ಜಮ್ಮು- ಕಾಶ್ಮೀರ | ಭಯೋತ್ಪಾದಕರಿಂದ ಐಇಡಿ ಸ್ಫೋಟ ; ಇಬ್ಬರು ಯೋಧರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭಯೋತ್ಪಾದಕರು ನಡೆಸಿದ ಶಂಕಿತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಜಮ್ಮು ಕಾಶ್ಮೀರದ ಭಟ್ಟಲ್ ಪ್ರದೇಶದ ಫಾರ್ವರ್ಡ್ ಪೋಸ್ಟ್ ಬಳಿ ಮಧ್ಯಾಹ್ನ 3:50ರ ಸುಮಾರಿಗೆ ಪ್ರಬಲ ಸ್ಫೋಟ ಸಂಭವಿಸಿದಾಗ ಗಸ್ತು ತಿರುಗುತ್ತಿದ್ದ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. … Continued