ಗಮನಿಸಿ….| ಎಸ್​ ಎಸ್ ​ಎಲ್​ ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿದೆ ಹಾಗೂ ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ … Continued

ಇಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ : ಕೆಇಎ ಸಿಬ್ಬಂದಿ ಸೇರಿ 8 ಆರೋಪಿಗಳ ಬಂಧನ

ಬೆಂಗಳೂರು: ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣಕ್ಕೆ (Engineering seat blocking) ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಬ್ಬಂದಿ ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. 2024-25ನೇ ಸಾಲಿಗಾಗಿ ವಿವಿಧ ಎಂಜಿನಿಯರಿಂಗ್ ಕೋರ್ಸ್ ಪ್ರವೇಶದ ವೇಳೆಯಲ್ಲಿ ಕೆಇಎ ಅಧಿಕಾರಿಯೊಬ್ಬರು ಸೀಟು ಬ್ಲಾಕಿಂಗ್ ಅನುಮಾನದ ಮೇಲೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ ನವೆಂಬರ್ … Continued

ನೀಟ್ ಯುಜಿ 2024 ಮರು ಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್

ನವದೆಹಲಿ : ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆಯನ್ನು (NEET UG 2024) ಮತ್ತೆ ನಡೆಸುವ ಆದೇಶ ನೀಡಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ. ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಯನ್ನು ಸಾಬೀತುಪಡಿಸಲು ತನ್ನ ಮುಂದೆ ಇರುವ ಸಾಕ್ಷ್ಯಗಳು ಸಾಕಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. … Continued

ಇಂದು ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆ ದಿಢೀರ್‌ ಮುಂದೂಡಿಕೆ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಜೂನ್ 23 ರಂದು ನಡೆಯಬೇಕಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು (NEET PG) ದಿಢೀರ್‌ ಮುಂದೂಡಲಾಗಿದೆ. ಆರೋಗ್ಯ ಸಚಿವಾಲಯ ಈ ನಿರ್ಧಾರ ಪ್ರಕಟಿಸಿದ್ದು, ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ. ನೀಟ್-ಪಿಜಿ (NEET-UG) ಮತ್ತು ಯುಜಿಸಿ-ನೆಟ್‌ (UGC-NET) … Continued

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರವೇಶ ಪತ್ರ ಪ್ರಕಟ: ಜೂನ್‌ 30 ರಂದು ಪರೀಕ್ಷೆ

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಇದೇ ಜೂನ್ 30 ರಂದು ನಡೆಸಲಿರುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ನೋಂದಣಿ ಮಾಡಿರುವ ಅಭ್ಯರ್ಥಿಗಳು ಗುರುವಾರದಿಂದ (ಜೂನ್ 20) ತಮ್ಮ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು http://schooleducation.kar.nic.in  ನಲ್ಲಿ ಅಧಿಕೃತ … Continued

ಮನಕಲಕುವ ವೀಡಿಯೊ..| ಯು ಪಿ ಎಸ್ ಇ ಪರೀಕ್ಷೆಗೆ ತಡವಾಗಿ ಬಂದ ಯುವತಿ ; ಪ್ರವೇಶ ನಿರಾಕರಣೆ : ಪ್ರಜ್ಞೆ ತಪ್ಪಿದ ತಾಯಿ, ತಂದೆಯ ಗೋಳಾಟ

ನವದೆಹಲಿ : 2024 ನೇ ಸಾಲಿನ ಯುಪಿಎಸ್ಇ ಪರೀಕ್ಷೆ ನಿನ್ನೆ (ಜೂನ್ 16) ರಂದು ನಡೆದಿದ್ದು, ಅದೆಷ್ಟೋ ಅಭ್ಯರ್ಥಿಗಳು ಸಾವಿರಾರು ಕನಸುಗಳನ್ನು ಹೊತ್ತು ಪರೀಕ್ಷೆ ಬರೆದಿದ್ದಾರೆ. ಆದರೆ ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದ ಕಾರಣಕ್ಕೆ ಆಕೆಗೆ ಪರೀಕ್ಷೆ ಬರೆಯಲು ನಿರಾಕರಿಸಲಾಗಿದ್ದು, ಮಗಳ ಕನಸು ನುಚ್ಚು ನೂರಾಯಿತೆಂದು ಆಕೆಯ ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಹೆತ್ತವರ ಗೋಳಾಟದ ಈ … Continued

ಕೆಪಿಸಿಎಲ್‌ ನೇಮಕಾತಿ ಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ (KPCL) 622 ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಖಾಲಿ ಹುದ್ದೆಗಳನ್ನು ತುಂಬಲು ಫೆಬ್ರವರಿ 18ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ( Karnataka Examinations Authority)ವು ತನ್ನ ವೆಬ್‌ಸೈಟ್‌ನಲ್ಲಿ ಬುಧವಾರ ಪ್ರಕಟಿಸಿದೆ. ಆಕ್ಷೇಪಣೆಗಳ ಪರಿಶೀಲನೆ ನಂತರ, ಕಳೆದ ಸಲದಂತೆ ಈ ಬಾರಿಯೂ, ಪ್ರತಿ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ (ಮೇ 9) ಪ್ರಕಟವಾಗಿದೆ. ಇದರ ಬೆನ್ನಲ್ಲೇ ಈಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ (SSLC 2 … Continued

ರಾಜ್ಯದ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು: 5, 8ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಪರೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಶುಕ್ರವಾರ ಅನುಮತಿ ನೀಡಿದ್ದು, ಮಾರ್ಚ್ 25 (ಸೋಮವಾರ) ಪರೀಕ್ಷೆ ಮುಂದುವರಿಸಲು ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 25 ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್‌ … Continued

ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: 2024ರ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ (SSLC And PUC Exam) ದಿನಾಂಕವನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮಾರ್ಚ್‌ 1ರಿಂದ 22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಕುರಿತು ವಿಕಾಸಸೌಧದಲ್ಲಿ ಫೆಬ್ರವರಿ 20ರಂದು ಶಾಲಾ ಶಿಕ್ಷಣ ಹಾಗೂ … Continued