ಚಿಕ್ಕಮಗಳೂರು : ಈಜಲು ಹೋದ ಮೂವರು ಬಾಲಕರು ನೀರುಪಾಲು

ಚಿಕ್ಕಮಗಳೂರು : ತಾಲೂಕಿನ ಮರ್ಲೆ ಗ್ರಾಮದಲ್ಲಿ ಕೆರೆಗೆ ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತರೆಲ್ಲರೂ ಒಂದೇ ಗ್ರಾಮದವರಾಗಿದ್ದು, 6ನೇ ತರಗತಿಯಲ್ಲಿ ಓದುತ್ತಿದ್ದರು ಎನ್ನಲಾಗಿದೆ. ಮೃತರನ್ನು ತರುಣ್ (12), ಭುವನ (12) ಹಾಗೂ ಲಿಖಿತ್ (12) ಎಂದು ಗುರುತಿಸಲಾಗಿದೆ. ರಜೆ ಹಿನ್ನೆಲೆಯಲ್ಲಿ ಒಟ್ಟಾಗಿ ಕೆರೆಗೆ ತೆರಳಿದ್ದ … Continued

ಶಿರಸಿ : ಕೆರೆಗೆ ಈಜಲು ಹೋದಾಗ ನೀರು ಪಾಲು

ಶಿರಸಿ : ಗಣೇಶ ಹಬ್ಬದ ಸಂಭ್ರದಲ್ಲಿ ಈಜಲು ಹೋದ 17 ವರ್ಷದ ಅಪ್ರಾಪ್ತ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸುಗಾವಿಯಲ್ಲಿ ಮಂಗಳವಾರ ಸಂಭವಿಸಿದೆ ಎಂದು ವರದಿಯಾಗಿದೆ. ಮೃತನನ್ನು ಸುನಿಲ ಕೃಷ್ಣ ಚೆನ್ನಯ್ಯ ಎಂದು ಗುರುತಿಸಲಾಗಿದೆ. ಮಂಗಳವಾರ ಸ್ಥಳೀಯರಾದ  ಸುನಿಲ ಹಾಗೂ ಕೆಲವರು  ಸುಗಾವಿಯ  ಭಟ್ರಕೆರೆಗೆ ಕೆರೆಗೆ ಈಜಲು ಹೋಗಿದ್ದರು. … Continued

ತಾಯಿ ಗದರಿದ ಕೋಪಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು ; ರಕ್ಷಿಸಲು ಹೋದ ತಾಯಿಯೂ ಮುಳುಗಿ ಸಾವು

ಮಡಿಕೇರಿ: ಮಗಳಿಗೆ ಗದರಿದ್ದಕ್ಕೆ ತಾಯಿ-ಮಗಳ ಜೀವನ ದುರಂತ ಅಂತ್ಯ ಕಂಡ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ತಲಕಾವೇರಿ ಸಮೀಪದ ಕೆಂಪರಾಜಮೊಟ್ಟೆ ಕಾಲೋನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮನೆಗೆ ತಡವಾಗಿ ಬಂದಿದ್ದ ವಿಚಾರಕ್ಕೆ ತಾಯಿ ಗದರಿದ್ದರಿಂದ ಮನನೊಂದ ಮಗಳು ಕೆರೆಗೆ ಹಾರಿದ್ದು, ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು 45 ವರ್ಷದ … Continued

ಕಾರವಾರ: ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

ಕಾರವಾರ:ಅರಬ್ಬಿ ಸಮುದ್ರದ ಅಲೆಗಳ ನಡುವೆ ಮೀನುಗಾರಿಕೆ ನಡೆಸುತ್ತಿದ್ದ ಬೋಟ್‌ನಲ್ಲಿ ಮೀನು ಬಲೆ ಎಳೆಯುತ್ತಿದ್ದ ಮೀನುಗಾರನೊಬ್ಬ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಮುದ್ರದಲ್ಲಿನ ಲೈಟ್‌ಹೌಸ್ ಸಮೀಪ ನಡೆದಿದೆ. ಮೃತ ಮೀನನುಗಾರನನ್ನು ಕುಮಟಾ ತಾಲೂಕಿನ ಸಸಿಹಿತ್ಲು ಗ್ರಾಮದ ವೆಂಕಟೇಶ ಹರಿಕಂತ್ರ (32) ಎಂದು ಗುರುತಿಸಲಾಗಿದೆ. ಬೋಟ್‌ ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದಾಗ ಮೀನು ಬಲೆ … Continued

ಉಡುಪಿ: ದೇವಸ್ಥಾನದ ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಉಡುಪಿ: ನಗರದ ತೆಂಕಪೇಟೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆ ನಿವಾಸಿ ಆದಿತ್ಯ ನಾಯಕ (15) ಎಂದು ಗುರುತಿಸಲಾಗಿದೆ. ದೇವಸ್ಥಾನದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮಕ್ಕೆ ಸಂಬಂಧಿಯೊಂದಿಗೆ ಆಗಮಿಸಿದ್ದ ಆದಿತ್ಯ, ಈ ವೇಳೆ ಕೆರೆಯಲ್ಲಿ ಕೆಲ ಭಕ್ತರು … Continued

ವಿಜಯಪುರ : ಬಾವಿಯಲ್ಲಿ ಇಬ್ಬರು ಹೆಣ್ಣುಮಕ್ಕಳ ಶವ ಪತ್ತೆ, ತಂದೆಯೂ ನಾಪತ್ತೆ

ವಿಜಯಪುರ: ಬಾವಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳು ಮೃತಪಟ್ಟಿರುವ ಘಟನೆ ವಿಜಯಪುರ (Vijayapura Tragedy) ಜಿಲ್ಲೆ ಮುದ್ದೆಬಿಹಾಳ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆ ಬಳಿ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಇದೇ ವೇಳೆ ತಂದೆಯೂ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಬಾಲಕಿಯರನ್ನು ಸಾಕ್ಷಿ (15) ಮತ್ತು ರಕ್ಷಿತಾ (10) ಎಂದು ಗುರುತಿಸಲಾಗಿದೆ. ಇವರ … Continued

ಶಿರಸಿ | ಈಜಲು ತೆರಳಿದ್ದ ಇಬ್ಬರು ನೀರುಪಾಲು

ಶಿರಸಿ :ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಹಳ್ಳದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮಾಸ್ತಿಜಡ್ಡಿ ಗ್ರಾಮದ ಮದನ ಗಜಾನನ ನಾಯ್ಕ (೧೬) ಹಾಗೂ ಹೊನ್ನಾವರ ತಾಲೂಕಿನ ಹರ್ಷ ಮಂಜುನಾಥ ನಾಯ್ಕ(೧೯) ಮೃತ ಬಾಲಕರಾಗಿದ್ದು, ಇಬ್ಬರೂ ಮಾಸ್ತಿಜಡ್ಡಿಯಲ್ಲಿರುವ ಸುಮಾರು ೧೫ ಅಡಿ … Continued

ಕುಮಟಾ : ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಬೀಚ್‌ನಲ್ಲಿ ಸಮುದ್ರಕ್ಕೆ ಇಳಿದಿದ್ದ ಪುಣೆ ಮೂಲದ ಯುವಕನೊಬ್ಬ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗಿರುವ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಸಮುದ್ರದಲ್ಲಿ ಕೊಚ್ಚಿಹೋದ ಯುವಕನನ್ನು   ಪುಣೆ ಮೂಲದ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟಾರಾಯ (26) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಇವರು ತಮ್ಮ ಸ್ನೇಹಿತರ ಜೊತೆಗೆ … Continued

ಭಟ್ಕಳ: ನದಿ ದುರಂತ ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಸಮುದ್ರ ತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ಒಟ್ಟು 14 ಮಂದಿ ನದಿಗೆ ಇಳಿದಿದ್ದ ವೇಳೆ ನೀರಿನ ರಭಸಕ್ಕೆ ಸಿಲುಕಿ ಮುಳುಗಿದ್ದರು. ಈ ಪೈಕಿ ಮೊದಲಿಗೆ 8 ಮಂದಿ ಶವ ಪತ್ತೆಯಾಗಿತ್ತು, ನಂತರ ಇಬ್ಬರ ಮೃತದೇಹ … Continued

ಭಟ್ಕಳದಲ್ಲಿ ದುರಂತ; ಕಪ್ಪೆ ಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ನೀರು ಪಾಲು

ಕಾರವಾರ : ಕಪ್ಪೆ ಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬದ ಎಂಟು ಮಂದಿ ಸಮುದ್ರದ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ನೀರು ಪಾಲಾದ ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಇನ್ನೂ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ​ಭಟ್ಕಳ ತಾಲೂಕಿನ … Continued