ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ವಿಶೇಷ ವಿಮಾನದಲ್ಲಿ ಇಂದು ಭಾರತಕ್ಕೆ ; ತಿಹಾರ್ ಜೈಲಿನಲ್ಲಿ ಇರಿಸುವ ಸಾಧ್ಯತೆ

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ಇಂದು, ಗುರುವಾರ ಮಧ್ಯಾಹ್ನದ ನಂತರ ಭಾರತಕ್ಕೆ ತಲುಪಲಿದ್ದಾರೆ. 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಭಾರತಕ್ಕೆ ತಲುಪಿದಾಗ ತಿಹಾರ್ ಜೈಲಿನಲ್ಲಿರುವ ಹೆಚ್ಚಿನ ಭದ್ರತೆಯ ವಾರ್ಡ್‌ನಲ್ಲಿ ಇರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಆತನ ಅರ್ಜಿಯನ್ನು ತಿರಸ್ಕರಿಸಿದ್ದರಿಂದ ರಾಣಾ ಗಡೀಪಾರು … Continued

26/11 ಮುಂಬೈ ಭಯೋತ್ಪಾದಕ ದಾಳಿ ಸಂಚುಕೋರ ತಹವ್ವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಒಪ್ಪಿಗೆ ; ಪ್ರಧಾನಿ ಮೋದಿ ಸಮ್ಮುಖದಲ್ಲಿ ಟ್ರಂಪ್‌ ಘೋಷಣೆ

ನವದೆಹಲಿ: 26/11ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಭಾರತ ಹಾಗೂ ಅಮೆರಿಕದ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. “2008 ರ ಭೀಕರ ಮುಂಬೈ ಭಯೋತ್ಪಾದಕ … Continued

ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳಿಗೆ ಬೆಂಬಲ: ರವಾಂಡದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನವದೆಹಲಿ: ಜಾಗತಿಕವಾಗಿ ನಿಷೇಧ ಆಗಿರುವ ಪಾಕಿಸ್ತಾನದ ಭಯೋತ್ಪಾದಕ ಗುಂಪು ಲಷ್ಕರ್ ಎ ತೊಯ್ಬಾ (ಎಲ್‌ಇಟಿ) ಸದಸ್ಯನಾದ ಸಲ್ಮಾನ್ ರೆಹಮಾನ್ ಖಾನ್ ಎಂಬಾತನನ್ನು ಪೂರ್ವ ಆಫ್ರಿಕಾದ ರುವಾಂಡದಲ್ಲಿ ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ. ಈತ ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳಿಗೆ ಬೇಕಾದ ಶಸ್ತ್ರಾಸ್ತ್ರ ಮದ್ದುಗುಂಡು ಹಾಗೂ ಸ್ಪೋಟಕಗಳನ್ನು ಒದಗಿಸುವಲ್ಲಿ ಸಹಾಯ ಮಾಡಿದ್ದ ಎಂದು ಅಧಿಕಾರಿಗಳು … Continued