮಾನೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕಾಲೇಜಿನ ಯಶಸ್ಸಿಗೆ ಕಾರಣೀಕರ್ತರಾದ ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದರವರಿಗೆ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಂಗಾರದ ಪದಕವನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರವರು ಉಪಸ್ಥಿತರಿದ್ದರು.