ಇ.ಡಿ.ದಾಳಿ ; ಮಂಜುನಾಥ, ಆಪ್ತರ ಬಳಿ ₹5.5 ಕೋಟಿ ನಗದು, ₹7.8 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆ…!

ಬೆಂಗಳೂರು : ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಹಾಗೂ ಇತರ ಅಧಿಕಾರಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಈ ಬಗ್ಗೆ ಸಮಗ್ರ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಬೆಳಗಾವಿ … Continued

ಅಬಕಾರಿ ಹೆಚ್ಚುವರಿ ಆಯುಕ್ತ-ಸಚಿವ ಸತೀಶ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇ.ಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಗೋವಾ ಮತ್ತು ಬೆಂಗಳೂರಿನ ಇ.ಡಿ … Continued

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇ.ಡಿ. ದಾಳಿ

ತಿರುವನಂತಪುರಂ/ಹೊಸದೆಹಲಿ: ಕೇರಳ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆಳವಣಿಗೆಯೊಂದರಲ್ಲಿ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (PMLA) ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಿರುವನಂತಪುರಂ ನಿವಾಸ ಸೇರಿದಂತೆ ಕೇರಳದ ಒಟ್ಟು 12 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದೆ. ರಾಜಧಾನಿ ತಿರುವನಂತಪುರಂನಲ್ಲಿರುವ ವಿಜಯನ್ ಅವರ ಬಾಡಿಗೆ ಮನೆ ಹಾಗೂ … Continued

ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆ ಸೇರಿ 17 ಕಡೆ ಇ.ಡಿ. ದಾಳಿ

ಬೆಂಗಳೂರು:  ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ ಅವರಿಗೆ ಇ.ಡಿ (E.D) ಶಾಕ್ ನೀಡಿದ್ದು, ಅವರ ನಿವಾಸ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರಿನ ಗರುಡಾ ಮಾಲ್ ಹಿಂಭಾಗದಲ್ಲಿರುವ ಹ್ಯಾರಿಸ್ ಅವರ ಮನೆ ಸೇರಿದಂತೆ 17 ಕಡೆಗಳಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಹ್ಯಾರಿಸ್ ಪುತ್ರ ಮೊಹಮ್ಮದ್ … Continued

ಬೇಲೆಕೇರಿ ಅಕ್ರಮ ಅದಿರು ರಫ್ತು ಪ್ರಕರಣ : ಬೆಂಗಳೂರು ಸೇರಿ ಹಲವು ಸ್ಥಳಗಳಲ್ಲಿ ಇ.ಡಿ. ಶೋಧ

ಬೆಂಗಳೂರು:  ಬೇಲೆಕೇರಿ ಬಂದರಿನ ಮೂಲಕ ನಡೆದಿದೆ ಎನ್ನಲಾದ ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ED)ದ ಬೆಂಗಳೂರು ವಲಯ ಕಚೇರಿಯು ಗುರುವಾರ ರಾಜ್ಯದ ಬೆಂಗಳೂರು, ಹೊಸಪೇಟೆ ಹಾಗೂ ಹರಿಯಾಣದ ರಾಜ್ಯದ ಗುರುಗ್ರಾಮ ಸೇರಿದಂತೆ ಒಟ್ಟು 20 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ ಎಂದು ಇ.ಡಿ. ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಸುಪ್ರೀಂ ಕೋರ್ಟ್ … Continued

ಶಾಸಕ ಸತೀಶ ಸೈಲ್ ಮನೆ ಮೇಲೆ ಇಡಿ ದಾಳಿ ವೇಳೆ ಕೋಟಿಗೂ ಹೆಚ್ಚು ನಗದು, ಕೆಜಿಗಟ್ಟಲೆ ಚಿನ್ನ ಜಪ್ತಿ

ಕಾರವಾರ: ಬೇಲೇಕೇರಿ ಬಂದರಿನಿಂದ ಕಬ್ಬಿಣದ ಅದಿರು ಕಳ್ಳ ಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ್ದ ವೇಳೆ ಅಪಾರ ನಗದು, ಚಿನ್ನ ಮತ್ತು ಬ್ಯಾಂಕ್ ಠೇವಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ತಿಳಿಸಿದೆ. ಈ ಕುರಿತು … Continued

ಕಾರವಾರ : ಶಾಸಕ ಸತೀಶ ಸೈಲ್ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ: ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದ್ದು, ಸದಾಶಿವಗಡದಲ್ಲಿರುವ ಅವರ ಮನೆ ಮೇಲೆ ಇಂದು ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ನಾಲ್ಕು ಕಾರುಗಳಲ್ಲಿ ಬಂದಿರುವ ಇ.ಡಿ.ಅಧಿಕಾರಿಗಳ ತಂಡವು … Continued

ಬಳ್ಳಾರಿ ಜಿಲ್ಲೆಯ ಸಂಸದ, ಇಬ್ಬರು ಶಾಸಕರ ಮನೆ ಮೇಲೆ ಇ.ಡಿ ದಾಳಿ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ( ಇ.ಡಿ)ವು ಬುಧವಾರ ಬೆಳಗ್ಗೆ ದಾಳಿ ನಡೆಸಿದೆಎಂದು ವರದಿಯಾಗಿದೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆರಬಹುದು ಎಂದು ಭಾವಿಸಲಾಗಿದೆ. ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ, ಶಾಸಕ ಬಿ. … Continued

ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ

ತುಮಕೂರು: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ, ಮೇಲೆ ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಲ್ಲದೆ, ನೆಲಮಂಗಲದ … Continued