ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇ.ಡಿ.ಯೇ ದಂಗು

ರಾಂಚಿ: ಜಾರ್ಖಂಡ್ ಸಚಿವ ಅಲಂಗೀರ್ ಆಲಮ್‌ ಅವರ ಆಪ್ತ ಕಾರ್ಯದರ್ಶಿ ಸಂಜೀವ ಲಾಲ ಮನೆ ಸೇರಿದಂತೆ ರಾಂಚಿಯ ಅನೇಕ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ಆರಂಭಿಸಿದೆ. ದಾಳಿ ವೇಳೆ ಸಂಜೀವ ಲಾಲ ಅವರ ಮನೆಯ ಸಹಾಯಕನಿಂದ ಅ 20 ರಿಂದ 30 ಕೋಟಿ ರೂಪಾಯಿ ಎಂದು ಅಂದಾಜಿಸಲಾದ ಬೃಹತ್ ಮೊತ್ತದ ನಗದು ಪತ್ತೆಯಾಗಿದೆ. ಎಣಿಕೆಯನ್ನು … Continued

ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನವದೆಹಲಿ: ದೆಹಲಿ ವಕ್ಫ್ ಮಂಡಳಿಯ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬಂಧಿಸಿದೆ ಎಂದು ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಇ.ಡಿ. ಮುಂದೆ ಹಾಜರಾಗಿದ್ದರು. ಸೋಮವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು … Continued

ವೀಡಿಯೊ…| ‘ಒಂದು ಕಾಲದಲ್ಲಿ ಅರವಿಂದ ಕೇಜ್ರಿವಾಲ್ ನನ್ನೊಂದಿಗೆ ಸಾರಾಯಿ ವಿರುದ್ಧ ಧ್ವನಿ ಎತ್ತಿದ್ದರು, ಆದರೆ ಈಗ….’: ಕೇಜ್ರಿವಾಲ್ ಬಂಧನದ ಬಗ್ಗೆ ಅಣ್ಣಾ ಹಜಾರೆ

ನವದೆಹಲಿ : ದಶಕದ ಹಿಂದೆ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನೊಂದಿಗೆ ಸಾರಾಯಿ ವಿರುದ್ಧ ಹೋರಾಟ ನಡೆಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿ ರೂಪಿಸದಂತೆ ಎಚ್ಚರಿಸಿದ್ದೆ ಎಂದು ಹೇಳಿದ್ದಾರೆ. 2010ರ ಲೋಕಪಾಲ ಚಳವಳಿಯ ಮುಂಚೂಣಿ ನಾಯಕರಾಗಿದ್ದ ಅಣ್ಣಾ ಹಜಾರೆ ಜೊತೆ ಹೋರಾಟದಲ್ಲಿ … Continued

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

ನವದೆಹಲಿ : ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಗುರುವಾರ (ಮಾರ್ಚ್ 21) ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwa ಆ) ಅವರನ್ನು ಬಂಧಿಸಿದೆ. ಅವರ ಬಂಧನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್​ ನಿರಾಕರಿಸಿದ ನಂತರ ಗುರುವಾರ ಸಂಜೆ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ … Continued

ʼಸುದೀಪ ಬ್ಯಾನರ್ಜಿಯನ್ನು ಬಂಧಿಸಿ…ಸಿಬಿಐ, ಇಡಿ ತನಿಖೆ ನಡೆಸಿʼ : ತಮ್ಮದೇ ಪಕ್ಷದ ಸಂಸದನ ಬಂಧನಕ್ಕೆ ಒತ್ತಾಯಿಸಿದ ಟಿಎಂಸಿ ನಾಯಕ…!

ಕೋಲ್ಕತ್ತಾ : ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮದೇ ಪಕ್ಷದ ಸಂಸದ ಸುದೀಪ ಬ್ಯಾನರ್ಜಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಸಿಬಿಐ ತನಿಖೆ ನಡೆಸಬೇಕು ಎಂದು ತೃಣಮೂಲ ಕಾಂಗ್ರೆಸ್‌ ಪಕ್ಷದ ಮಾಜಿ ವಕ್ತಾರ ಕುನಾಲ ಘೋಷ್ ಶನಿವಾರ ಒತ್ತಾಯಿಸಿದ್ದಾರೆ. X ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, ಸಂಸದ ಸುದೀಪ ಬ್ಯಾನರ್ಜಿ ಬ್ಯಾಂಕ್ … Continued

ಸಾಯಿಸುವ ಉದ್ದೇಶದಿಂದಲೇ 800 ಜನರ ಗುಂಪಿನಿಂದ ದಾಳಿ’: ಪಶ್ಚಿಮ ಬಂಗಾಳದ ದಾಳಿ ಘಟನೆ ಬಗ್ಗೆ ಇ.ಡಿ.

ನವದೆಹಲಿ : ತೃಣಮೂಲ ಕಾಂಗ್ರೆಸ್‌ ನಾಯಕರೊಬ್ಬರ ಬೆಂಬಲಿಗರು ತನ್ನ ಅಧಿಕಾರಿಗಳ ಮೇಲೆ ನಡೆದ ದಾಳಿಯ ಬಗ್ಗೆ ವಿವರಗಳನ್ನು ನೀಡಿದ ಜಾರಿ ನಿರ್ದೇಶನಾಲಯವು ಗುಂಪು 800-1,000 ಜನರನ್ನು ಒಳಗೊಂಡಿದ್ದು, “ಸಾವಿಗೆ ಕಾರಣವಾಗುವ ಉದ್ದೇಶ” ಇತ್ತು ಎಂದು ಹೇಳಿದೆ. ಇ.ಡಿ.ಯ ಮೂವರು ಅಧಿಕಾರಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ಜನಸಮೂಹದಲ್ಲಿರುವ ಜನರು ತಮ್ಮ ಸಿಬ್ಬಂದಿಯ ಮೊಬೈಲ್ ಫೋನ್‌ಗಳು, ವ್ಯಾಲೆಟ್‌ಗಳು ಮತ್ತು … Continued

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಕುಟುಂಬದ ಆಪ್ತನನ್ನು ಬಂಧಿಸಿದ ಇ.ಡಿ.

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರ ಸಹಚರನನ್ನು ಬಂಧಿಸಿದೆ ಎಂದು ಅಧಿಕೃತ ಮೂಲಗಳು ಶನಿವಾರ (ನವೆಂಬರ್ 11) ತಿಳಿಸಿವೆ. ‘ಸಹವರ್ತಿ’ ಅಮಿತ್ ಕತ್ಯಾಲ್ ಅವರನ್ನು ಶುಕ್ರವಾರ ಕೇಂದ್ರೀಯ … Continued

ಇ.ಡಿ. ತನಿಖೆಯ ನಂತರ ಮಹದೇವ ಬುಕ್, ಇತರ 21 ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ ನಿರ್ಬಂಧಿಸಿದ ಕೇಂದ್ರ

ನವದೆಹಲಿ: ಜಾರಿ ನಿರ್ದೇಶನಾಲಯ(ಇ.ಡಿ.) ತನಿಖೆಯ ನಂತರ ಮಹದೇವ ಬುಕ್ ಹಾಗೂ 21 ಇತರ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಕೇಂದ್ರ ನಿರ್ಬಂಧಿಸಿದೆ ಮಹದೇವ ಬೆಟ್ಟಿಂಗ್ ಅಪ್ಲಿಕೇಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆಯ ಮಧ್ಯೆ ಮಹದೇವ ಬುಕ್ ಸೇರಿದಂತೆ ಕನಿಷ್ಠ 22 ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ ಗಳು ಮತ್ತು ವೆಬ್‌ಸೈಟ್‌ಗಳನ್ನು ಕೇಂದ್ರವು ಭಾನುವಾರ ನಿರ್ಬಂಧಿಸಿದೆ. ಮಾಹಿತಿ ತಂತ್ರಜ್ಞಾನ … Continued

ಡಿಎಂಕೆ ಸಂಸದ ಎ ರಾಜಾಗೆ ಸಂಬಂಧಿಸಿದ 15 ಬೇನಾಮಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಂಡ ಇ.ಡಿ.

ನವದೆಹಲಿ : ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಡಿಎಂಕೆ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಎ ರಾಜಾ ಅವರಿಗೆ ಸೇರಿದ ಸುಮಾರು 55 ಕೋಟಿ ಮೌಲ್ಯದ 15 ಸ್ಥಿರ “ಬೇನಾಮಿ” ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿದೆ. ಎ ರಾಜಾ ಅವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಂಎಲ್‌ಎ ಅಡಿಯಲ್ಲಿ … Continued

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗಳ ಮೇಲೆ ಇ.ಡಿ. ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಡಿಸಿಸಿ) ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿಯ ಮನೆ, ಕಚೇರಿ, ಫಾರಂ ಹೌಸ್‌ಗಳ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳ ತಂಡ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ ಅವರಿಗೆ ಸೇರಿದ ಒಟ್ಟು 3 ನಿವಾಸದ ಮೇಲೆ … Continued