ಬಹುಕೋಟಿ ಬೆಟ್ಟಿಂಗ್ ದಂಧೆ ; ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ : ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನಾಭರಣಗಳು ವಶಕ್ಕೆ

ಬೆಂಗಳೂರು : ಜಾರಿ ನಿರ್ದೇಶನಾಲಯವು ಶನಿವಾರ ಭಾರತದಾದ್ಯಂತ ಎರಡು ದಿನಗಳ ಶೋಧ ಕಾರ್ಯಾಚರಣೆ ನಡೆಸಿದ ನಂತರ ಅಕ್ರಮ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ‘ಪಪ್ಪಿ’ ಅವರನ್ನು ಸಿಕ್ಕಿಂನಲ್ಲಿ ಬಂಧಿಸಿದೆ ಎಂದು ವರದಿಯಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು … Continued

ಕಾರವಾರ : ಶಾಸಕ ಸತೀಶ ಸೈಲ್ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ: ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದ್ದು, ಸದಾಶಿವಗಡದಲ್ಲಿರುವ ಅವರ ಮನೆ ಮೇಲೆ ಇಂದು ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ನಾಲ್ಕು ಕಾರುಗಳಲ್ಲಿ ಬಂದಿರುವ ಇ.ಡಿ.ಅಧಿಕಾರಿಗಳ ತಂಡವು … Continued

ಬೆಟ್ಟಿಂಗ್ ಆ್ಯಪ್ ಪ್ರಕರಣ: ಮಾಜಿ ಕ್ರಿಕೆಟರ್‌ ಸುರೇಶ ರೈನಾಗೆ ಇ.ಡಿ. ಸಮನ್ಸ್

ನವದೆಹಲಿ: 1xBet ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಆಗಸ್ಟ್‌ 13) ವಿಚಾರಣೆಗೆ ಹಾಜರಾಗುವಂತೆ ಭಾರತೀಯ ವೀಕ್ಷಕ ವಿವರಣೆಗಾರ ಮತ್ತು ಮಾಜಿ ಕ್ರಿಕೆಟಿಗ ಸುರೇಶ ರೈನಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಅವರು ಹೇಳಿಕೆ ದಾಖಲಿಸಲು ಏಜೆನ್ಸಿಯ ಮುಂದೆ ಹಾಜರಾಗುವ ನಿರೀಕ್ಷೆಯಿದೆ. 1xBET ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಸುರೇಶ ರೈನಾ … Continued

ಅನಿಲ ಅಂಬಾನಿ ಕಂಪನಿಗಳ ವಿರುದ್ಧದ 3,000 ಕೋಟಿ ರೂ. ಸಾಲ ವಂಚನೆ ಪ್ರಕರಣ: ಇ.ಡಿ.ಯಿಂದ ಮೊದಲ ಬಂಧನ

ನವದೆಹಲಿ: ಅನಿಲ ಅಂಬಾನಿ ಅವರ ರಿಲಯನ್ಸ್ ಗ್ರೂಪ್‌ನ ಕಂಪನಿಗಳ ವಿರುದ್ಧದ 3,000 ಕೋಟಿ ರೂ. ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ED) ಮೊದಲ ಬಂಧನ ಮಾಡಿದೆ. 68.2 ಕೋಟಿ ರೂ. ಮೌಲ್ಯದ ನಕಲಿ ಗ್ಯಾರಂಟಿಗಳನ್ನು ಸಲ್ಲಿಸಿದ್ದಕ್ಕಾಗಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಬಿಸ್ವಾಲ್ ಟ್ರೇಡ್‌ಲಿಂಕ್ ಪ್ರೈವೇಟ್ … Continued

ಮುಡಾ ಪ್ರಕರಣ | ಸಿದ್ದರಾಮಯ್ಯ ಪತ್ನಿ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌; ಇ.ಡಿ.ಗೆ ತರಾಟೆ

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ನೀಡಲಾದ ಸಮನ್ಸ್ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಿದ್ದರಾಮಯ್ಯ ಅವರ ಆಪ್ತ … Continued

ಭೂ ವ್ಯವಹಾರ ಪ್ರಕರಣ ; ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯದಿಂದ ಆರೋಪಪಟ್ಟಿ ಸಲ್ಲಿಕೆ

ನವದೆಹಲಿ: 2008 ರಲ್ಲಿ ಹರಿಯಾಣದ ಗುರುಗ್ರಾಮದ ಶಿಕೋಹಪುರ ಗ್ರಾಮದಲ್ಲಿ ನಡೆದ 3.53 ಎಕರೆ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ED) ಗುರುವಾರ (ಜುಲೈ 17) ಆರೋಪಪಟ್ಟಿ ಸಲ್ಲಿಸಿದೆ. ಹಣ ವರ್ಗಾವಣೆ ತಡೆ ಕಾಯ್ದೆ … Continued

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್‌; ಹಲವು ಕಡೆ ದಾಳಿ

ಬೆಂಗಳೂರು: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾ ರೆಡ್ಡಿ ಮನೆ ಹಾಗೂ ಕಚೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ( ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾ ರೆಡ್ಡಿಗೆ ಸೇರಿದ 5 ಸ್ಥಳಗಳ ಮೇಲೆ ಇ.ಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಇದೇ ರೀತಿಯಲ್ಲಿ ಇತರರ ಮೇಲೆ ದಾಳಿ … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್‌ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (actress Ranya Rao) ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ, ಸೋನಿಯಾಗೆ ನೋಟಿಸ್ ನೀಡಲು ದೆಹಲಿ ನ್ಯಾಯಾಲಯ ನಕಾರ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತಿತರರಿಗೆ ಸದ್ಯಕ್ಕೆ ನೋಟಿಸ್ ನೀಡಲು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ನಿರಾಕರಿಸಿದೆ. ಹೆಚ್ಚಿನ ದಾಖಲೆಗಳನ್ನು ಸಲ್ಲಿಸಿ ದೋಷಗಳನ್ನು ಸರಿಪಡಿಸುವಂತೆ ಭ್ರಷ್ಟಾಚಾರ ಕಾಯಿದೆಯಡಿ ರೂಪುಗೊಂಡಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ ಗೋಗ್ನೆ ಅವರು ಜಾರಿ ನಿರ್ದೇಶನಾಲಯಕ್ಕೆ (ಇ … Continued

50 ಕೋಟಿ ರೂ. ನಾಯಿ ಖರೀದಿಸಿದ್ದೇನೆ ಎಂದವನ ಮನೆ ಮೇಲೆ ಇ.ಡಿ. ದಾಳಿ ; ಆದ್ರೆ ನಿಜ ಗೊತ್ತಾಗಿ ಶಾಕ್‌…!

ಬೆಂಗಳೂರು : 50 ಕೋಟಿ ರೂ. ಮೌಲ್ಯದ ಅಪರೂಪದ “ತೋಳ ನಾಯಿ”ಯನ್ನು ಆಮದು ಮಾಡಿಕೊಂಡಿರುವುದಾಗಿ ಹೇಳಿಕೊಂಡ ಬೆಂಗಳೂರಿನ ವ್ಯಕ್ತಿಯೊಬ್ಬರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ED) ಗುರುವಾರ ಶೋಧ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾದ ಆ ವ್ಯಕ್ತಿಯ ಹೇಳಿಕೆಯ ನಂತರ, ಇ.ಡಿ. ಅಧಿಕಾರಿಗಳು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (FEMA) ಸಂಭಾವ್ಯ ಉಲ್ಲಂಘನೆಗಳ ಬಗ್ಗೆ ತನಿಖೆ … Continued