ರಾಜ್ಯದ ತೊಗರಿ ಬೆಳೆಗಾರರಿಗೆ ಸಿಹಿ ಸುದ್ದಿ ; ಪ್ರೋತ್ಸಾಹ ಧನ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ‌ ಸರ್ಕಾರದ ನಿಗದಿತ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 450 ರೂ.ಗಳ ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ, ಇದಕ್ಕೆ ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದೆ. ರಾಜ್ಯ ಸರ್ಕಾರದ ವತಿಯಿಂದ ತೊಗರಿ ಪ್ರತಿ ಕ್ವಿಂಟಾಲ್‌ಗೆ 450 ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ವಕ್ಫ್ ವಿವಾದ | ರೈತರಿಗೆ ನೀಡಿದ್ದ ನೋಟಿಸ್ ತಕ್ಷಣ ವಾಪಸ್ ಪಡೆಯಿರಿ ; ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ವಕ್ಫ್‌ ವಿಚಾರದಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ಮುಂದೆ ರೈತರಿಗೆ ಯಾವುದೇ ರೀತಿಯ … Continued

ವಿಮಾನ ನಿಲ್ದಾಣಕ್ಕೆ ನೀಡಿದ ಭೂಮಿಗೆ ಸಿಗದ ಪರಿಹಾರ: ಎಸಿ ಕಚೇರಿ ಪೀಠೋಪಕರಣ ಒಯ್ದ ರೈತರು

ಬೆಳಗಾವಿ : ಪರಿಹಾರ ನೀಡಲು ವಿಳಂಬ ಮಾಡಿದ ಕಾರಣ ನ್ಯಾಯಾಲಯದ ಆದೇಶದಂತೆ ಬೆಳಗಾವಿ ಉಪ ವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಪೀಠೋಪರಣ, ಪ್ರಿಂಟರ್, ಕಂಪ್ಯೂಟರ್ ಗಳನ್ನು ರೈತರು ಜಪ್ತಿ ಮಾಡಿಕೊಂಡಿದ್ದಾರೆ. ಬೆಳಗಾವಿಯ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ರೈತರು ಜಪ್ತಿ ಮಾಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ವಿಸ್ತರಣೆಗೆ ಅಲ್ಲಿನ ಪರಿಸರದ ರೈತರು ಜಮೀನು … Continued

ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದಿಗೆ ಮುಂದಾದ ಕಂಪನಿ: ಬೆಳೆಗಾರರಿಗೆ ಎದುರಾಯ್ತು ದರ ಕಡಿಮೆಯಾಗುವ ಆತಂಕ

ನವದೆಹಲಿ: ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ ಎಂದು ವರದಿಯಾಗಿದೆ. ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಒಪ್ಪಂದ ಮಾಡಿಕೊಂಡಿದೆ ಎಂದು ವರದಿಯಾಗಿದ್ದು, ಶ್ರೀಲಂಕಾ ಮೂಲದ ವ್ಯಾಪಾರಿ … Continued

ರೈತ ಮುಖಂಡರು-ಕೇಂದ್ರ ಸಚಿವರ ಮಾತುಕತೆ ವಿಫಲ : ದೆಹಲಿ ಚಲೋ ಮೆರವಣಿಗೆ ಆರಂಭ ; 30 ನಿಮಿಷದಲ್ಲಿ ಬ್ಯಾರಿಕೇಡ್‌ ತುಂಡು ಮಾಡ್ತೇವೆ ಎಂದ ರೈತರು

ನವದೆಹಲಿ: ಸೋಮವಾರ ತಡರಾತ್ರಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ ನಡುವಿನ ಮಹತ್ವದ ಸಭೆ ಯಾವುದೇ ನಿರ್ಣಯವಿಲ್ಲದೆ ಅಂತ್ಯಗೊಂಡಿದ್ದು, ರೈತರು ಇಂದು, ಮಂಗಳವಾರ ತಮ್ಮ ‘ದೆಹಲಿ ಚಲೋ’ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು, ಮಂಗಳವಾರ ಬೆಳಗ್ಗೆ 10 ಗಂಟೆಗೆ ‘ದೆಹಲಿ ಚಲೋ’ ಮೆರವಣಿಗೆ ಆರಂಭಗೊಂಡಿದ್ದು, ಪಂಜಾಬ್‌ನ ಸಂಗ್ರೂರ್‌ನಿಂದ ರೈತರು 2,500 ಟ್ರಾಕ್ಟರ್ ಟ್ರಾಲಿಗಳಲ್ಲಿ ಹರಿಯಾಣ ಮೂಲಕ ದೆಹಲಿಗೆ … Continued

ಸಾಲಮನ್ನಾದ ಆಸೆಗೆ ಬರಗಾಲ ಬರಲೆಂದು ರೈತರು ಬಯಸ್ತಾರೆ ; ಸಚಿವ ಶಿವಾನಂದ ಪಾಟೀಲ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಚಿವ ಶಿವಾನಂದ ಪಾಟೀಲ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. … Continued

ವೈನ್ ಮದ್ಯವಲ್ಲ, ವೈನ್ ಮಾರಾಟ ಹೆಚ್ಚಾದರೆ ರೈತರಿಗೆ ಲಾಭ

ಮುಂಬೈ: ವೈನ್ ಮದ್ಯವಲ್ಲ, ವೈನ್ ಮಾರಾಟ ಹೆಚ್ಚಿದರೆ ರೈತರಿಗೆ ಹೆಚ್ಚಿನ ಲಾಭ ಬರುತ್ತದೆ ಎಂದು ಶಿವಸೇನೆಯ ಮುಖಂಡ ಸಂಜಯ ರಾವತ್ ಹೇಳಿದ್ದಾರೆ. ರಾಜ್ಯದ ಸೂಪರ್ ಮಾರ್ಕೆಟುಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲಿ ರಾವತ್ ಈ ರೀತಿ ಸಮರ್ಥಿಸಿಕೊಂಡಿದ್ದಾರೆ. ಈ ಕ್ರಮದಿಂದ ರೈತರ ಆದಾಯ ದ್ವಿಗೊಳ್ಳಲಿದೆ. ಆದರೆ ಬಿಜೆಪಿ … Continued

ಪ್ರತಿಭಟನೆ ನಡೆಸಿ, ಆದರೆ ರಸ್ತೆ ಸಂಚಾರ ಬಂದ್ ಮಾಡಬೇಡಿ : ರೈತರಿಗೆ ಸುಪ್ರೀಂ ಸೂಚನೆ

ನವದೆಹಲಿ: ಪ್ರತಿಭಟನೆ ನಡೆಸುವುದು ರೈತರ ಹಕ್ಕು ಪ್ರತಿಭಟನೆ ನಡೆಸಿ, ಆದರೆ ಜನ ಸಂಚಾರಕ್ಕೆ ಅಡ್ಡಿಯಾಗುವಂತೆ ರಸ್ತೆ ಬಂದ್ ಮಾಡುವುದನ್ನು ತಕ್ಷಣವೇ ನಿಲ್ಲಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಕಳೆದ ಹತ್ತು ತಿಂಗಳಿಂದ ದೆಹಲಿಯ ಗಡಿ ಭಾಗದ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. … Continued

ದೀರ್ಘ ಬಾಳಿಕೆ ಕುನ್ಬಾ ಟೆಂಟ್‌ಗಳ ನಿರ್ಮಾಣಕ್ಕೆ ಪ್ರತಿಭಟನಾಕಾರರ ಸಿದ್ಧತೆ

ದೆಹಲಿ ಗಡಿಗಳಲ್ಲಿ ಬೇಡಿಕೆ ಈಡೇರಿಕೆಗಾಗಿ ಹೋರಾಟ ನಡೆಸುತ್ತಿರುವ ರೈತರು ಸದ್ಯಕ್ಕೆ ಹೋರಾಟವನ್ನು ಕೈಬಿಡುವ ಲಕ್ಷಣಗಳು ಕಾಣುತ್ತಿಲ್ಲ. ದೀರ್ಘ ಬಾಳಿಕೆಯ ಕುನ್ಬಾ ಟೆಂಟ್ಗಳನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇನ್ನಷ್ಟು ತಿಂಗಳುಗಳ ಕಾಲ ಪ್ರತಿಭಟನೆಯನ್ನು ಮುಂದುವರೆಸುವ ಉದ್ದೇಶದಿಂದ ಶಾಶ್ವತವೆನ್ನಬಹುದಾದ ಕುನ್ಬಾ ಡೇರೆಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಪ್ರತಿಯೊಂದು ಕುಟುಂಬಗಳಿಂದ ೨೦೦ ರೂ.ಗಳಿಂದ ೫೦೦ರೂ.ವರೆಗೆ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ … Continued

ಅಧಿಕಾರ ಬದಲಾವಣೆ ನಮ್ಮ ಗುರಿಯಲ್ಲ,ನಮ್ಮ ಸಮಸ್ಯೆಗಳಿಗೆ ಪರಿಹಾರ ಬೇಕು ಅಷ್ಟೆ 

ನವ ದೆಹಲಿ: ಆಂದೋಲನ ನಡೆಸುತ್ತಿರುವ ರೈತರು ಕೇಂದ್ರದಲ್ಲಿ ಯಾವುದೇ ಅಧಿಕಾರ ಬದಲಾವಣೆಯ ಗುರಿ ಹೊಂದಿಲ್ಲ, ಆದರೆ ನಮ್ಮ ಸಮಸ್ಯೆಗಳಿಗೆ ಪರಿಹಾರ ಬೇಕಿದೆ ಎಂದು ಬಿಕೆಯು ಮುಖಂಡ ರಾಕೇಶ್ ಟಿಕಾಯಿತ್‌ ಬುಧವಾರ ಪ್ರತಿಪಾದಿಸಿದರು. ಅನೇಕ ರೈತ ನಾಯಕರು ಆಂದೋಲನವನ್ನು ವಿಸ್ತರಿಸಲು ದೇಶದ ವಿವಿಧ ಭಾಗಗಳಲ್ಲಿ ಪ್ರವಾಸ ಮಾಡುತ್ತಾರೆ ಎಂದರು. ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪ್ರದರ್ಶನದ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ … Continued