ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ್ತು ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಆರೋಪಪಟ್ಟಿ ಸಲ್ಲಿಸಿದೆ. ವಿಶೇಷ ನ್ಯಾಯಾಲಯವು ಏಪ್ರಿಲ್ 25 ಅನ್ನು ವಿಚಾರಣೆಯ ದಿನಾಂಕವಾಗಿ ನಿಗದಿಪಡಿಸಿದೆ. “ಪ್ರಸ್ತುತ ಪ್ರಾಸಿಕ್ಯೂಷನ್ ದೂರನ್ನು ಮುಂದಿನ ವಿಚಾರಣೆಗೆ ತೆಗೆದುಕೊಳ್ಳಲಾಗುವುದು, … Continued

ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ​ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು : ಬಹುಕೋಟಿ ಮೌಲ್ಯದ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಬಿ. ನಾಗೇಂದ್ರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ನಾಗೇಂದ್ರ ವಿರುದ್ಧ ನ್ಯಾಯಾಲಯದಲ್ಲಿ ಔಪಚಾರಿಕ … Continued

ಭೋವಿ ನಿಗಮ ಅಕ್ರಮ ; ಹಿಂದಿನ ಪ್ರಧಾನ ವ್ಯವಸ್ಥಾಪಕನ ಬಂಧಿಸಿದ ಇ.ಡಿ.

ಬೆಂಗಳೂರು : ಶೋಧ ಕಾರ್ಯಾಚರಣೆಯ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (ಕೆಬಿಡಿಸಿ) ಮಾಜಿ ಪ್ರಧಾನ ವ್ಯವಸ್ಥಾಪಕರನ್ನು ಬಂದಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.)ಭಾನುವಾರ ತಿಳಿಸಿದೆ. ಬಿ ಕೆ ನಾಗರಾಜಪ್ಪ ಅವರನ್ನು ಏಪ್ರಿಲ್ 5 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ವಿಶೇಷ ಪ್ರಿವೆನ್ಶನ್ ಆಫ್ ಮನಿ … Continued

ಮುಡಾ ಹಗರಣ | ಇ.ಡಿ ತನಿಖೆಗೆ ಹೈಕೋರ್ಟ್‌ ಅನುಮತಿ ; ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ 14 ಬದಲಿ ನಿವೇಶನ (ಈಗ ವಾಪಸ್‌ ಮಾಡಲಾಗಿದೆ) ಹಂಚಿಕೆ ಮಾಡಿದ ಸಮಯದಲ್ಲಿ ಮುಡಾ ಆಯುಕ್ತರಾಗಿದ್ದ ಡಾ. ಡಿ ಬಿ ನಟೇಶ ಅವರಿಗೆ ಜಾರಿ ನಿರ್ದೇಶನಾಲಯ (ED) ಜಾರಿ ಮಾಡಿದ್ದ ಸಮನ್ಸ್‌ ರದ್ದುಪಡಿಸಿ ಏಕಸದಸ್ಯ ಪೀಠ ಮಾಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್‌ ಬುಧವಾರ … Continued

ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ ಬಾಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ಇಡಿ (ED) ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಗುಂಪು…!

ನವದೆಹಲಿ: ಆಪಾದಿತ ಮದ್ಯ ಹಗರದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ತನಿಖೆ ಎದುರಿಸುತ್ತಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರ ನಿವಾಸದಲ್ಲಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮೇಲೆ ಜನರ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಮುಂಜಾನೆ, ಇಡಿಯು ಆಪಾದಿತ ಮದ್ಯ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಬೂಪೇಶ … Continued

ಮದ್ಯ ಹಗರಣ : ಛತ್ತೀಸಗಢ ಮಾಜಿ ಸಿಎಂ ಭೂಪೇಶ ಬಾಘೇಲ್ ಪುತ್ರನ ಒಡೆತನದ ನಿವೇಶನಗಳ ಇ.ಡಿ. ದಾಳಿ

ನವದೆಹಲಿ:  ಚತ್ತೀಸಗಢದ ಆಪಾದಿತ ಮದ್ಯ ಹಗರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಛತ್ತೀಸಗಢದ ದುರ್ಗ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ಚೈತನ್ಯ ಅವರ ಒಡೆತನದ ವಸತಿ ಮತ್ತು ಇತರ ನಿವೇಶನಗಳು ಸೇರಿದಂತೆ 14 ಸ್ಥಳಗಳ ಮೇಲೆ ದಾಳಿ ನಡೆಸಿದೆ. ಶೋಧದ ವೇಳೆ ತನಿಖಾ ಸಂಸ್ಥೆ ಕೆಲವು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು ಮತ್ತು … Continued

ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶಗೆ ದೊಡ್ಡ ರಿಲೀಫ್

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಜಾರಿ ಮಾಡಿದ್ದ ಸಮನ್ಸ್‌/ನೋಟಿಸ್‌ ಹಾಗೂ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ದೂರು ಮತ್ತು ತನಿಖೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್‌ಎ) … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ : ಎಸ್‌ ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಬಂಧಿಸಿದ ಇ.ಡಿ.

ನವದೆಹಲಿ : ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. ಎಂ.ಕೆ. ಫೈಜಿ ಅವರನ್ನು ಅಕ್ರಮ ಹಣ ವರ್ಗಾವಣೆ-ವಿರೋಧಿ ಕಾನೂನಿನ ಅಡಿಯಲ್ಲಿ ಮಂಗಳವಾರ … Continued

ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಬೈರತಿಗೆ ಮತ್ತೆ ರಿಲೀಫ್‌

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಜಾರಿ ನಿರ್ದೇಶನಾಲಯ ಜಾರಿ ಮಾಡಿದ ಸಮನ್ಸ್‌ಗೆ ನೀಡಿದ ತಡೆಯಾಜ್ಞೆ ಹೈಕೋರ್ಟ್‌ ಸೋಮವಾರ ವಿಸ್ತರಿಸಿದೆ. ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಇಡಿ ಸಮನ್ಸ್​ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶಗೆ ಇ.ಡಿ. ನೋಟಿಸ್​

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ ನೋಟಿಸ್​​ ಜಾರಿ ಮಾಡಿದೆ. ಜ. 9ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್​ಗೆ … Continued