ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಮತ ಎಣಿಕೆ ವೇಳೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳೊಂದಿಗೆ ವಿವಿ- ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಏಪ್ರಿಲ್‌ 26) ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರ ಪೀಠವು ಇವಿಎಂಗಳ ಬದಲಿಗೆ ಮತಪತ್ರ ಬಳಕೆ ಮಾಡಬೇಕು … Continued

ಸಮುದ್ರದೊಳಗೆ 60 ಅಡಿ ಆಳದ ನೀರಿನಲ್ಲಿ ಮತದಾನ ಜಾಗೃತಿ ಅಭಿಯಾನ | ವೀಕ್ಷಿಸಿ

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ, ಭಾರತೀಯ ಚುನಾವಣಾ ಆಯೋಗವುಮತದಾನ ಜಾಗೃತಿಗೆ ಎಲ್ಲ ಪ್ರಯತ್ನವನ್ನೂ ಮಾಡುತ್ತಿದೆ. ನೀರೊಳಗಿನ ಮತದಾನ ಜಾಗೃತಿ ಮಾಡುವ ಮೂಲಕ ಚುನಾವಣಾ ಆಯೋಗವು ಇತ್ತೀಚೆಗೆ ಒಂದು ವಿಶಿಷ್ಟ ಉಪಕ್ರಮವನ್ನು ಕೈಗೊಂಡಿದೆ. ಅಭಿಯಾನದ ಭಾಗವಾಗಿ, ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ವಿದ್ಯಮಾನವಾದ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಮಹತ್ವವನ್ನು ಎತ್ತಿ ಹಿಡಿಯಲು ನುರಿತ ಸ್ಕೂಬಾ ಡೈವರ್‌ಗಳ ಗುಂಪು … Continued

ಲೋಕಸಭೆ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ನವದೆಹಲಿ : ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರಿಕೆ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು … Continued

ನಾಳೆ ಲೋಕಸಭೆ ಚುನಾವಣೆಯ ದಿನಾಂಕದ ಘೋಷಣೆ

ನವದೆಹಲಿ : 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಶನಿವಾರ (ಮಾರ್ಚ್‌ 16) ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ಮಧ್ಯಾಹ್ನ ತಿಳಿಸಿದೆ. ಚುನಾವಣಾ ಆಯೋಗವು ಸಂಕ್ಷಿಪ್ತ ಹೇಳಿಕೆಯನ್ನು ಎಕ್ಸ್ (ಹಿಂದೆ ಟ್ವಿಟರ್)ನಲ್ಲಿ ಪೋಸ್ಟ್ ಮಾಡಿದ್ದು, ನಾಲ್ಕು ರಾಜ್ಯಗಳ ಅಸೆಂಬ್ಲಿ ಚುನಾವಣೆಗಳ ದಿನಾಂಕಗಳನ್ನು ಅದೇ ಸಮಯದಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಚುನಾವಣಾ … Continued

ಚುನಾವಣಾ ಬಾಂಡ್‌ಗಳು : ಲಾಟರಿಯಿಂದ ಮಿಲ್ಕ್‌ ಶೇಕ್ ಸಂಸ್ಥೆಗಳ ವರೆಗೆ ಟಾಪ್ 20 ದಾನಿಗಳ ಪಟ್ಟಿ…

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಾರ್ಚ್ 14 ರಂದು ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮಾಹಿತಿಯ ಪ್ರಕಾರ ಕಳೆದ ಐದು ವರ್ಷಗಳಲ್ಲಿ ಅತಿದೊಡ್ಡ ದಾನಿಗಳು ಚುನಾವಣಾ ಬಾಂಡ್‌ಗಳ ಮೂಲಕ ವಿವಿಧ ಪಕ್ಷಗಳಿಗೆ ಸುಮಾರು 6,000 ಕೋಟಿ ರೂ.ಗಳನ್ನು ನೀಡಿದ್ದಾರೆ. ಇದರಲ್ಲಿ ಅಗ್ರ 20 ದಾನಿಗಳು ಏಪ್ರಿಲ್ 2019 ಮತ್ತು ಜನವರಿ 2024 ರ … Continued

ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶಕುಮಾರ, ಸುಖಬೀರ್ ಸಿಂಗ್‌ ಸಂಧು ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯು ಗುರುವಾರ (ಮಾರ್ಚ್ 14) ಜ್ಞಾನೇಶಕುಮಾರ ಮತ್ತು ಸುಖಬೀರ್ ಸಿಂಗ್‌ ಸಂಧು ಅವರನ್ನು ಭಾರತದ ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಸಮಿತಿಯ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗೃಹ ಸಚಿವಾಲಯದ ಕಾಶ್ಮೀರ ವಿಭಾಗದ ಮಾಜಿ ಮುಖ್ಯಸ್ಥರಾಗಿ, ಕೇರಳ ಕೇಡರ್‌ನ … Continued

ಸುಪ್ರೀಂ ಕೋರ್ಟ್‌ ಆದೇಶ : ಚುನಾವಣಾ ಬಾಂಡ್‌ ದತ್ತಾಂಶವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಂಗಳವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) 2019ರ ಏಪ್ರಿಲ್ 12ರಿಂದ ರಾಜಕೀಯ ಪಕ್ಷಗಳು ಎನ್‌ಕ್ಯಾಶ್ ಮಾಡಿದ ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ರವಾನಿಸಿದೆ. ಮಂಗಳವಾರ (ಮಾರ್ಚ್ 12) ಸಂಜೆ 5:30ರೊಳಗೆ ಮಾಡಬೇಕೆಂದು ಸೋಮವಾರದ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಅಂಕಿ-ಅಂಶವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದೆ. ಮಾರ್ಚ್ 15, … Continued

ಸಂಸದರು-ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ ರಚಿಸಬೇಕು: ಸುಪ್ರೀಂ ಕೋರ್ಟ್‌ ನಿರ್ದೇಶನ

ನವದೆಹಲಿ: ಸಂಸದರು ಹಾಗೂ ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಚಾರಣೆಗೆ ವಿಶೇಷ ಪೀಠ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನಗಳನ್ನು ನೀಡಿದೆ. ಶಾಸಕರು ಹಾಗೂ ಸಂಸದರ ವಿರುದ್ಧ ಐದು ಸಾವಿರಕ್ಕೂ ಹೆಚ್ಚಿನ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇಂತಹ ಪ್ರಕರಣಗಳಲ್ಲಿ ‘ಅಪರೂಪದ ಹಾಗೂ ಬಲವಾದ ಕಾರಣಗಳು ಇಲ್ಲದಿದ್ದರೆ ವಿಶೇಷ ನ್ಯಾಯಾಲಯಗಳು ವಿಚಾರಣೆಯನ್ನು ಮುಂದೂಡಬಾರದು’ ಎಂದು … Continued