ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನವದೆಹಲಿ: ದೆಹಲಿ ವಕ್ಫ್ ಮಂಡಳಿಯ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬಂಧಿಸಿದೆ ಎಂದು ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಇ.ಡಿ. ಮುಂದೆ ಹಾಜರಾಗಿದ್ದರು. ಸೋಮವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು … Continued

ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರ 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಏಪ್ರಿಲ್ 18 ರಂದು ಜಪ್ತಿ ಮಾಡಿದೆ. ಲಗತ್ತಿಸಲಾದ ಆಸ್ತಿಗಳಲ್ಲಿ ಕುಂದ್ರಾ ಅವರ ಪತ್ನಿ ನಟಿ ಶಿಲ್ಪಾ ಶೆಟ್ಟಿ ಅವರ ಮುಂಬೈನ ಜುಹುದಲ್ಲಿನ ವಸತಿ … Continued

ಚುನಾವಣಾ ಬಾಂಡ್, ಉತ್ತರ ಭಾರತ-ದಕ್ಷಿಣ ಭಾರತ ಚರ್ಚೆ, ಸಿಬಿಐ – ಇ.ಡಿ. ದುರ್ಬಳಕೆ ಆರೋಪ, ಬಿಜೆಪಿ ಮಾಡೆಲ್-ಕಾಂಗ್ರೆಸ್‌ ಮಾಡೆಲ್‌ ಬಗ್ಗೆ ಮೋದಿ ಹೇಳಿದ್ದೇನು..?

2047ರ ವೇಳೆಗೆ ವಿಕಸಿತ ಭಾರತದ ಬಗೆಗಿನ ತಮ್ಮ ವಿಶಾಲವಾದ ದೃಷ್ಟಿಕೋನದಿಂದ ಹಿಡಿದು ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ತಮ್ಮ ಮಧ್ಯಸ್ಥಿಕೆಯವರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ನೀಡಿದ ಸಂದರ್ಶನದಲ್ಲಿ ಎಲ್ಲಾ ಪ್ರಮುಖ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ದಶಕದಲ್ಲಿ ರಾಷ್ಟ್ರದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣ ನಿಭಾಯಿಸುವಲ್ಲಿ ಜಾರಿ … Continued

ಅರವಿಂದ ಕೇಜ್ರಿವಾಲ್ ಜೈಲಿನಲ್ಲಿ ಉಳಿಯಬೇಕು : ಬಂಧನ ಕ್ರಮ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಏಪ್ರಿಲ್ 3 ರಂದು ಸುದೀರ್ಘ ವಾದಗಳನ್ನು ಆಲಿಸಿದ ನಂತರ ಕಾಯ್ದಿರಿಸಿದ್ದ ತೀರ್ಪನ್ನು ಇಂದು, ಮಂಗಳವಾರ ಪ್ರಕಟಿಸಿದ್ದಾರೆ. … Continued

ಮಾಜಿ ಸಿಎಂ ಹೇಮಂತ ಸೊರೇನ್‌ ಗೆ ಸೇರಿದ 31 ಕೋಟಿ ರೂ. ಮೌಲ್ಯದ ರಾಂಚಿ ಭೂಮಿ ಜಪ್ತಿ ಮಾಡಿದ ಇ.ಡಿ.

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಅವರ ಸಹಚರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ರಾಂಚಿಯಲ್ಲಿ 8.86 ಎಕರೆ ಭೂಮಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ ಎಂದು ಫೆಡರಲ್ ಏಜೆನ್ಸಿ ಗುರುವಾರ ತಿಳಿಸಿದೆ. ನಗರ ವಸತಿ ಆಸ್ತಿ ದರದ ಪ್ರಕಾರ ಇದರ ಮೌಲ್ಯ 31,07,02,480 ರೂ. ಎಂದು ಹೇಳಲಾಗಿದೆ. 48 … Continued

ದೆಹಲಿ ಸಿಎಂ ಕೇಜ್ರಿವಾಲಗೆ ಏಪ್ರಿಲ್ 15ರ ವರೆಗೆ ನ್ಯಾಯಾಂಗ ಬಂಧನ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಏಪ್ರಿಲ್ 15ರ ವರೆಗೆ ದೆಹಲಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ರೌಸ್ ಅವೆನ್ಯೂ ನ್ಯಾಯಾಲಯ ಸಂಕೀರ್ಣದಲ್ಲಿರುವ ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಈ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇಜ್ರಿವಾಲಗೆ ದೆಹಲಿ ಹೈಕೋರ್ಟ್‌ ನಿಂದ ಸಿಗದ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾರಿ ನಿರ್ದೇಶನಾಲಯದ (ಇ ಡಿ) ಕ್ಸಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡುವ ಕುರಿತು ಮಧ್ಯಂತರ ಆದೇಶ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ತನ್ನ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ … Continued

ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲ್‌ ಬಳಸಿದ್ದ ಮೊಬೈಲ್ ನಾಪತ್ತೆ ; ವರದಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ರೂಪಿಸುವಾಗ ಬಳಸುತ್ತಿದ್ದರು ಎನ್ನಲಾದ ತಮ್ಮ ಮೊಬೈಲ್ ಫೋನ್ ಅನ್ನು ಎಲ್ಲಿ ಇರಿಸಿದ್ದಾರೆ ಎಂಬುದು ನೆನಪಿಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ವಿಚಾರಣೆಯ ಸಂದರ್ಭದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೇ ಟಿವಿ ವರದಿ ಮಾಡಿವೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ … Continued

ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಮೊದಲನೇ ಸರ್ಕಾರಿ ಆದೇಶ ಹೊರಡಿಸಿದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವಾಗಲೇ ಸರ್ಕಾರಕ್ಕೆ ತಮ್ಮ ಮೊದಲ ಆದೇಶವನ್ನು ನೀಡಿದ್ದಾರೆ. ಈ ಆದೇಶವು ಜಲ ಸಚಿವಾಲಯಕ್ಕೆ ಸಂಬಂಧಿಸಿದೆ ಮತ್ತು ಸೂಚನೆಯ ಮೂಲಕ ನಿರ್ದೇಶನವನ್ನು ಕಳುಹಿಸಲಾಗಿದೆ. ದೆಹಲಿ ಸಚಿವರಾದ ಅತಿಶಿ ಇಂದು ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಹೊರಡಿಸಿದ ಆದೇಶದ ಬಗ್ಗೆ … Continued

ದೆಹಲಿ ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಮಾರ್ಚ್‌ 28ರವರೆಗೆ ಇ.ಡಿ. ಕಸ್ಟಡಿಗೆ ನೀಡಿದ ಕೋರ್ಟ್‌

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿಯ ವಿಶೇಷ ನ್ಯಾಯಾಲಯವು ಮಾರ್ಚ್‌ 28ರ ವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಶುಕ್ರವಾರ ನೀಡಿದೆ. ಜಾರಿ ನಿರ್ದೇಶನಾಲಯ ಮತ್ತು ಕೇಜ್ರಿವಾಲ್‌ ಪರ ವಕೀಲರ ವಿಸ್ತೃತ ವಾದ ಆಲಿಸಿದ ರೋಸ್‌ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕಸ್ಟಡಿ ಆದೇಶ … Continued