ಎನ್‌ಡಿಎ 300ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ : ಉತ್ತರ ಪ್ರದೇಶದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿರುವ ಇಂಡಿಯಾ ಮೈತ್ರಿಕೂಟ

ನವದೆಹಲಿ: ೨೦೨೪ರ ಲೋಕಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಆರಂಭಿಕ ಪ್ರವೃತ್ತಿಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ೩೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಏತನ್ಮಧ್ಯೆ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು ೨೧೦ ಸ್ಥಾನಗಳಲ್ಲಿ ಮುಂದಿದ್ದು, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿದೆ. ಉತ್ತರ … Continued

ಲೋಕಸಭೆ ಚುನಾವಣೆ 2024 : ಎನ್‌ಡಿಎ 400 ಸ್ಥಾನಗಳನ್ನು ದಾಟಬಹುದು ಎಂದ ಮೂರು ಎಕ್ಸಿಟ್‌ ಪೋಲ್‌ ಗಳು…

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಲೋಕಸಭೆಯ 543 ಸ್ಥಾನಗಳಲ್ಲಿ 350 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ಶನಿವಾರದಂದು ಹೆಚ್ಚಿನ ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕನಿಷ್ಠ 350 ಸ್ಥಾನಗಳನ್ನು ಗೆದ್ದರೂ, 400 ಸ್ಥಾನಗಳ ಮೈಲಿಗಲ್ಲು ದಾಟಲು ವಿಫಲವಾಗಲಿದೆ ಎಂದು 10 ಎಕ್ಸಿಟ್ ಪೋಲ್‌ಗಳು ಸೂಚಿಸಿವೆ. ಆದಾಗ್ಯೂ, … Continued

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ಹೇಳಿದ್ದಾರೆ. ಇಂದು, ಶುಕ್ರವಾರ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ಉಪಾಹಾರ ಸೇವನೆ ಬಳಿಕ … Continued

ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು : ಮುಂದಿನ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಈ ಸ್ಥಾನಗಳಿಗೆ ಜೂನ್ 13ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 13ರಂದು ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ … Continued

‘ಯಾರೂ ಮೋದಿಗೆ ಮತ ಹಾಕಬೇಡಿ’ ಎಂದು ತರಗತಿಯೊಳಗೆ ಹೇಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕನ ಬಂಧನ

ಮುಜಾಫರಪುರ : ತನ್ನ ತರಗತಿಯ ಮಕ್ಕಳಿಗೆ “ಯಾರೂ ಮೋದಿಗೆ ಮತ ಹಾಕಬೇಡಿ” ಎಂದು ಹೇಳುತ್ತಿದ್ದ ಆರೋಪದ ಮೇಲೆ ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮುಜಾಫರಪುರ ಎಸ್‌ಎಸ್‌ಪಿ ರಾಕೇಶಕುಮಾರ ಪ್ರಕಾರ, ಜಿಲ್ಲಾ ಶಿಕ್ಷಣಾಧಿಕಾರಿ ಎಫ್‌ಐಆರ್ ದಾಖಲಿಸಿದ ನಂತರ, ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಿಕ್ಷಕನ … Continued

ಬಿಜೆಪಿ 300ರ ಆಸುಪಾಸು ಸ್ಥಾನ ಪಡೆಯಬಹದು; ಬಿಜೆಪಿ ಸಂಖ್ಯೆ ಕುಸಿಯುವ ಗ್ರೌಂಡ್ ರಿಯಾಲಿಟಿ ನನಗೆ ಕಾಣುತ್ತಿಲ್ಲ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ :  ರಾಜಕೀಯ ವಿಶ್ಲೇಷಕ ಪ್ರಶಾಂತ ಕಿಶೋರ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಭಾರತೀಯ ಜನತಾ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ 300ರ ಆಸುಪಾಸು ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಥಾನ ಗೆಲ್ಲುವುದರಲ್ಲಿ ಯಾವುದೇ ಅರ್ಥಪೂರ್ಣ ಕುಸಿತದ ಸಾಧ್ಯತೆಯಿಲ್ಲ ಎಂದು ಅವರು ಹೇಳಿದ್ದಾರೆ. “ಎಲ್ಲ ಟೀಕೆಗಳು ಮತ್ತು ಚರ್ಚೆಗಳ ನಂತರ, ಭಾರತದ … Continued

ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ…

ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಶುಕ್ರವಾರ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಸ್ಥಾನಗಳಲ್ಲಿ ನಡೆಯುತ್ತಿದೆ. ಕೇರಳದ ಎಲ್ಲಾ 20 ಲೋಕಸಭಾ ಸ್ಥಾನಗಳು, ಕರ್ನಾಟಕದ 28 ಸ್ಥಾನಗಳಲ್ಲಿ 14, ರಾಜಸ್ಥಾನದಲ್ಲಿ 13, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ 8, ಮಧ್ಯಪ್ರದೇಶದ 6, ಅಸ್ಸಾಂ ಮತ್ತು ಬಿಹಾರದ ತಲಾ 5 ಕ್ಷೇತ್ರಗಳು, … Continued

ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ನವದೆಹಲಿ : ಸಂಪತ್ತಿನ ಮರು ಹಂಚಿಕೆ ಕುರಿತಾಗಿನ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಘೋಷಣೆಯು ಈಗ ವಿವಾದ ಸೃಷ್ಟಿಸಿದ್ದು, ಈ ನಡುವೆ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ನೀಡಿರುವ ಉತ್ತರಾಧಿಕಾರ ತೆರಿಗೆ ಸಲಹೆ ವಿವಾದದ ಕಿಡಿ ಹೊತ್ತಿಸಿದೆ. ಭಾರತದಲ್ಲಿಯೂ ಅಮೆರಿಕ ಮಾದರಿಯ ಉತ್ತರಾಧಿಕಾರ ತೆರಿಗೆ ಅನ್ವಯಿಸುವಂತೆ ಪಿತ್ರೊಡಾ ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ … Continued

ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued