ಈಗ ಲೋಕಸಭೆ ಚುನಾವಣೆ ನಡೆದರೆ ಗೆಲ್ಲುವುದು ಯಾರು..? : ʼಮೂಡ್ ಆಫ್ ದಿ ನೇಷನ್ʼ ಸರ್ವೆ ಏನು ಹೇಳುತ್ತದೆ…?

2025ರಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಚುನಾವಣಾ ಪ್ರಾಬಲ್ಯವನ್ನು ಮುಂದುವರೆಸಿತು, ದೆಹಲಿ ಮತ್ತು ಬಿಹಾರದಲ್ಲಿ ಗೆಲುವು ಸಾಧಿಸಿತು.  ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಮತ್ತು ಮಹಾರಾಷ್ಟ್ರದ ಇತರ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಭಾರೀ ಗೆಲುವಿನೊಂದಿಗೆ 2026 ಪ್ರಾರಂಭವಾಯಿತು. ಇದೇವೇಳೆ ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಈಗ … Continued

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಮುಹೂರ್ತ ಫಿಕ್ಸ್‌

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದ್ದು, ಜನವರಿ 20ರಂದು ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ. ಈ ಕುರಿತು ಬಿಜೆಪಿಯ ರಾಷ್ಟ್ರೀಯ ಚುನಾವಣಾ ಅಧಿಕಾರಿ ಕೆ. ಲಕ್ಷ್ಮಣ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ. ಜನವರಿ 19ರಂದು (ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ) ನಾಮಪತ್ರ ಸಲ್ಲಿಸಲಾಗುತ್ತದೆ. ಜನವರಿ 19 … Continued

ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆ :ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ; ಬಿಜೆಪಿ ಅತಿದೊಡ್ಡ ಪಕ್ಷ

 ಮುಂಬೈ: ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆಯುವತ್ತ ಸಾಗಿದೆ. ಒಟ್ಟು 227 ಸದಸ್ಯ ಬಲದ ಪಾಲಿಕೆಯಲ್ಲಿ ಮಹಾಯುತಿ 120 ಸ್ಥಾನಗಳಲ್ಲಿ ಮುಂದಿದ್ದು,  ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮಹಾಯುತಿ ಮೈತ್ರಿಕೂಟ 120 ಸ್ಥಾನಗಳಲ್ಲಿ ಇದರಲ್ಲಿ ಬಿಜೆಪಿ ಏಕಾಂಗಿಯಾಗಿ 93 ಸ್ಥಾನಗಳನ್ನು ಗೆದ್ದಿದ್ದರೆ, ಮಿತ್ರಪಕ್ಷ ಶಿವಸೇನೆ 27 ಸ್ಥಾನಗಳಲ್ಲಿ … Continued

ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆ ; ಬಿಜೆಪಿ ಮೈತ್ರಿಕೂಟ-ಶಿವಸೇನೆಯಲ್ಲಿ ಗೆಲ್ಲೋದು ಯಾರು ?. ಎಕ್ಸಿಟ್ ಪೋಲ್‌ ಹೇಳಿದ್ದೇನು..?

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಿದ್ದಿದ್ದು, ಬಿಜೆಪಿ ಮತ್ತು ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟ (ಮಹಾಯುತಿ) ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆಯಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಬೃಹನ್ಮುಂಬೈ ಮಹಾನಗರ ಪಾಲಿಕೆ (BMC)ಯ ಒಟ್ಟು 227 ವಾರ್ಡ್‌ಗಳ ಪೈಕಿ … Continued

ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೃಷ್ಣಮೂರ್ತಿ ಕೆರೆಗದ್ದೆ ಆಯ್ಕೆ

ಶಿರಸಿ: ಶಿರಸಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಮುಂದಿನ 3 ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ವಿಜಯ ಕರ್ನಾಟಕ ವರದಿಗಾರ ಕೃಷ್ಣಮೂರ್ತಿ ಕೆರೆಗದ್ದೆ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶನಿವಾರ ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ನಡೆದ ಚುನಾವಣೆಯಲ್ಲಿ ಕೃಷ್ಣಮೂರ್ತಿ ಕೆರೆಗದ್ದೆ 23 ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ. ವಿಶ್ವವಾಣಿ ಜಿಲ್ಲಾ ವರದಿಗಾರ್ತಿ ವಿನುತಾ ಹೆಗಡೆ 6 ಮತಗಳನ್ನು ಪಡೆದರು. … Continued

ಎಸ್‌ ಐಆರ್‌ : ತಮಿಳುನಾಡು ಮತದಾರರ ಪಟ್ಟಿಯಿಂದ 97 ಲಕ್ಷ ಹೆಸರುಗಳ ಕಡಿತ ; ಮತದಾರರ ಸಂಖ್ಯೆಯಲ್ಲಿ 15.2% ಕುಸಿತ

ಚೆನ್ನೈ: ತಮಿಳುನಾಡು ಚುನಾವಣಾ ಆಯೋಗವು ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ (Special Intensive Revision – SIR) ಕಾರ್ಯವನ್ನು ಪೂರ್ಣಗೊಳಿಸಿದ್ದು, ರಾಜ್ಯದ ಒಟ್ಟು 6.41 ಕೋಟಿ ಮತದಾರರ ಪೈಕಿ ಬರೋಬ್ಬರಿ 97.4 ಲಕ್ಷ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ. ಈ ಮೂಲಕ ರಾಜ್ಯದ ಒಟ್ಟು ಮತದಾರರ ಸಂಖ್ಯೆಯಲ್ಲಿ ಶೇ. 15.2 ರಷ್ಟು ಭಾರಿ ಇಳಿಕೆಯಾಗಿದ್ದು, … Continued

ಜನವರಿ 15ಕ್ಕೆ ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಚುನಾವಣೆ

ಮುಂಬೈ: 2022ರಿಂದ ಬಾಕಿ ಉಳಿದಿದ್ದ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಅಂತಿಮವಾಗಿ ಜನವರಿ 15 ರಂದು ನಡೆಯಲಿವೆ. ಒಟ್ಟು 29 ಮಹಾನಗರ ಪಾಲಿಕೆಗಳು, 32 ಜಿಲ್ಲಾ ಪರಿಷತ್ತುಗಳು ಮತ್ತು 336 ಪಂಚಾಯತ ಸಮಿತಿಗಳಿಗೆ ಮತದಾನ ನಡೆಯಲಿದೆ. ಮರುದಿನ ಜನವರಿ 16 ರಂದು ಮತ ಎಣಿಕೆ ನಡೆಯಲಿದೆ. ಬೃಹನ್‌ಮುಂಬೈ ಮಹಾನಗರ ಪಾಲಿಕೆ (BMC), ಪುಣೆ ಮತ್ತು ಥಾಣೆಯಂತಹ … Continued

ಸಿಎಂ ಸಿದ್ದರಾಮಯ್ಯ ಆಯ್ಕೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು ಸಂದೀಪ ಮೆಹ್ತಾ ಅವರಿದ್ದ ಪೀಠ ಸೋಮವಾರ ನೋಟಿಸ್‌ ನೀಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ವರುಣಾ ಕ್ಷೇತ್ರದ ಮತದಾರ ಕೆ. … Continued

ಕೇರಳದ ಪಂಚಾಯತ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ “ಸೋನಿಯಾ ಗಾಂಧಿ”…!

ಮುನ್ನಾರ್ (ಕೇರಳ): ಸೋನಿಯಾ ಗಾಂಧಿ ಅವರು ಕೇರಳದ ಮುನ್ನಾರ್‌ನಿಂದ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದಕ್ಕಿಂತ ಆಶ್ಚರ್ಯಕರ ವಿಷಯವೆಂದರೆ, ಅವರು ಬಿಜೆಪಿ ಅಭ್ಯರ್ಥಿ…! ಕೇರಳದಲ್ಲಿ, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಡಿಸೆಂಬರ್ 9 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಸಲಾಗುತ್ತಿದೆ, ಡಿಸೆಂಬರ್ 13 ರಂದು ಮತ ಎಣಿಕೆ ನಡೆಯಲಿದೆ. ಕೇರಳದ ಗಿರಿಧಾಮವಾದ ಮುನ್ನಾರ್‌ನಲ್ಲಿ, ಸ್ಥಳೀಯ ಪಂಚಾಯತ್‌ನ ನಲ್ಲತಣ್ಣಿ … Continued

2014 ರಲ್ಲಿ ಕಾಂಗ್ರೆಸ್ ಸೋಲಿಗೆ ಸಿಐಎ, ಮೊಸಾದ್ ಸಂಚು ರೂಪಿಸಿದ್ದವು: ಕಾಂಗ್ರೆಸ್‌ ಮಾಜಿ ಸಂಸದರ ಹೇಳಿಕೆ

ನವದೆಹಲಿ: 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಅಮೆರಿಕಾದ ಗುಪ್ತಚರ ಸಂಸ್ಥೆ ಸಿಐಎ (CIA) ಮತ್ತು ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸ್ಸಾದ್ (Mossad) ಸಂಚು ರೂಪಿಸಿದ್ದವು ಎಂದು ಕಾಂಗ್ರೆಸ್‌ನ ಮಾಜಿ ಸಂಸದರಾದ ಕುಮಾರ ಕೇತ್ಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಸಂವಿಧಾನ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇತ್ಕರ್, ಈ ಹೇಳಿಕೆ … Continued