ಬೆಂಗಳೂರು : ಬೆಳ್ಳಂದೂರು ಶಾಲೆ ಬಳಿ ಸ್ಫೋಟಕ ವಸ್ತುಗಳು ಪತ್ತೆ ; ಆತಂಕ

ಬೆಂಗಳೂರು : ಬೆಂಗಳೂರಿನ ಶಾಲೆಯೊಂದರ ಮುಂಭಾಗ ಜಮೀನಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ ಎಂದು ವರದಿಯಾಗಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ, ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಸ್ಫೋಟಕಗಳನ್ನು ಟ್ರ್ಯಾಕ್ಟರ್‌ ಒಂದರಲ್ಲಿ ಇಟ್ಟಿರುವುದು ಪತ್ತೆಯಾಗಿದೆ. ಕಟ್ಟಡ ನಿರ್ಮಾಣ ಮಾಡುವ … Continued

ಜಮ್ಮುವಿನಲ್ಲಿ ೯.೭೫ ಕೆಜಿ ಸ್ಫೋಟಕ ಪತ್ತೆ

ಶ್ರೀನಗರ: ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ೯.೭೫ ಕೆಜಿಯಷ್ಟು ಸ್ಫೋಟಕ ಸಾಗಿಸುತ್ತಿದ್ದ ವ್ಯಕ್ತಿಯನ್ನು ಭದ್ರತಾ ಪಡೆಗಳು ಬಂಧಿಸಿವೆ. ಗುಂಡಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ವ್ಯಕ್ತಿಯನ್ನು ಬಂಧಿಸಿ ಅವನಿಂದ ೭೮ ಜಿಲೆಟಿನ್‌ ಕಡ್ಡಿಗಳು, ೨೭೫ ಮೀಟರ್‌ ತಂತಿ ವಶಪಡಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಕಿಸ್ತ್ವಾರ್‌ ಜಿಲ್ಲೆಯ ಜಲವಿದ್ಯುತ್‌ ಯೋಜನಾ ಪ್ರದೇಶದ ಸಮೀಪ ಅಡಗುದಾಣದಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಫೋಟಕ ತುಂಬಿದ್ದ ಎರಡು ವಾಹನಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗದ ವಿಮಾನ ನಿಲ್ದಾಣದ ಬಳಿ ಭಾರಿ ಪ್ರಮಾಣದ ಸ್ಫೋಟಕ ತುಂಬಿದ್ದ ಎರಡು ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ 904 ಕೆ.ಜಿ. ಜಿಲೆಟಿನ್ ಕಡ್ಡಿ, 3,267 ಡಿಟೊನೇಟರ್‌ಗಳು ಸೇರಿದಂತೆ ಹಲವಾರು ಇತರ ವಸ್ತುಗಳು ಪತ್ತೆಯಾಗಿವೆ. ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಟಾಟಾ 407 ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿಗಳು, ಪಿಕ್ ಅಪ್ ವಾಹನದಲ್ಲಿ 3,267 ಎಲೆಕ್ಟ್ರಾನಿಕ್ … Continued

ಅಂಬಾನಿ ಮನೆ ಬಳಿ ನಿಂತಿದ್ದ ಸ್ಫೋಟಕ ಹೊಂದಿದ ಎಸ್‌ಯುವಿ ಪ್ರಕರಣಕ್ಕೆ ದಿನಕ್ಕೊಂದು ತಿರುವು..!

ಮುಂಬೈ: ಕಳೆದ ವಾರ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ನಿಲುಗಡೆ ಮಾಡಿದ್ದ ಸ್ಫೋಟಕ ಹೊಂದಿರುವ ವಾಹನದ ಮಾಲೀಕ ಹಿರೆನ್ ಮನ್ಸುಖ್ ಶುಕ್ರವಾರ ನೆರೆಯ ಥಾಣೆ ಪ್ರದೇಶದ ಕೊಲ್ಲಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ಗೃಹ ಸಚಿವರ ಹೇಳಿಕೆಯಿಂದ ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಈಗ ಪ್ರಕರಣ ದಿನಕ್ಕೊಂದು ತಿರುವು … Continued

ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ

ಮುಂಬೈ: ಏಶಿಯಾದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಅವರ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ವೇಳೆ ಕಾರು ಮಾಲೀಕ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಕಾರು ಮಾಲೀಕ ಮನ್ಸುಕ ಹಿರೆನ್ ಶವ ಥಾಣೆಯ … Continued

ಸ್ಫೋಟಕ ವಸ್ತುಗಳ ಬಳಕೆ ಪರವಾನಿಗೆ ಪಡೆಯಲು ಇನ್ನಷ್ಟು ಕಾಲಾವಕಾಶ ಕೊಡಿ

ಬೆಂಗಳೂರು; ಕಲ್ಲು ಕ್ವಾರಿಯಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಸ್ಫೋಟಕ ವಸ್ತುಗಳ ಪರವಾನಿಗೆ ಪಡೆಯಲು ಗಣಿ ಸುರಕ್ಷತಾ ಮಹಾ ನಿದೇರ್ಶಕರು( ಡಿಜಿಎಂಎಸ್) ನೀಡಿರುವ ಸಮಯಾವಕಾಶವನ್ನು  ಇನ್ನಷ್ಟು ‌ ವಿಸ್ತರಣೆ ಮಾಡುವಂತೆ ಕೋರಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಮನವಿ ಮಾಡಿದೆ. ಬುಧವಾರ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ … Continued

 ನಾಲ್ಕು ವಾರದಲ್ಲಿ  ಸ್ಫೋಟಕ ವಸ್ತು ಹಿಂತಿರುಗಿಸದಿದ್ದರೆ ಲೈಸೆನ್ಸ್ ರದ್ದು 

ರಾಯಚೂರು, ( ಹಟ್ಟಿ ಚಿನ್ನದ ಗಣಿ): ಕಲ್ಲುಕ್ವಾರಿ ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ಯಾರಾದರೂ ಕಾನೂನು ಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರೆ, ನಾಲ್ಕು ವಾರದೊಳಗೆ ಹಿಂತಿರಿಗಿಸಬೇಕು.ಇಲ್ಲದಿದ್ದರೆ ಅಂತಹವರ ಲೈಸೆನ್ಸ್ ( ಪರವನಾಗಿ)ಯನ್ನು ರದ್ದುಪಡಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಎಚ್ಚರಿಕೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪ್ರದೇಶಕ್ಕೆ ಇಂದು … Continued

ತಿಂಗಳಿಗೊಮ್ಮೆ ರಾಜ್ಯದಲ್ಲಿ ಸ್ಫೋಟಕಗಳ ಆಡಿಟ್:ಬೊಮ್ಮಾಯಿ

ದಾವಣಗೆರೆ:ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು ಜಂಟಿಯಾಗಿ ಈ … Continued