ಭಾರ್ಗವಿ ಎಲ್‌ಎಲ್‌ಬಿ’ ಖ್ಯಾತಿಯ ರಾಧಾ ಭಗವತಿ – ನಟ ರಾಣವ್ ಗೌಡ ಎಂಗೇಜ್‌ಮೆಂಟ್‌….

ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಭಾರ್ಗವಿ ಎಲ್‌ಎಲ್‌ಬಿ’ ಧಾರಾವಾಹಿಯ ಕಥಾನಾಯಕಿ ಭಾರ್ಗವಿ ಪಾತ್ರದ ನಟಿ ರಾಧಾ ಭಗವತಿ ಹಾಗೂ ಹಾಗೂ ಅಮೃತಧಾರೆ’ ಖ್ಯಾತಿಯ ಕಿರುತೆರೆ ನಟ ರಾಣವ್ ಗೌಡ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ‘ಅಮೃತಧಾರೆ’ ಸೀರಿಯಲ್‌ನಲ್ಲಿ ಜೆಡಿ ಪಾತ್ರದಲ್ಲಿ ರಾಣವ ಗೌಡ ಅನಟಿಸಿದ್ದಾರೆ.. ಈ ಹಿಂದೆ ‘ಅಮೃತಧಾರೆ’ ಸೀರಿಯಲ್‌ನಲ್ಲಿ ಜೆಡಿ ಪತ್ನಿ ಮಲ್ಲಿಯಾಗಿ … Continued

ದೆಹಲಿ ಯುವತಿ ಜೊತೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರನ ಮದುವೆ ನಿಶ್ಚಯ..?

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ, ತಮ್ಮ ದೀರ್ಘಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ಉಂಗುರ ಬದಲಾಯಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅನೇಕ ಮಾಧ್ಯಮ ವರದಿಗಳ ಪ್ರಕಾರ, ಇವರಿಬ್ಬರು ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು ರೈಹಾನ್ ವಾದ್ರಾ … Continued

ಗುಟ್ಟಾಗಿ ನಡೆಯಿತೇ ನಟಿ ರಶ್ಮಿಕಾ ಮಂದಣ್ಣ-ನಟ ವಿಜಯ ದೇವರಕೊಂಡ ನಿಶ್ಚಿತಾರ್ಥ ; ಫೆಬ್ರವರಿಯಲ್ಲಿ ಮದುವೆ..?

ಹೈದರಾಬಾದ್: ಖ್ಯಾತ ನಟ ವಿಜಯ ದೇವರಕೊಂಡ ಮತ್ತು ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಹಲವು ವರ್ಷಗಳಿಂದ ಕೇಳಿಬರುತ್ತಿರುವ ಗಾಸಿಪ್ ನಿಜವಾಗುವ ಲಕ್ಷಣ ಕಾಣುತ್ತಿದೆ. ಶುಕ್ರವಾರ ಕುಟುಂಬ ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗವಹಿಸಿದ್ದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮುಂದಿನ ವರ್ಷ ಫೆಬ್ರವರಿಯಲ್ಲಿ ಇವರಿಬ್ಬರ ವಿವಾಹ ನಿಗದಿಯಾಗಿದೆ. … Continued

ಸಾನಿಯಾ ಚಾಂದೋಕ್ ಜೊತೆ ಸಚಿನ್‌ ತೆಂಡೂಲ್ಕರ್‌ ಪುತ್ರನ ನಿಶ್ಚಿತಾರ್ಥ; ಸಾನಿಯಾ ಚಾಂದೋಕ್‌ ಯಾರು?

ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ ತೆಂಡೂಲ್ಕರ್ ಅವರು ಸಾನಿಯಾ ಚಾಂದೋಕ್ ಅವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿದ ಹಲವು ವರದಿಗಳು ತಿಳಿಸಿವೆ. ಆದಾಗ್ಯೂ, ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಾಂದೋಕ್ ಅವರ ಕುಟುಂಬಗಳು ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಇಂಡಿಯಾ ಟುಡೇ ವರದಿಯ ಪ್ರಕಾರ, … Continued

ವೆಂಕಟದತ್ತ ಸಾಯಿ ಜೊತೆ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಮದುವೆ ನಿಶ್ಚಿತಾರ್ಥ

ಡಬಲ್ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಅವರು ಪೋಸಿಡೆಕ್ಸ್ ಟೆಕ್ನಾಲಜೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಹೈದರಾಬಾದ್ ಮೂಲದ ವೆಂಕಟ ದತ್ತ ಸಾಯಿ ಅವರೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಶನಿವಾರ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ನಿಶ್ಚಿತಾರ್ಥ ಸಮಾರಂಭದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಫೋಟೋದಲ್ಲಿ, ಸಿಂಧು ಮತ್ತು ವೆಂಕಟ ತಮ್ಮ ಕೈಯಲ್ಲಿ ನಿಶ್ಚಿತಾರ್ಥದ ಉಂಗುರ ಧರಿಸಿ ಒಟ್ಟಿಗೆ ನಗುತ್ತಿರುವುದನ್ನು … Continued

ಸೋಮವಾರಪೇಟೆ : ಎಸ್​ಎಸ್​​ಎಲ್​ಸಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ; ರುಂಡದೊಂದಿಗೆ ಆರೋಪಿ ಪರಾರಿ

ಮಡಿಕೇರಿ: ಬೆಳಿಗ್ಗೆಯಷ್ಟೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾದ ಖುಷಿಯಲ್ಲಿದ್ದ ಬಾಲಕಿಯೊಬ್ಬಳ ರುಂಡ ಕಡಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದ್ದು, ಆರೋಪಿ ರುಂಡದೊಂದಿಗೆ ಪರಾರಿಯಾಗಿದ್ದಾ‌ನೆ ಎನ್ನಲಾಗಿದೆ. ಗುರುವಾರವೇ ಅಪ್ರಾಪ್ತ ಬಾಲಕಿಯನ್ನು ಆರೋಪಿ ಪ್ರಕಾಶ ಎಂಬಾತನ ಜೊತೆ ವಿವಾಹ ಮಾಡುವುದಕ್ಕೆ ಪೋಷಕರು ಮುಂದಾಗಿದ್ದರು. ಇದು ಗ್ರಾಮಸ್ಥರ ಗಮನಕ್ಕೆ ಬಂದಿತ್ತು. ಅವರು ಮಹಿಳಾ … Continued

ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

ಹೈದರಾಬಾದ್: ಖ್ಯಾತ ನಟ ಸಿದ್ಧಾರ್ಥ ಮತ್ತು ನಟಿ ಅದಿತಿ ರಾವ್ ಹೈದರಿ ಗೌಪ್ಯವಾಗಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್‌ ಆಗಿತ್ತು. ಆದರೆ ಇದೀಗ ಅವರು ತಾವಿಬ್ಬರು ಮದುವೆಯಾಗಿಲ್ಲ, ನಿಶ್ಚಿತಾರ್ಥ ಮಾಡಿಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ತಾವಿಬ್ಬರು ಮದುವೆಯಾಗಿಲ್ಲ, ಎಂಗೇಜ್‌ ಮೆಂಟ್‌ ಆಗಿದ್ದೇವೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಇಬ್ಬರು ಫೋಟೋ ಹಂಚಿಕೊಂಡಿದ್ದಾರೆ. ನಿಶ್ಚಿತಾರ್ಥದ ರಿಂಗ್‌ … Continued