ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಜೊತೆ ಸೆಲ್ಫಿ ; ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ : ಗೃಹ ಸಚಿವ ಪರಮೇಶ್ವರ

ತುಮಕೂರು : ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಜೊತೆಗೆ ಸೆಲ್ಫಿ ತೆಗೆದುಕೊಂಡ ಪೊಲೀಸ್‌ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೆಲ್ಫಿ ತೆಗೆದುಕೊಂಡ ಮಾತ್ರಕ್ಕೆ ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆ ಎಂದು ಭಾವಿಸಲಾಗದು. ಕನ್ನಡ ನಾಡಿನ ಬದ್ಧತೆ, ತತ್ವಕ್ಕೆ ವಿರುದ್ಧವಾಗಿ ಹೋಗುವ ಯಾವುದೇ ಅಧಿಕಾರಿ, … Continued

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿರುದ್ಧ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಹುಬ್ಬಳ್ಳಿ: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಟಿ. ರವಿ ಅವರು ಅಶ್ಲೀಲ ಪದ … Continued

ಒಪ್ಪಂದ ಆಗಿದ್ದರೆ ಅವರಿಬ್ಬರೇ ರಾಜಕಾರಣ ನಡೆಸಲಿ, ನಾವೆಲ್ಲ ಯಾಕೆ ಬೇಕು? : ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಸಚಿವ ಪರಮೇಶ್ವರ ಅಸಮಾಧಾನ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೇನು ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ … Continued

ಸಚಿವ ಜಮೀರ್ ಅಹ್ಮದ್‌ ವಿರುದ್ಧ ಕ್ರಮ: ಪರೋಕ್ಷ ಸುಳಿವು ನೀಡಿದರೇ ಗೃಹ ಸಚಿವ ಪರಮೇಶ್ವರ..?

ಮೈಸೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದು ವಿವಾದಕ್ಕೆ ಕಾರಣವಾಗಿರುವ ಸಚಿವ ಜಮೀರ್ ಅಹ್ಮದ್ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪರೋಕ್ಷ ಸುಳಿವು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಜಮೀರ್ ಹೇಳಿಕೆಯಿಂದ ಚುನಾವಣೆಯಲ್ಲಿ ಸ್ವಲ್ಪ ಪರಿಣಾಮ … Continued

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ

ಬೆಂಗಳೂರು :ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದವುಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು … Continued

ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನೋಟಿಸ್‌ಗೆ ಬೆಲೆ ನೀಡಿ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಕಾನೂನಿನಂತೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಕಲಬುರಗಿ ನಗರ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತೇ … Continued

ಲೋಕಸಭೆ ಚುನಾವಣೆಯಲ್ಲಿ ʼಕೈʼ ಅಭ್ಯರ್ಥಿ ಸೋತರೆ ಸಚಿವರ ತಲೆದಂಡ…!

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸದ ಸಚಿವರ ತಲೆದಂಡ ಆಗಲಿದೆ ಎಂಬ ಎಚ್ಚರಿಕೆಯನ್ನು ಹೈಕಮಾಂಡ್ ನೀಡಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಗೆಲ್ಲಲು ಹೈಕಮಾಂಡ್ ಪ್ರತಿ ಸಚಿವರಿಗೆ ಜವಾಬ್ದಾರಿ ನೀಡಿದೆ. ಈ ಜವಾಬ್ದಾರಿಯನ್ನು ನಿಭಾಯಿಸದ ಸಚಿವರ ತಲೆ … Continued

ಕಾಂಗ್ರೆಸ್​ನಲ್ಲಿ 10 ಮಂದಿ ಸಿಎಂ ರೇಸ್ ನಲ್ಲಿದ್ದಾರೆ, ಅವರಲ್ಲಿ ನಾನೂ ಒಬ್ಬ: ಡಾ ಜಿ ಪರಮೇಶ್ವರ

ತುಮಕೂರು: ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ, ಈ ರೇಸ್​ಗೆ ಈಗ ಡಾ ಜಿ ಪರಮೇಶ್ವರ ಅವರು ಸೇರ್ಪಡೆಯಾಗಿದ್ದಾರೆ. ತುಮಕೂರು ‌ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿ ಡಾ.ಪರಮೇಶ್ವರ ಅವರು ಕಾಂಗ್ರೆಸ್​ನಲ್ಲಿ 10 ಮಂದಿ ಮುಖ್ಯಮಂತ್ರಿಗಳಾಗುವ ಅಪೇಕ್ಷೆ ಇದ್ದವರಿದ್ದಾರೆ. ಆ ಹತ್ತು ಮಂದಿಯಲ್ಲಿ ನಾನೂ ಒಬ್ಬ ಎಂದು ಹೇಳಿದ್ದು, ಆ ಮೂಲಕ ಮುಖ್ಯಮಂತ್ರಿ ಸ್ಥಾನಕ್ಕೆ ತಾನೂ … Continued

ವಿಧಾನಸಭಾ ಚುನಾವಣೆಗೆ ತಯಾರಿ: ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ.ಪರಮೇಶ್ವರ ನೇಮಕ

ನವದೆಹಲಿ: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಜೋರಾಗಿ ತಯಾರಿ ನಡೆಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ “ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಟಿ ಸಮಿತಿ 2023ಕ್ಕೆ ಅಧ್ಯಕ್ಷರನ್ನಾಗಿ ಡಾ. ಜಿ.ಪರಮೇಶ್ವರ ಅವರನ್ನು ನೇಮಕ … Continued