ಲೋಕಸಭೆ ಚುನಾವಣೆ : ಏಪ್ರಿಲ್ 19 ರಿಂದ ಜೂನ್ 1 ರ ನಡುವೆ ಚುನಾವಣಾ ಸಮೀಕ್ಷೆಗಳಿಗೆ ನಿರ್ಬಂಧ

ನವದೆಹಲಿ : ಲೋಕಸಭೆ ಚುನಾವಣೆ 2024 ಮತ್ತು ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಒಡಿಶಾ ಮತ್ತು ಸಿಕ್ಕಿಂದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಚುನಾವಣಾ (ಚುನಾವಣೋತ್ತರ) ಸಮೀಕ್ಷೆಗಳನ್ನು ನಡೆಸುವುದು, ಪ್ರಕಟಿಸುವುದು ಅಥವಾ ಪ್ರಚಾರ ಮಾಡುವುದನ್ನು ನಿಷೇಧಿಸಿ ಚುನಾವಣಾ ಆಯೋಗವು ಶುಕ್ರವಾರ (ಮಾರ್ಚ್ 29) ಅಧಿಸೂಚನೆ ಹೊರಡಿಸಿದೆ. ನಿಷೇಧದ ಅವಧಿಯು ಏಪ್ರಿಲ್ 19 ರಂದು ಬೆಳಿಗ್ಗೆ 7 ರಿಂದ ಪ್ರಾರಂಭವಾಗಲಿದೆ … Continued

ಮೋದಿ..ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂದ ಸಚಿವ ತಂಗಡಗಿ : ಚುನಾವಣೆ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಮೋದಿ ಮೋದಿ ಎಂದು ಕೂಗಿದವರ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ನಾಯಕರು ದೂರು ನೀಡಿದ್ದಾರೆ. ಅವರನ್ನು ಚುನಾವಣ ಪ್ರಕ್ರಿಯೆ ಮತ್ತು ಕಾಂಗ್ರೆಸ್‌ ಪರ ಪ್ರಚಾರದಿಂದ ನಿರ್ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ ಮೀನಾ ಅವರನ್ನು … Continued

ಚುನಾವಣಾ ಆಯೋಗದ ಸೂಚನೆ : ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ತಮಿಳುನಾಡಿನಿಂದ ಬಂದು ಬೆಂಗಳೂರಲ್ಲಿ ಬಾಂಬ್ ಇಡುತ್ತಾರೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ಶೋಭಾ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ಕ್ರಮ ಕೈಗೊಳ್ಳುವಂತೆ … Continued

ವಿಕಸಿತ ಭಾರತ ಸಂದೇಶ ಕಳಿಸುವುದನ್ನು ನಿಲ್ಲಿಸಿ: ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ಸೂಚನೆ

ನವದೆಹಲಿ: ‘ವಿಕಸಿತ ಭಾರತ ಸಂಪರ್ಕ’ ಅಡಿಯಲ್ಲಿ ನಾಗರಿಕರಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗವು ಗುರುವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ. ಈ ವಿಷಯದ ಬಗ್ಗೆ ದೂರುಗಳು ಬಂದ ನಂತರ ಆಯೋಗವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಈ ನಿರ್ದೇಶನ ನೀಡಿದೆ. ನ್ಯಾಯಸಮ್ಮತತೆ ಮತ್ತು ಸಮಾನ ಅವಕಾಶವನ್ನು ಖಾತ್ರಿಪಡಿಸುವ ಗುರಿಯನ್ನು … Continued

ಲೋಕಸಭೆ ಚುನಾವಣೆ : 6 ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಪಶ್ಚಿಮ ಬಂಗಾಳದ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ರಾಜ್ಯಗಳಲ್ಲಿ ಹಲವಾರು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಸೋಮವಾರ ಸೂಚನೆ ನೀಡಿದೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗವು ಆದೇಶಿಸಿದೆ. ಹೆಚ್ಚುವರಿಯಾಗಿ, ಚುನಾವಣಾ ಸಮಿತಿಯು … Continued

ಮಾರ್ಚ್‌ 21ರೊಳಗೆ ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರ ನೀಡಿ : ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ತಾಕೀತು

ನವದೆಹಲಿ: ಚುನಾವಣಾ ಬಾಂಡ್‌ ಕುರಿತ ಸಂಪೂರ್ಣ ಮಾಹಿತಿಯನ್ನು ಬಹಿರಂಗಗೊಳಿಸಬೇಕು ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(ಎಸ್‌ಬಿಐ)ಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಾಕೀತು ಮಾಡಿದೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇದೇ ತಿಂಗಳು ಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇಕು ಎಂದು ಎಸ್‌ಬಿಐಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ತಾಕೀತು ಮಾಡಿದೆ. … Continued

ಲೋಕಸಭಾ ಚುನಾವಣೆ ಘೋಷಣೆ : 7 ಹಂತಗಳಲ್ಲಿ ಮತದಾನ ; ಜೂನ್‌ 4ಕ್ಕೆ ಫಲಿತಾಂಶ

ನವದೆಹಲಿ: ಲೋಕಸಭೆಗೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್‌ 19ರಿಂದ ಜೂನ್‌ 1ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದೆ. ಚುನಾವಣಾ ಮಾದರಿ ನೀತಿ ಸಂಹಿತೆ (Model Code of Conduct) ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ದೇಶದಲ್ಲಿ … Continued

ಚುನಾವಣಾ ಬಾಂಡ್‌ ಸಂಖ್ಯೆಗಳನ್ನು ಬಹಿರಂಗಪಡಿಸದ ಎಸ್‌ ಬಿಐ : ಸುಪ್ರೀಂ ಕೋರ್ಟ್‌ ನೋಟಿಸ್‌

ನವದೆಹಲಿ: ಚುನಾವಣಾ ಬಾಂಡ್‌ಗಳನ್ನು ಗುರುತಿಸಲು ಸಹಾಯ ಮಾಡುವ ಬಾಂಡ್‌ಗಳ ಸಂಖ್ಯೆಗಳನ್ನು ಬಹಿರಂಗಪಡಿಸದ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ)ಕ್ಕೆ ಈ ಬಗ್ಗೆ ಪ್ರತಿಕ್ರಿಯಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಮಾರ್ಚ್ 11ರಂದು ನ್ಯಾಯಾಲಯ ನೀಡಿದ್ದ ಆದೇಶವನ್ನು ಎಸ್‌ಬಿಐ ಸಂಪೂರ್ಣ ಪಾಲಿಸಿಲ್ಲ ಎಂದು ಮುಖ್ಯ … Continued

ಎಸ್‌ಬಿಐ ನೀಡಿದ ಚುನಾವಣಾ ಬಾಂಡ್‌ಗಳ ಡೇಟಾ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್

ನವದೆಹಲಿ : ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯತ್ತ ಒಂದು ದೊಡ್ಡ ಕ್ರಮದಲ್ಲಿ, ಭಾರತೀಯ ಚುನಾವಣಾ ಆಯೋಗವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ಚುನಾವಣಾ ಬಾಂಡ್‌ಗಳ ಡೇಟಾವನ್ನು ಅಪ್‌ಲೋಡ್ ಮಾಡಿದೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಗಡುವಿಗೆ ಒಂದು ದಿನ ಮುಂಚಿತವಾಗಿ ಗುರುವಾರ ವಿವರಗಳನ್ನು ಅಪ್‌ಲೋಡ್ ಮಾಡಲಾಗಿದೆ. ಡೇಟಾವು – ₹ 1 ಲಕ್ಷ, ₹ 10 ಲಕ್ಷ … Continued

ʻಶರದ್ ಪವಾರ್ʼ ಪಕ್ಷಕ್ಕೆ ಹೊಸ ಹೆಸರು ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ : ಎನ್‌ ಸಿಪಿ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಅಜಿತ ಪವಾರ್‌ ಬಣಕ್ಕೆ ಕಳೆದುಕೊಂಡ ನಂತರ ಶರದ್ ಪವಾರ್ ಬಣವನ್ನು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ- ಶರದ್ ಚಂದ್ರ ಪವಾರ್ ಎಂದು ಚುನಾವಣಾ ಆಯೋಗವು ಹೆಸರನ್ನು ನಿಗದಿಪಡಿಸಿದೆ. ಶರದ್ ಪವಾರ್ ಅವರು ಚುನಾವಣಾ ಆಯೋಗದ ಮುಂದೆ ಪಕ್ಷದ ಮೂರು ಹೊಸ ಹೆಸರುಗಳು ಮತ್ತು ಚಿಹ್ನೆಗಳನ್ನು ಪ್ರಸ್ತಾಪಿಸಿದ್ದರು. … Continued