ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್‌; ಹಲವು ಕಡೆ ದಾಳಿ

ಬೆಂಗಳೂರು: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾ ರೆಡ್ಡಿ ಮನೆ ಹಾಗೂ ಕಚೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ( ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾ ರೆಡ್ಡಿಗೆ ಸೇರಿದ 5 ಸ್ಥಳಗಳ ಮೇಲೆ ಇ.ಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಇದೇ ರೀತಿಯಲ್ಲಿ ಇತರರ ಮೇಲೆ ದಾಳಿ … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್‌ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (actress Ranya Rao) ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ, ಸೋನಿಯಾಗೆ ನೋಟಿಸ್ ನೀಡಲು ದೆಹಲಿ ನ್ಯಾಯಾಲಯ ನಕಾರ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತಿತರರಿಗೆ ಸದ್ಯಕ್ಕೆ ನೋಟಿಸ್ ನೀಡಲು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ನಿರಾಕರಿಸಿದೆ. ಹೆಚ್ಚಿನ ದಾಖಲೆಗಳನ್ನು ಸಲ್ಲಿಸಿ ದೋಷಗಳನ್ನು ಸರಿಪಡಿಸುವಂತೆ ಭ್ರಷ್ಟಾಚಾರ ಕಾಯಿದೆಯಡಿ ರೂಪುಗೊಂಡಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ ಗೋಗ್ನೆ ಅವರು ಜಾರಿ ನಿರ್ದೇಶನಾಲಯಕ್ಕೆ (ಇ … Continued

50 ಕೋಟಿ ರೂ. ನಾಯಿ ಖರೀದಿಸಿದ್ದೇನೆ ಎಂದವನ ಮನೆ ಮೇಲೆ ಇ.ಡಿ. ದಾಳಿ ; ಆದ್ರೆ ನಿಜ ಗೊತ್ತಾಗಿ ಶಾಕ್‌…!

ಬೆಂಗಳೂರು : 50 ಕೋಟಿ ರೂ. ಮೌಲ್ಯದ ಅಪರೂಪದ “ತೋಳ ನಾಯಿ”ಯನ್ನು ಆಮದು ಮಾಡಿಕೊಂಡಿರುವುದಾಗಿ ಹೇಳಿಕೊಂಡ ಬೆಂಗಳೂರಿನ ವ್ಯಕ್ತಿಯೊಬ್ಬರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ED) ಗುರುವಾರ ಶೋಧ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾದ ಆ ವ್ಯಕ್ತಿಯ ಹೇಳಿಕೆಯ ನಂತರ, ಇ.ಡಿ. ಅಧಿಕಾರಿಗಳು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (FEMA) ಸಂಭಾವ್ಯ ಉಲ್ಲಂಘನೆಗಳ ಬಗ್ಗೆ ತನಿಖೆ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ್ತು ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಆರೋಪಪಟ್ಟಿ ಸಲ್ಲಿಸಿದೆ. ವಿಶೇಷ ನ್ಯಾಯಾಲಯವು ಏಪ್ರಿಲ್ 25 ಅನ್ನು ವಿಚಾರಣೆಯ ದಿನಾಂಕವಾಗಿ ನಿಗದಿಪಡಿಸಿದೆ. “ಪ್ರಸ್ತುತ ಪ್ರಾಸಿಕ್ಯೂಷನ್ ದೂರನ್ನು ಮುಂದಿನ ವಿಚಾರಣೆಗೆ ತೆಗೆದುಕೊಳ್ಳಲಾಗುವುದು, … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿಗೆ ಸಂಬಂಧಿಸಿದ ಆಸ್ತಿಗಳ ಮುಟ್ಟುಗೋಲಿಗೆ ಮುಂದಾದ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ವಶಕ್ಕೆ ಪಡೆಯಲು ಜಾರಿ ನಿರ್ದೇಶನಾಲಯ (ED) ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ. ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಪ್ತಿ ಮಾಡಿದ್ದ ₹661 ಕೋಟಿ ಮೌಲ್ಯದ ಸ್ಥಿರ … Continued

ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ​ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು : ಬಹುಕೋಟಿ ಮೌಲ್ಯದ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಬಿ. ನಾಗೇಂದ್ರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ನಾಗೇಂದ್ರ ವಿರುದ್ಧ ನ್ಯಾಯಾಲಯದಲ್ಲಿ ಔಪಚಾರಿಕ … Continued

ಉದ್ಯೋಗಕ್ಕಾಗಿ ಭೂಮಿ ಹಗರಣ : ನಾಳೆ ಲಾಲು ಪ್ರಸಾದ ಯಾದವಗೆ ಇ.ಡಿ. ಸಮನ್ಸ್

ನವದೆಹಲಿ : ಉದ್ಯೋಗಕ್ಕಾಗಿ ಭೂಮಿ ಹಗರಣದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಮಾರ್ಚ್ 19) ವಿಚಾರಣೆಗೆ ಹಾಜರಾಗುವಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. 77 ವರ್ಷದ ಲಾಲು ಪ್ರಸಾದ ಯಾದವ್‌ ಅವರಿಗೆ ಪಾಟ್ನಾದ … Continued

ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ ಬಾಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ಇಡಿ (ED) ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಗುಂಪು…!

ನವದೆಹಲಿ: ಆಪಾದಿತ ಮದ್ಯ ಹಗರದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ತನಿಖೆ ಎದುರಿಸುತ್ತಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರ ನಿವಾಸದಲ್ಲಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮೇಲೆ ಜನರ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಮುಂಜಾನೆ, ಇಡಿಯು ಆಪಾದಿತ ಮದ್ಯ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಬೂಪೇಶ … Continued

ಮದ್ಯ ಹಗರಣ : ಛತ್ತೀಸಗಢ ಮಾಜಿ ಸಿಎಂ ಭೂಪೇಶ ಬಾಘೇಲ್ ಪುತ್ರನ ಒಡೆತನದ ನಿವೇಶನಗಳ ಇ.ಡಿ. ದಾಳಿ

ನವದೆಹಲಿ:  ಚತ್ತೀಸಗಢದ ಆಪಾದಿತ ಮದ್ಯ ಹಗರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಛತ್ತೀಸಗಢದ ದುರ್ಗ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ಚೈತನ್ಯ ಅವರ ಒಡೆತನದ ವಸತಿ ಮತ್ತು ಇತರ ನಿವೇಶನಗಳು ಸೇರಿದಂತೆ 14 ಸ್ಥಳಗಳ ಮೇಲೆ ದಾಳಿ ನಡೆಸಿದೆ. ಶೋಧದ ವೇಳೆ ತನಿಖಾ ಸಂಸ್ಥೆ ಕೆಲವು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು ಮತ್ತು … Continued