ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಸಾವು ; ಇಬ್ಬರ ಅಮಾನತು

ಬೆಳಗಾವಿ/ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮೂವರು ಮಕ್ಕಳ ನಿಗೂಢ ಸಾವಿಗೆ ಸಂಬಂಧಿಸಿ ಇಬ್ಬರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಜನವರಿ 12 ರಂದು ರಾಮದುರ್ಗ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲ ಮಕ್ಕಳಿಗೆ ಚುಚ್ಚುಮದ್ದು ಹಾಕಲಾಗಿತ್ತು.ಆಗ … Continued

ಫೆಬ್ರವರಿ ಮೊದಲ ವಾರದಲ್ಲಿ ಸೋಂಕು ಗರಿಷ್ಠ ಮಟ್ಟ ತಲುಪುತ್ತದೆ..ಆದ್ರೆ ಲಾಕ್ ಡೌನ್ ಮಾಡಲ್ಲ: ಸಚಿವ ಸುಧಾಕರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಇನ್ನೂ ಗರಿಷ್ಠ ಮಟ್ಟಕ್ಕೆ ಹೋಗಿಲ್ಲ. ಫೆಬ್ರವರಿ ಮೊದಲ ವಾರ ಹೋಗುತ್ತದೆ. 3 ಅಥವಾ 4ನೇ ವಾರದಿಂದ ಕಡಿಮೆ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಗೆ ತರುವ ಚಿಂತನೆ ಇಲ್ಲ. ಲಾಕ್‌ಡೌನ್‌ನಿಂದ ಸೋಂಕು ನಿಯಂತ್ರಣ ಆಗುವುದಿಲ್ಲ. … Continued

ಕರ್ನಾಟಕದಲ್ಲಿ 5ಟಿ ಕಾರ್ಯತಂತ್ರ ಜಾರಿ, ಕೋವಿಡ್ ಪರೀಕ್ಷೆಗಳ ಸಂಖ್ಯೆ ಪ್ರತಿದಿನ 2.5 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಎದುರಿಸಲು ರಾಜ್ಯದ ಸಿದ್ಧತೆ ಕ್ರಮಗಳನ್ನು ವಿವರಿಸಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು, ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ದಿನಕ್ಕೆ 2.5 ಲಕ್ಷಕ್ಕೆ ಮತ್ತು ಬೆಂಗಳೂರಿನಲ್ಲಿ 30,000 ಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಮತ್ತೆ 5T ಟ್ರೇಸ್, ಟ್ರ್ಯಾಕ್, ಟೆಸ್ಟ್, ಟ್ರೀಟ್, ಟೆಕ್ನಾಲಜಿ ತಂತ್ರ ಕಾರ್ಯಗತಗೊಳಿಸಲಾಗುತ್ತಿದೆ. ಬಳ್ಳಾರಿ ಮತ್ತು … Continued

ಎಚ್ಚರಿಕೆ ಇರಲಿ, ಭಯ ಬೇಡ, ಯಾಕಂದ್ರೆ ಓಮಿಕ್ರಾನ್ ವೈರಸ್‌ ಗಂಟಲಲ್ಲಿ ಉಳಿಯುತ್ತದೆ.. ಶ್ವಾಸಕೋಶಕ್ಕೆ ಹೋಗುವ ಸಾಧ್ಯತೆ ಕಡಿಮೆ

ಬೆಂಗಳೂರು: ಕೊರೊನಾದ ಮೂರನೇ ಅಲೆ ಅಷ್ಟೊಂದು ದೀರ್ಘವಾಗಿ ಇರುವುದಿಲ್ಲ. ವೇಗವಾಗಿ ಹರಡುತ್ತದೆ ಹಾಗೂ ವೇಗವಾಗಿಯೇ ಮುಕ್ತಾಯವಾಗುತ್ತದೆ. ಹೀಗಾಗಿ ಕನಿಷ್ಠ 4ರಿಂದ 6 ವಾರಗಳು ಜನ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಹೇಳಿದ್ದಾರೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಅಲೆ ಬೇಗ ಹರಡಿದ್ದರೂ ಅಷ್ಟೇ ವೇಗವಾಗಿ ಕಡಿಮೆ ಆಗುತ್ತದೆ ಎಂದು ಬೇರೆ ದೇಶಗಳಿಂದ ಬಂದ … Continued

ಕರ್ನಾಟಕದಲ್ಲಿ ಜನವರಿ 3 ರಿಂದ 15ರಿಂದ18 ವರ್ಷದ ಮಕ್ಕಳಿಗೆ ಲಸಿಕೆ ನೀಡಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಮೊದಲನೇ ಹಂತದಲ್ಲಿ 15ರಿಂದ18 ವರ್ಷದ ಮಕ್ಕಳಿಗೆ ಲಸಿಕೆ ನೀಡಿಕೆ ಪ್ರಕ್ರಿಯೆ ಆರಂಭಿಸಲಿದ್ದು, ಜನವರಿ 3 ರಿಂದ ಮೊದಲ ಹಂತದಲ್ಲಿ ಮಕ್ಕಳಿಗೆ ಲಸಿಕೆ ನೀಡಲು ಚಾಲನೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್​ ತಿಳಿಸಿದ್ದಾರೆ. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 15-18 ವರ್ಷದ 45 ಲಕ್ಷ ಜನ ಮಕ್ಕಳಿದ್ದಾರೆ. ಅವರಿಗೆಲ್ಲ … Continued

ಕರ್ನಾಟಕದಲ್ಲಿ ಲಾಕ್‌ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ: ಡಾ.ಸುಧಾಕರ

ಬೆಂಗಳೂರು: ದೇಶದೆಲ್ಲೆಡೆ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಉಂಟಾಗಿದ್ದು, ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ಎಂಬುದು ಸುಳ್ಳು ಸುದ್ಧಿ ಈ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಲಾಗುತ್ತದೆ. ಜನತೆ ಆತಂಕಕ್ಕೀಡಾಗುವ ಅವಶ್ಯಕತೆಯಿಲ್ಲ .ಲಾಕ್‌ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು … Continued

ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆ ತಡೆಗೆ ಮುನ್ನೆಚ್ಚರಿಕೆ ಕ್ರಮ, ರಾಜ್ಯದಲ್ಲಿ 45 ಲಕ್ಷ ಜನರು 2ನೇ ಡೋಸ್ ಪಡೆಯುವುದು ಬಾಕಿ

ಬೆಂಗಳೂರು: ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆ ಎಲ್ಲರೂ ಪಡೆಯುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಇಸ್ರೇಲ್, ಹಾಂಗ್ ಕಾಂಗ್ ಮೊದಲಾದ ದೇಶಗಳಲ್ಲಿ ಕೋವಿಡ್ ಹೊಸ ರೂಪಾಂತರಿ … Continued

ಬ್ರಿಟನ್, ರಷ್ಯಾದಲ್ಲಿನ ಕೊರೊನಾ ಸೋಂಕು ಹೊಸ ತಳಿ ಪತ್ತೆ: ಮುನ್ನೆಚ್ಚರಿಕೆ ಕ್ರಮ, ಮಾರ್ಗಸೂಚಿಗಳ ಬಗ್ಗೆ ತಜ್ಞರ ಜತೆ ಚರ್ಚೆ

ಹುಬ್ಬಳ್ಳಿ: ಬ್ರಿಟನ್, ರಷ್ಯಾ ಸೇರಿದಂತೆ ಭಾರತದಲ್ಲೂ ಕೊರೊನಾ ವೈರಸ್‌ನ ಹೊಸ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಜ್ಞರ ಜತೆ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued

ಕರ್ನಾಟಕದಲ್ಲಿ ಶೇ.83 ಜನರಿಗೆ ಮೊದಲ ಡೋಸ್, ಶೇ.38 ಜನರಿಗೆ 2ನೇ ಡೋಸ್ ನೀಡಿಕೆ; ಸಚಿವ ಸುಧಾಕರ್

ಹುಬ್ಬಳ್ಳಿ : ಕರ್ನಾಟಕದಲ್ಲಿ ಶೇ.83 ಜನರಿಗೆ ಮೊದಲ ಡೋಸ್ ಹಾಗೂ ಶೇ.38 ಜನರಿಗೆ ಎರಡನೇ ಡೋಸ್ ನೀಡಲಾಗಿದೆ. ಭಾರತದಲ್ಲಿ ಅಮೆರಿಕದ ಎರಡೂವರೆ ಪಟ್ಟು, ಬ್ರೆಜಿಲ್ ನ 4 ಪಟ್ಟು, ಜಪಾನ್ ನ 8 ಪಟ್ಟು, ಇಂಗ್ಲೆಂಡ್ ನ 10 ಪಟ್ಟು, ಯುರೋಪ್ ದೇಶಗಳ 2 ಪಟ್ಟು ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ರಾಜ್ಯದ ಆರೋಗ್ಯ … Continued

ತಜ್ಞರ ಸಲಹೆ ಆಧರಿಸಿ ಲಾಕ್‌ಡೌನ್‌ ತೆರವು ಸ್ವರೂಪ ನಿರ್ಧಾರ : ಸಚಿವ ಸುಧಾಕರ

ಬೆಂಗಳೂರು: ಒಂದೇ ಬಾರಿಗೆ ಎಲ್ಲ ಚಟುವಟಿಕೆಗಳಿಗೆ ಅವಕಾಶ ನೀಡಿದರೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಬಹುದು. ಹೀಗಾಗಿ ಅನ್ ಲಾಕ್ ಸ್ವರೂಪದ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಚಟುವಟಿಕೆಗೆ ನಿರ್ಬಂಧ ಹೇರಿ, ಇನ್ನೂ ಕೆಲ ಚಟುವಟಿಕೆಗಳಿಗೆ ಅವಕಾಶ ನೀಡಬಹುದು. ಸಕಾರಾತ್ಮಕ ದರ … Continued