ಮುಸ್ಲಿಂ ಸ್ಪೀಕರಿಗೆ ಬಿಜೆಪಿಯ ದೊಡ್ಡ ದೊಡ್ಡ ನಾಯಕರೂ ನಮಸ್ಕರಿಸ್ತಾರೆ, ಇದನ್ನು ಕಾಂಗ್ರೆಸ್‌ ಮಾಡಿದೆ : ಸಚಿವ ಜಮೀರ್ ಅಹಮ್ಮದ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸ್ಪೀಕರ್ ಯು.ಟಿ. ಖಾದರ್‌ ಅವರಿಗೆ ಕೈಮುಗಿದು ನಮಸ್ಕರಿಸಬೇಕಾಗಿದೆ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಪ್ರಚಾರ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, “ಇಂದು ಬಿಜೆಪಿಯವರು ಎದ್ದು ನಿಂತು ನಮ್ಮ ಯುಟಿ ಖಾದರ್ … Continued

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆ ಫಲಿತಾಂಶ : ಬಿಜೆಪಿ ಪ್ರಾಬಲ್ಯ

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗಮನಾರ್ಹ ಗೆಲುವು ಸಾಧಿಸಿದೆ. ಪ್ರಾಥಮಿಕ ಫಲಿತಾಂಶಗಳ ಪ್ರಕಾರ, ರಾಜ್ಯದ ಗ್ರಾಮ ಪಂಚಾಯಿತ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಈಗಾಗಲೇ 724 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯ ಜೊತೆಗೆ, ಅದರ ಮಿತ್ರಪಕ್ಷಗಳಾದ ಶಿವಸೇನೆಯ ಶಿಂಧೆ ಬಣ ಮತ್ತು ಎನ್‌ಸಿಪಿಯ ಅಜಿತ್ ಪವಾರ್‌ … Continued

ಚುನಾವಣೆಗೆ ಮೂರು ದಿನಗಳ ಮೊದಲು ಬಿಜೆಪಿ ನಾಯಕನ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನಕ್ಕೆ ಮೂರು ದಿನಗಳ ಮೊದಲು ಮಾವೋವಾದಿಗಳು ಚುನಾವಣಾ ಪ್ರಚಾರದಲ್ಲಿದ್ದ ಬಿಜೆಪಿ ನಾಯಕನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಬಿಜೆಪಿ ನಾಯಕ ರತನ್ ದುಬೆ ಅವರು ಬಿಜೆಪಿಯ ನಾರಾಯಣಪುರ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದರು. ಜಿಲ್ಲೆಯ ಕೌಶಲನರ್ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ. ರತನ್‌ ದುಬೆ ಅವರು ಜಿಲ್ಲಾ … Continued

ಪಕ್ಷದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ : 39 ಕಾಂಗ್ರೆಸ್ ನಾಯಕರ ಉಚ್ಚಾಟನೆ

ಭೋಪಾಲ್: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ ಮಧ್ಯಪ್ರದೇಶದ ಕಾಂಗ್ರೆಸ್ 39 ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಿದೆ. ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಕಮಲನಾಥ ಅವರ ನಿರ್ದೇಶನದ ಮೇರೆಗೆ ಈ 39 ನಾಯಕರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ರಾಜ್ಯ … Continued

ರಾಜಸ್ಥಾನ ವಿಧಾನಸಭೆ ಚುನಾವಣೆ ದಿನಾಂಕ ಬದಲಾವಣೆ

ನವದೆಹಲಿ : ಕೇಂದ್ರ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಬುಧವಾರ ಬದಲಾವಣೆ ಮಾಡಿದೆ. ೀಗ ಚುನಾವಣೆ ನವೆಂಬರ್ 23ರ ಬದಲಿಗೆ ನವೆಂಬರ್ 25ರಂದು ನಡೆಯಲಿದೆ. ನಿಗದಿಪಡಿಸಿದ ದಿನಕ್ಕಿಂತ ಎರಡು ದಿನ ತಡವಾಗಿ ಚುನಾವಣೆ ನಡೆಸಲು ಅದು ನಿರ್ಧರಿಸಿದೆ. ನವೆಂಬರ್ 23ರಂದು ರಾಜ್ಯದಲ್ಲಿ ಬಹಳಷ್ಟು ಮದುವೆ ಸಮಾರಂಭಗಳು ಹಾಗೂ ಕಾರ್ಯಕ್ರಮಗಳು ಆಯೋಜನೆಯಾಗಿರುವುದರಿಂದ ನವೆಂಬರ್ 25ಕ್ಕೆ … Continued

ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನಿಟ್ಟುಕೊಂಡು ಹೋದರೆ ಚುನಾವಣೆಯಲ್ಲಿ ಗೆಲುವು ಕಷ್ಟವಾಗಬಹುದು : ಸಿದ್ದರಾಮಯ್ಯಗೆ ಮುನಿಯಪ್ಪ ಎಚ್ಚರಿಕೆ

ಬೆಂಗಳೂರು: ಕಳೆದ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರ ಮುಂದಾಳತ್ವದಲ್ಲಿ ಚುನಾವಣೆ ನಡೆಸಿದರೆ ಗೆಲವು ಕಷ್ಟವಾಗಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲಾ ಕಾಂಗ್ರೆಸ್ಸಿನಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಬಳಿಕ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ. ಸಿದ್ಧರಾಮಯ್ಯ ಪ್ರಭಾವಿ … Continued

ಸಹಕಾರ ಕಾಯಿದೆ: ಐದು ಸಾಮಾನ್ಯ ಸಭೆ ಪೈಕಿ ಮೂರರಲ್ಲಿ ಸದಸ್ಯರು ಭಾಗಿಯಾಗದಿದ್ದರೆ ಮತದಾನದ ಹಕ್ಕು ರದ್ದು- ಹೈಕೋರ್ಟ್‌

ಬೆಂಗಳೂರು: ಹಲವು ಸೇವೆಗಳ ಬಳಕೆಗೆ ಸಂಬಂಧಿಸಿದ ಕರ್ನಾಟಕ ಸಹಕಾರ ಸೊಸೈಟಿಗಳ ಕಾಯಿದೆ 1959ರ ಸೆಕ್ಷನ್‌ 20 (2) (a-v) ಯ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್‌ ಈಚೆಗೆ ಎತ್ತಿ ಹಿಡಿದಿದೆ. ಈ ನಿಬಂಧನೆಯ ಪ್ರಕಾರ ಸದಸ್ಯರು ಐದು ಸಾಮಾನ್ಯ ಸಭೆಗಳ ಪೈಕಿ ಮೂರು ಸಭೆಗಳಲ್ಲಿ ಭಾಗವಹಿಸದಿದ್ದರೆ, ಸತತ ಮೂರು ಸಹಕಾರಿ ವರ್ಷಗಳ ವರೆಗೆ ಇಂತಹ ಕನಿಷ್ಠ … Continued

ಮೇ 4ರ ನಂತರ ವೇತನ ಪರಿಷ್ಕರಣೆ, ಮುಷ್ಕರ ಕೈಬಿಡಲು ಸವದಿ ಮನವಿ

ಬೆಂಗಳೂರು: ಈಗಾಗಲೇ ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಚುನಾವಣೆ ನೀತಿ ಸಂಹಿತೆ ಇರುವುದರಿಂದ 6ನೇ ವೇತನ ಆಯೋಗದಂತೆ ಸಂಬಳ ಹೆಚ್ಚಳ ಸಾಧ್ಯವಾಗಿಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಮಯದಲ್ಲಿ ಸಾರಿಗೆ ಸಂಸ್ಥೆಯ ಸ್ಥಿತಿಗತಿ ಗಮನದಲ್ಲಿಟ್ಟು ಏ. 7 ರಿಂದ ನಡೆಸಲು … Continued

ಅವಳು ಭ್ರಷ್ಟಳು,ಮತ ಹಾಕಬೇಡಿ ಎಂದು ಮಗಳ ವಿರುದ್ಧವೇ ಮತದಾರರಿಗೆ ಮನವಿ ಮಾಡಿದ ಮಾಜಿ ಸಚಿವರ ಪತ್ನಿ..!

ಚೆನ್ನೈ: ಡಿಎಂಕೆ ಮಾಜಿ ಸಚಿವ ಅಲ್ಲಾಡಿ ಅರುಣಾ ಅವರ ವಿಧವೆ ಮತ್ತು ಅಲಂಗುಲಂ ವಿಧಾನಸಭಾ ಕ್ಷೇತ್ರದ ಡಿಎಂಕೆ ಅಭ್ಯರ್ಥಿ ಪೂಂಗೋಥೈ ಅವರ ತಾಯಿ ಕಮಲಾ ಆಲಾಡಿ ಅರುಣಾ ಅವರು ತಮ್ಮ ಮಗಳು “ಹೆಚ್ಚು ಭ್ರಷ್ಟರಾಗಿದ್ದರಿಂದ” ಮತ ಚಲಾಯಿಸಬಾರದು ಎಂದು ಮತದಾರರಿಗೆ ವಿನಂತಿ ಮಾಡಿದ್ದಾರೆ…! ಶನಿವಾರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ತುಣುಕಿನಲ್ಲಿ, ಕಮಲಾ ಅವರು … Continued

ನಿಗದಿತ ಸಮಯಕ್ಕೆ ಜಿಪಂ, ತಾಪಂ ಚುನಾವಣೆ ನಡೆಯಲಿದೆ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆ ಮುಂದೂಡುವುದಿಲ್ಲ ಇಲ್ಲ. ನಿಗದಿತ ಸಮಯಕ್ಕೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ವಿಧಾನಸಭೆಯಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಶಾಸಕ ಸುನೀಲುಕುಮಾರ ಅವರು ವಿಷಯ ಪ್ರಸ್ತಾಪಿಸಿದ ವೇಳೆ ಅವರು ಜಿಪಂ, ತಾಪಂ ಚುನಾವಣೆ ಮುಂದೂಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು … Continued