ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆ ಫಲಿತಾಂಶ : ಬಿಜೆಪಿ ಪ್ರಾಬಲ್ಯ

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗಮನಾರ್ಹ ಗೆಲುವು ಸಾಧಿಸಿದೆ. ಪ್ರಾಥಮಿಕ ಫಲಿತಾಂಶಗಳ ಪ್ರಕಾರ, ರಾಜ್ಯದ ಗ್ರಾಮ ಪಂಚಾಯಿತ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಈಗಾಗಲೇ 724 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯ ಜೊತೆಗೆ, ಅದರ ಮಿತ್ರಪಕ್ಷಗಳಾದ ಶಿವಸೇನೆಯ ಶಿಂಧೆ ಬಣ ಮತ್ತು ಎನ್‌ಸಿಪಿಯ ಅಜಿತ್ ಪವಾರ್‌ … Continued

ಮಹಾರಾಷ್ಟ್ರ ಶಾಸಕರ ಅನರ್ಹತೆ ಪ್ರಕರಣ: ತೀರ್ಪು ನೀಡಲು ವಿಧಾನಸಭಾ ಸ್ಪೀಕರ್‌ ಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಈ ಹಿಂದಿನ ಶಿವಸೇನೆ ಪಕ್ಷದ ಬಂಡಾಯ ಸದಸ್ಯರ ವಿರುದ್ಧದ ಅನರ್ಹತೆ ಪ್ರಕರಣದ ಕುರಿತಾದ ತೀರ್ಪನ್ನು ಈ ವರ್ಷದ ಡಿಸೆಂಬರ್ 31ರ ಒಳಗೆ ಮತ್ತು ಎನ್‌ಸಿಪಿ ಶಾಸಕರ ವಿರುದ್ಧ ಅನರ್ಹತೆಯನ್ನು 2024ರ ಜನವರಿ 24ರ ಒಳಗೆ ನೀಡುವಂತೆ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಶಿವಸೇನೆಯ ಬಂಡಾಯ ಶಾಸಕರ ವಿರುದ್ಧ … Continued

ಸ್ಪೀಕರ್ ನಮ್ಮ ಆದೇಶ ಸೋಲಿಸಲು ಸಾಧ್ಯವಿಲ್ಲ : ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಶುಕ್ರವಾರ (ಅಕ್ಟೋಬರ್ 13) ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಅವರನ್ನು ಬೆಂಬಲಿಸುವ ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸುವಲ್ಲಿ ವಿಳಂಬವಾದ ಬಗ್ಗೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು. ಮಹಾರಾಷ್ಟ್ರದ ಶಿಂಧೆ ಬಣದ ಶಾಸಕರ ಅನರ್ಹತೆ ಪ್ರಕರಣವನ್ನು ತುರ್ತಾಗಿ ನಿರ್ಧರಿಸುವಂತೆ ಕೋರಿ ಶಿವಸೇನೆಯ ಉದ್ಧವ್‌ ಠಾಕ್ರೆ ಬಣದ ಶಾಸಕ … Continued

ರಾಹುಲ್ ಶೆವಾಲೆ ಲೋಕಸಭೆಯಲ್ಲಿ ಶಿವಸೇನೆ ನಾಯಕ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

ನವದೆಹಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ರಾಹುಲ್ ಶೆವಾಲೆ ಅವರನ್ನು ಸಂಸತ್ತಿನ ಕೆಳಮನೆಯಲ್ಲಿ ಶಿವಸೇನೆ ನಾಯಕ ಎಂದು ಮಾನ್ಯತೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಆದರೆ, ಈ ಬಗ್ಗೆ ಲೋಕಸಭೆ ಸ್ಪೀಕರ್ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಮೂಲಗಳ ಪ್ರಕಾರ, ಲೋಕಸಭೆಯಲ್ಲಿ ಶಿವಸೇನೆ ನಾಯಕನ ವಿಷಯದ ಬಗ್ಗೆ ಸ್ಪೀಕರ್ ಜುಲೈ … Continued

ಮಹಾರಾಷ್ಟ್ರ ಸರ್ಕಾರ ಪತನ ಸನ್ನಿಹಿತ: ಏಕನಾಥ ಶಿಂಧೆ ಬಣಕ್ಕೆ ಶಿವಸೇನೆಯ 42 ಶಾಸಕರ ಬೆಂಬಲ-ಬಂಡಾಯ ಶಾಸಕರ ಬಣ

ಮುಂಬೈ: ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಯ ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನ ಬಹುತೇಕ ಸನ್ನಿಹಿತವಾದಂತೆ ಕಾಣುತ್ತಿದೆ. ಶಿವಸೇನೆಯಮತ್ತೆ ಮೂವರು ಶಾಸಕರು ಗುವಾಹತಿ ತಲುಪಿದ್ದು, ಏಕನಾಥ ಶಿಂಧೆ ಪಾಳಯ ಸೇರಿದ್ದಾರೆ. ಶಿವಸೇನೆಯ 42 ಶಾಸಕರು ತಮ್ಮ ಬಣಕ್ಕೆ ನಿಷ್ಠೆ ವ್ಯಕ್ತಪಡಿಸಿದ್ದಾರೆ ಎಂದು ಏಕನಾಥ ಶಿಂಧೆ ಹೇಳಿಕೊಂಡಿದ್ದಾರೆ. ಮುಖ್ಯಮಂತ್ರಿ ಉದ್ದವ್ … Continued