ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಒಂದೇ ಹಂತದಲ್ಲಿ ಮತದಾನ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಪ್ರಕಟಿಸಿದ್ದು, ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮಂಗಳವಾರ ತಿಳಿಸಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರು, “ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ಹೊಸ ದಾಖಲೆ ಮಾಡಲಿದ್ದೇವೆ” ಎಂದು ಅವರು … Continued

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Govt Employees) 2024-2029ನೇ ಅವಧಿಯ ಚುನಾವಣೆಯಲ್ಲಿ ಸಂಘದ ಹಾಲಿ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ. ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಖಜಾಂಚಿ ಸ್ಥಾನಕ್ಕೆ ಶುಕ್ರವಾರ ಚುನಾವಾಣೆ ನಡೆದಿದ್ದು, ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ (CS Shadakshari) ಅವರು ಅವರು ಎರಡನೇ ಬಾರಿ ಹಾಗೂ ಖಜಾಂಚಿಯಾಗಿ ಶಿವರುದ್ರಯ್ಯ ವಿ.ವಿ ಆಯ್ಕೆಯಾಗಿದ್ದಾರೆ. … Continued

“ನಿಮ್ಮ ಅವಿರತ ಪ್ರಯತ್ನಗಳು ಇಲ್ಲದಿದ್ದರೆ….”: ಎಸ್.ಎಂ.ಕೃಷ್ಣಗೆ ಧನ್ಯವಾದ ಹೇಳಿ ಪತ್ರ ಬರೆದಿದ್ದ ಅಂದಿನ ಅಮೆರಿಕದ ಅಧ್ಯಕ್ಷ ಜಾನ್ ಕೆನಡಿ

ಬೆಂಗಳೂರು : ಇಂದು, ಮಂಗಳವಾರ ನಿಧನರಾದ ಪದ್ಮವಿಭೂಷಣ ಎಸ್.ಎಂ.ಕೃಷ್ಣ ಅವರು ಅರ್ಧ ಶತಮಾನದ ರಾಜಕೀಯ ಜೀವನದಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ವಿದೇಶಾಂಗ ಸಚಿವರಾಗಿ ಹೀಗೆ ಹಲವಾರು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ ದೇಶದ ರಾಜಕೀಯದಲ್ಲಿ ಆಳವಾದ ಧುಮುಕುವ ಮೊದಲು, ಅವರು ಅಮೆರಿಕದಲ್ಲಿ ಕಾನೂನು ವಿದ್ಯಾರ್ಥಿಯಾಗಿದ್ದಾಗ ಅಲ್ಲಿನ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು…!. ವರ್ಚಸ್ವಿ … Continued

“ನೀವು ಗೆದ್ದಾಗ ಇವಿಎಂ ತಿರುಚುವುದಿಲ್ಲವೇ ? ; ಬ್ಯಾಲೆಟ್ ಪೇಪರ್ ಮೂಲಕ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಚುನಾವಣೆಯಲ್ಲಿ ಮತದಾನದಕ್ಕೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ವ್ಯವಸ್ಥೆ ಮರುಜಾರಿಗೊಳಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಚಂದ್ರಬಾಬು ನಾಯ್ಡು ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ಅವರಂತಹ ನಾಯಕರು ವಿದ್ಯುನ್ಮಾನ ಮತಯಂತ್ರ (ಇವಿಎಂ) ತಿರುಚಿರುವುದನ್ನು ಪ್ರಶ್ನಿಸಿದ್ದಾರೆ ಎಂಬ ಅರ್ಜಿದಾರರ ವಾದ ತೂಕದಿಂದ ಕೂಡಿಲ್ಲ … Continued

ವೀಡಿಯೊ..| ಚುನಾವಣೆ : ಕರ್ತವ್ಯ ನಿರತ ಹಿರಿಯ ಅಧಿಕಾರಿಗೆ ಕಪಾಳಮೋಕ್ಷ ಮಾಡಿ ದರ್ಪ ತೋರಿದ ಅಭ್ಯರ್ಥಿ…!

ಜೈಪುರ: ರಾಜಸ್ತಾನದ  ಟೋಂಕ್ ಜಿಲ್ಲೆಯ ಡಿಯೋಲಿ-ಉನಿಯಾರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತಗಟ್ಟೆಯ ಹೊರಗೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದ್ದು, ಸ್ವತಂತ್ರ ಅಭ್ಯರ್ಥಿ ನರೇಶ ಮೀನಾ ಅವರನ್ನು ರಾಜಸ್ಥಾನ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಗ್ರಾಮೀಣ ರಸ್ತೆಯಲ್ಲಿ ಮೆರವಣಿಗೆ ನಡೆಸುತ್ತಿದ್ದಾಗ ರಕ್ಷಣಾ ಕವಚಗಳು ಮತ್ತು ಹೆಲ್ಮೆಟ್‌ಗಳನ್ನು ಧರಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ನಡೆಸಿದ … Continued

ರಝಾಕಾರರು ಹಚ್ಚಿದ ಬೆಂಕಿಯಿಂದ ನಿಮ್ಮ ಕುಟುಂಬ ಸುಟ್ಟು ಹೋಗಿದ್ದನ್ನು ಮರೆಯಬೇಡಿ ; ಮಲ್ಲಿಕಾರ್ಜುನ ಖರ್ಗೆಗೆ ನೆನಪಿಸಿದ ಯೋಗಿ

ಮುಂಬೈ: ಕಾಂಗ್ರೆಸ್‌ನ ಓಲೈಕೆ ರಾಜಕಾರಣದ ಮಾಡುತ್ತಿದೆ ಎಂದು ಆರೋಪಿಸಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ ಓಲೈಕೆಗಾಗಿ ತಮ್ಮ ಕುಟುಂಬದ ತ್ಯಾಗವನ್ನು ಕಾಂಗ್ರೆಸ್ ಅಧ್ಯಕ್ಷರು ಮರೆತಿದ್ದಾರೆ ಎಂದು ಮಂಗಳವಾರ ಹೇಳಿದ್ದಾರೆ. ಖರ್ಗೆಯವರ ಬಾಲ್ಯದ ದುರಂತದ ಬಗ್ಗೆ ಪ್ರಸ್ತಾಪಿಸಿದ ಯೋಗಿ ಆದಿತ್ಯನಾಥ, 1948 ರಲ್ಲಿ … Continued

ವಿಧಾನ ಪರಿಷತ್​ ಉಪಚುನಾವಣೆ ; ಬಿಜೆಪಿಗೆ ಭರ್ಜರಿ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಸೋಮವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಸ್ಪರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಕ್ಷೇತ್ರ ತೆರವಾಗಿದ್ದರಿಂದ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು. ಇಂದು (ಅ.24) ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಚುನಾವಣೆಯಲ್ಲಿ … Continued

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಟಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭೆ … Continued

ವಿಧಾನಸಭೆ ಚುನಾವಣೆ : ಹರ್ಯಾಣದಲ್ಲಿ ಕಾಂಗ್ರೆಸ್ಸಿಗೆ ಜೈ, ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಎಂದ ಬಹುತೇಕ ಎಕ್ಸಿಟ್‌ ಪೋಲ್‌ಗಳು…

ನವದೆಹಲಿ : ಹರ್ಯಾಣದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಶನಿವಾರ ಮುಕ್ತಾಯವಾಗಿದ್ದು, ಕಾಂಗ್ರೆಸ್‌ ಪಕ್ಷವು ಮುಂದಿನ ಸರ್ಕಾರವನ್ನು ರಚಿಸುವ ಸಾಧ್ಯತೆಯಿದೆ ಎಂದು ಮತಗಟ್ಟೆ ಸಮೀಕ್ಷೆ (exit polls)ಗಳು ಅಂದಾಜಿಸಿವೆ. ಹೀಗಾದರೆ ಬಿಜೆಪಿಯ 10 ವರ್ಷಗಳ ಅಧಿಕಾರದ ಓಟಕ್ಕೆ ತಡೆ ಬೀಳಲಿದೆ. ಒಟ್ಟು ಏಳು ಎಕ್ಸಿಟ್ ಪೋಲ್‌ಗಳು ಹರಿಯಾಣದ 90 ಸ್ಥಾನಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು … Continued

ವೀಡಿಯೊ..| ಮತಚಲಾಯಿಸಲು ಮತಗಟ್ಟೆಗೆ ಕುದುರೆ ಏರಿ ಬಂದ ಕುರುಕ್ಷೇತ್ರದ ಸಂಸದ-ಕೈಗಾರಿಕೋದ್ಯಮಿ ನವೀನ್‌ ಜಿಂದಾಲ್‌…!

ಕುರುಕ್ಷೇತ್ರ (ಹರಿಯಾಣ): ಹರಿಯಾಣ ವಿಧಾನಸಭಾ ಚುನಾವಣೆಗೆ ಶನಿವಾರ ಮತದಾನ ಮಾಡಲು ಬಿಜೆಪಿ ಸಂಸದ ಮತ್ತು ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಅವರು ಕುದುರೆಯ ಮೇಲೆ ಬಂದು ಮತಚಲಾಯಿಸಿದ್ದಾರೆ. ಅವರು ಮತದಾನ ಕೇಂದ್ರದವರೆಗೆ ಕುದುರೆ ಸವಾರಿ ಮಾಡಿಕೊಂಡು ಮತಗಟ್ಟೆಗೆ ಆಗಮಿಸುತ್ತಿರುವ ವೀಡಿಯೊ ವೈರಲ್‌ ಆಗಿದೆ. ಮತ ಚಲಾಯಿಸಲು ಜಿಂದಾಲ್ ಅವರು ಕುದುರೆಯ ಮೇಲೆ ಬರಲು ನಿರ್ಧರಿಸಿದ್ದಾರೆ ಏಕೆಂದರೆ ಅದು … Continued