ವಿಡಿಯೊ | ಜಂಕ್‌ಫುಡ್‌ ತಿಂದ್ರೆ ಹೊಟ್ಟೆಯಲ್ಲಿ ಹುಳು : ಶಿಕ್ಷಕರ ಪ್ರಾತ್ಯಕ್ಷಿಕೆಯ ಪಾಠದಿಂದ ಹೆದರಿ ಗಳಗಳನೆ ಅತ್ತ ಮಕ್ಕಳು !

ಆರೋಗ್ಯಕರ ಆಹಾರ ಸೇವನೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಡಲು ಶಿಕ್ಷಕರೊಬ್ಬರು ನಡೆಸಿದ ತರಗತಿ ಪ್ರಾತ್ಯಕ್ಷಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಜಂಕ್‌ಫುಡ್‌ ಸೇವನೆಯಿಂದ ಉಂಟಾಗುವ ಅಪಾಯಗಳನ್ನು ವಿವರಿಸುವ ಉದ್ದೇಶದಿಂದ ಶಿಕ್ಷಕರು ಮಕ್ಕಳಿಗೆ ‘ಹೊಟ್ಟೆಯೊಳಗಿನ ಹುಳುಗಳ’ ದೃಶ್ಯ ತೋರಿಸಿದ್ದು, ಇದರಿಂದ ಕೆಲ ಮಕ್ಕಳು ಭಯಭೀತರಾಗಿರುವ ವಿಡಿಯೋ ವೈರಲ್‌ ಆಗಿದೆ. ಎಕ್ಸ್‌ ಬಳಕೆದಾರರಾದ ನೀತು ಖಂಡೇಲವಾಲ ಅವರು … Continued

ಪಿಐಎಸ್‌ಎ 2025 ವರದಿ : ಜಾಗತಿಕವಾಗಿ ವಿದ್ಯಾರ್ಥಿಗಳ ಓದು, ಗಣಿತ ಸಾಮರ್ಥ್ಯದಲ್ಲಿ ಭಾರಿ ಕುಸಿತ ; ಎಐ ಬಳಕೆಯಿಂದ ಮತ್ತಷ್ಟು ಸಂಕೀರ್ಣ

ಪ್ಯಾರಿಸ್: ಜಗತ್ತಿನಾದ್ಯಂತ 15 ವರ್ಷದ ವಿದ್ಯಾರ್ಥಿಗಳು ಏನು ಕಲಿಯುತ್ತಿದ್ದಾರೆ? ಅವರು ಓದಿದ್ದನ್ನು ಎಷ್ಟು ಆಳವಾಗಿ ಅರ್ಥಮಾಡಿಕೊಳ್ಳುತ್ತಿದ್ದಾರೆ? ಗಣಿತ ಮತ್ತು ವಿಜ್ಞಾನವನ್ನು ಎಷ್ಟು ಪರಿಣಾಮಕಾರಿಯಾಗಿ ಬಳಸಬಲ್ಲರು? ಸ್ಮಾರ್ಟ್‌ಫೋನ್‌, ಸಾಮಾಜಿಕ ಜಾಲತಾಣ, ಡಿಜಿಟಲ್ ಸಾಧನಗಳು ಹಾಗೂ ಕೃತಕ ಬುದ್ಧಿಮತ್ತೆ (AI) ಅವರ ಕಲಿಕೆಯ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತಿವೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕುವ ಆರ್ಥಿಕ … Continued

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ವೇಗ : ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ ನಿಲೇಕಣಿ ನೇತೃತ್ವದ ಕಾರ್ಯಪಡೆ

ನವದೆಹಲಿ : ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ಅದರ ಬೆನ್ನಲ್ಲೇ ದೇಶಾದ್ಯಂತ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಯನ್ನು ಸಮಗ್ರವಾಗಿ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ಫೋಸಿಸ್ ಸಹ-ಸ್ಥಾಪಕ ನಂದನ್ ನಿಲೇಕಣಿ ನೇತೃತ್ವದ ಉನ್ನತ ಮಟ್ಟದ ಕಾರ್ಯಪಡೆ (High-Powered Task Force – HPTF) ಸಾರ್ವಜನಿಕರಿಂದ … Continued

ಉತ್ತರ ಭಾರತದ ಮಹಿಳೆಯರ ಕುರಿತು ಡಿಎಂಕೆ ನಾಯಕ ದಯಾನಿಧಿ ಮಾರನ್ ವಿವಾದಾತ್ಮಕ ಹೇಳಿಕೆ

ಚೆನ್ನೈ: ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರು ಉತ್ತರ ಭಾರತ ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಕೆ ಮಾಡಿ ನೀಡಿರುವ ಹೇಳಿಕೆಯೊಂದು ಇದೀಗ ದೊಡ್ಡ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಚೆನ್ನೈನ ಕ್ವೈಡ್-ಎ-ಮಿಲ್ಲತ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಮಾರನ್, “ತಮಿಳುನಾಡಿನಲ್ಲಿ ಹೆಣ್ಣುಮಕ್ಕಳಿಗೆ ಓದಲು ಪ್ರೋತ್ಸಾಹ ನೀಡಲಾಗುತ್ತದೆ. ಆದರೆ ಉತ್ತರ ಭಾರತದಲ್ಲಿ ಮಹಿಳೆಯರನ್ನು ಅಡುಗೆ ಮನೆಗೆ … Continued

ವೀಡಿಯೊ..| ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ; ಸಭೆಯಲ್ಲಿ ಮಧು ಬಂಗಾಪ್ಪಗೆ ಮುಜುಗರ : ಕ್ರಮಕ್ಕೆ ಸೂಚನೆ

ಬೆಂಗಳೂರು: ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ. ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ. ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ … Continued

ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಶಿಕ್ಷಕರು…!

ರಾಮನಗರ: ಶಾಲೆಯ ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಘಟನೆ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಶಾಲೆಯ ಮುಂದೆ ಪೋಷಕರು ಗಲಾಟೆ ನಡೆಸಿದ್ದಾರೆ. ಶಾಲೆಗೆ ಬರುವಾಗ ಎರಡು ಜಡೆಗಳನ್ನು ಹಾಕಿಲ್ಲ ಎಂಬ ಕಾರಣಕ್ಕೆ ಶಾಲಾ ಶಿಕ್ಷಕರು ಎಂಟನೇ ತರಗತಿಯಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರ ಜಡೆಗಳನ್ನು ಕತ್ತರಿಸಿದ್ದಾರೆ … Continued

ನಾಳೆ (ಮೇ 9) ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಎಲ್ಲಿ ನೋಡುವುದು..? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam) ಫಲಿತಾಂಶವು ಮೇ 9ರ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ದಿನಾಂಕ: 25.03.2024 … Continued

5, 8, 9ನೇ ತರಗತಿ ಬೋರ್ಡ್‌ ಪರೀಕ್ಷೆ : ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ; ಫಲಿತಾಂಶ ಪ್ರಕಟಿಸಿದಂತೆ ಆದೇಶ

ನವದೆಹಲಿ: 5, 8 ಮತ್ತು 9ನೇ ತರಗತಿ ಬೋರ್ಡ್‌ ಪರೀಕ್ಷೆ ಕುರಿತು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ, ಈ ತರಗತಿಗಳ ಬೋರ್ಡ್‌ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಪೀಠ ಆದೇಶಿಸಿದೆ. ಈ ಕುರಿತು ಎರಡು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ರಾಜ್ಯ … Continued

ಏಪ್ರಿಲ್‌ ಎರಡನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ..?

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಬೇಗನೆ ಪ್ರಕಟವಾಗುವ ಸಾಧ್ಯತೆ ಇದೆ. ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯ ಹಂತಕ್ಕೆ ತಲುಪಿದ್ದು, ಇದೇ ಏಪ್ರಿಲ್‌ 10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಯಾರಿ ನಡೆಸಿದೆ ಎಂದು ಹೇಳಲಾಗಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್‌ 1ರಿಂದ … Continued

ಶಾಲೆಗಳಲ್ಲಿ ‘ಭಗವದ್ಗೀತೆ’ ಬೋಧನೆ ಪರಿಣಾಮಕಾರಿ ಅನುಷ್ಠಾನ : ಗುಜರಾತ್ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ಗಾಂಧಿನಗರ : ಶಾಲೆಗಳಲ್ಲಿ ಭಗವದ್ಗೀತೆ ಕಲಿಸುವ ಶಿಕ್ಷಣ ಇಲಾಖೆಯ ಇತ್ತೀಚಿನ ನಿರ್ಧಾರದ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯವನ್ನು ಗುಜರಾತ್ ವಿಧಾನಸಭೆಯು ಬುಧವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಆಮ್ ಆದ್ಮಿ ಪಕ್ಷವು (ಎಎಪಿ) ನಿರ್ಣಯವನ್ನು ಸ್ವಾಗತಿಸಿ ಅದಕ್ಕೆ ತನ್ನ ಬೆಂಬಲವನ್ನು ನೀಡಿದರೆ, ಕಾಂಗ್ರೆಸ್ ಸದಸ್ಯರು ಆರಂಭದಲ್ಲಿ ಪ್ರತಿಭಟನೆ ಮಾಡಿದರು. … Continued