ಬಜರಂಗದಳ ನಿಷೇಧದ ಉಲ್ಲೇಖ: ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಹಾಕಿದ ಈಶ್ವರಪ್ಪ

ಕಲಬುರಗಿ: ಬಜರಂಗದಳ ನಿಷೇಧವು ಸೇರಿದಂತೆ ಹಲವುಭರವಸೆಗಳಿರುವ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಗುರುವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಹೇಳಿದ ಕಾಂಗ್ರೆಸ್‌ ಪ್ರಣಾಳಿಕೆಯೇ ಆಕ್ರೋಶಗೊಂಡ ಈಶ್ವರಪ್ಪ, ಇದರಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇಶಕ್ಕೆ … Continued

ಬಿಜೆಪಿ, ಆರ್‌ಎಸ್‌ಎಸ್‌ ಕಾರ್ಯಕರ್ತರು ಮೇಲಿನ ಸುಳ್ಳು ಕೇಸ್ ವಾಪಸ್ ಪಡೆಯುತ್ತೇವೆ: ಸಚಿವ ಈಶ್ವರಪ್ಪ

ಬೆಳಗಾವಿ: ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆಯುತ್ತೇವೆ’ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮವರ ಮೇಲೆ ಹಲವೆಡೆ ಸುಳ್ಳು ಪ್ರಕರಣಗಳನ್ನು ಹಾಕಲಾಗಿಕಿದೆ. ಈಗ ನಮಗೂ ಶಕ್ತಿ ಇದೆ. ವಾಪಸ್ ಪಡೆಯುತ್ತೇವೆ … Continued

ರಾಜ್ಯ ಬಿಜೆಪಿಯಲ್ಲಿ ಗೊಂದಲ ಇರುವುದು ನಿಜ, ಶೀಘ್ರವೇ ಇತ್ಯರ್ಥ : ಈಶ್ವರಪ್ಪ ವಿಶ್ವಾಸ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಬಂದು ಹೋದ ಮೇಲೆ ಎಲ್ಲ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೇಳುವವರು ಕೇಳುವವರು ಇದ್ದಾರೆ. ಹಾಗಾಗಿಯೇ ಅರುಣ್‌ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು. … Continued

ಮಹತ್ವದ ಸುದ್ದಿ… ಕೊರೊನಾ ಉಲ್ಬಣದ ಕಾರಣ ಜಿಪಂ, ತಾಪಂ ಚುನಾವಣೆ ಮುಂದೂಡಿಕೆಗೆ ಸಚಿವ ಸಂಪುಟದಲ್ಲಿ ತೀರ್ಮಾನ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದಂತೆ ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ಹಾಗೂ ತಾಲೂಕು ಪಂಚಾಯತ ಚುನಾವಣೆ ಮುಂದೂಡಿಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ.ಈಶ್ವರಪ್ಪ, ರಾಜ್ಯದಲ್ಲಿ ಜಿಪಂ, ತಾಪಂ ಚುನಾವಣೆ ಸಮೀಪಿಸುತ್ತಿದೆ. ಕೋವಿಡ್ ಹೆಚ್ಚಳದಿಂದ … Continued

ಸಿಎಂ ಬಿಎಸ್‌ವೈ-ಈಶ್ವರಪ್ಪ ವಿಚಾರ ಶೀಘ್ರವೇ ಬಗೆಹರಿಯಲಿದೆ:ಕಟೀಲು

ಮಂಗಳೂರು: ಈಗಾಗಲೇ ಸಚಿವ ಈಶ್ವರಪ್ಪ ಮತ್ತು ಸಂಬಂಧಪಟ್ಟವರ ಜೊತೆ ಮಾತನಾಡಿದ್ದೇವೆ. ಏನೂ ಸಮಸ್ಯೆ ಆಗದಂತೆ ಬಗೆಹರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹೇಳಿದ್ದಾರೆ ಮುಖ್ಯಮಂತ್ರಿ ಯಡಿಯುರಪ್ಪ ಅವರ ಹಸ್ತಕ್ಷೇಪದ ಕುರಿತು ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಹೀಗಾಗಿ ಕುಳಿತು ಪರಸ್ಪರ … Continued

ನನ್ನ ಸಿಎಂ ನಡುವೆ ವೈಯಕ್ತಿಕ ಏನೂ ಇಲ್ಲ, ನಾನು ಪಕ್ಷಕ್ಕೆ ಯಾವತ್ತೂ ಲಾಯಲ್‌, ರಾಜೀನಾಮೆ‌ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

ಮೈಸೂರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಅನುದಾನ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಸ್ತಕ್ಷೇಪ ವಿರೋಧಿಸಿ ರಾಜ್ಯಪಾಲರಿಗೆ ಹಾಗೂ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದ ಸಚಿವ ಈಶ್ವರಪ್ಪ ಈಗ ಮತ್ತೊಮ್ಮೆ ತಾವು ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಚಾಮುಂಡಿದೇವಿ ದರ್ಶನದ ಬಳಿಕ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲಾಖೆ ಗಮನಕ್ಕೆ ತರದೆ ನೇರವಾಗಿ ಕೆಲವು ಶಾಸಕರಿಗೆ ಅನುದಾನ … Continued

ಈಶ್ವರಪ್ಪ ಏನು ತಪ್ಪು ಮಾಡಿದ್ದಾರೆ..? ಕ್ಯಾಬಿನೆಟ್‌ ಸಚಿವರಿಗೆ ಅಧಿಕಾರ ಇಲ್ಲವೆಂದ್ರೆ ಹೇಗೆ?: ಈಶ್ವರಪ್ಪ ಪರ ಯತ್ನಾಳ್ ಬ್ಯಾಟ್‌ ‌

ವಿಜಯಪುರ: ಸಚಿವ ಈಶ್ವರಪ್ಪನವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾಡಿದ ಆರೋಪಕ್ಕೆ ಮಹತ್ವ ನೀಡಬೇಕು.ಈಶ್ವರಪ್ಪ ಏನು ತಪ್ಪು ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಈಶ್ವರಪ್ಪ ಪರ ಬ್ಯಾಟ ಬೀಸಿದ್ದಾರೆ. ವಿಜಯಪುರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯನ್ನು ಈ ಹಿಂದೆ ಕಟ್ಟಿದವರಲ್ಲಿ ಈಶ್ವರಪ್ಪ ಕೂಡ ಒಬ್ಬರು. … Continued

ಸಚಿವ ಕೆ.ಎಸ್‌.ಈಶ್ವರಪ್ಪ ವರ್ತನೆ ಸರಿಯಲ್ಲ: ಸಚಿವ ಸಿ.ಸಿ.ಪಾಟೀಲ

ಗದಗ: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್‌. ಈಶ್ವರಪ್ಪ ರಾಜ್ಯಪಾಲರು ಹಾಗೂ ಪಕ್ಷದ ವರಿಷ್ಠರಿಗೆ ದೂರು ನೀಡಿದ್ದು ಖಂಡನೀಯ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಇಂಥ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗುರ ಉಂಟು ಮಾಡಿದ್ದು ಸರಿಯಲ್ಲ ಎಂದರು. ಉಭಯ ನಾಯಕರು ಒಂದೇ ಜಿಲ್ಲೆಯವರು. … Continued

ಯತ್ನಾಳ ಆರೋಪಗಳಿಗೆ ಈಶ್ವರಪ್ಪ ಬೀಗಮುದ್ರೆ: ಕಾಂಗ್ರೆಸ್‌ ಟೀಕೆ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಡುತ್ತಿದ್ದ ಆರೋಪಗಳಿಗೆ ಸಚಿವ ಕೆ.ಎಸ್‌. ಈಶ್ವರಪ್ಪ ಬೀಗಮುದ್ರೆ ಒತ್ತಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ. ಬಿಜೆಪಿ ವಿರುದ್ಧ ಟ್ವೀಟ್‌ ಮಾಡಿದ ಕಾಂಗ್ರೆಸ್‌, ಬಿಜೆಪಿ ಸರಕಾರದಲ್ಲಿ ಭೃಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತವಿದ್ದು, ರಾಜ್ಯ ಅನಾಥವಾಗಿದೆ ಎಂದು ತಿಳಿಸಿದೆ. ಬಿಜೆಪಿ ಕೂಡಲೇ ಸರಕಾರವನ್ನು ವಿಸರ್ಜಿಸಬೇಕು. ಕೊರೊನಾ ಸೋಂಕಿನಲ್ಲಿ ಭೃಷ್ಟಾಚಾರ, ನೆರೆ ಪರಿಹಾರದಲ್ಲಿ ಭೃಷ್ಟಾಚಾರ, ವರ್ಗಾವಣೆ, … Continued

ಭಿನ್ನಾಭಿಪ್ರಾಯಗಳ ಬಗ್ಗೆ  ಸಿಎಂ ಜತೆ ಚರ್ಚಿಸಿ: ಸಚಿವ ಈಶ್ವರಪ್ಪಗೆ ಬೊಮ್ಮಾಯಿ ಮನವಿ

ಬೆಂಗಳೂರು: ಅನುದಾನ ಬಿಡುಗಡೆ ವಿಚಾರ ಆಡಳಿತಾತ್ಮಕವಾದದ್ದು. ಈ ವಿಚಾರದ ಬಗ್ಗೆ ಭಿನ್ನಾಭಿಪ್ರಾಯ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಲಾಖೆಯ … Continued