ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ

ಬೆಂಗಳೂರು: ಈಗ ರದ್ದಾದ ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರು ನ್ಯಾಯಾಲಯ ಆದೇಶಿಸಿದೆ. ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ನಡೆಸಲಾಗಿದೆ ಎಂದು ಆರೋಪಿಸಿ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಜನಾಧಿಕಾರ ಸಂಘರ್ಷ ಸಂಘಟನೆಯ ಆದರ್ಶ ಅಯ್ಯರ್ ಎಂಬವರು ದೂರು … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ​ಐಆರ್ ದಾಖಲು

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಸಿದ್ದರಾಮಯ್ಯ … Continued

ಸಿಖ್ಖರ ಭಾವನೆಗಳಿಗೆ ಧಕ್ಕೆ ತಂದ ಆರೋಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ ದಾಖಲು

ರಾಯ್ಪುರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚಿನ ಅಮೆರಿಕ ಭೇಟಿಯ ವೇಳೆ ನೀಡಿದ ಹೇಳಿಕೆಗಳು  ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದೆ ಎಂದು ಆರೋಪಿಸಿ ಛತ್ತೀಸ್‌ಗಢದಲ್ಲಿ ರಾಹುಲ್‌ ಗಾಂಧಿಯವರ ಮೇಲೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ರಾಜಧಾನಿ ರಾಯ್ಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಬಿಲಾಸ್‌ಪುರ … Continued

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ

ಬೆಂಗಳೂರು: ಬೆಂಗಳೂರು ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ಆರೋಪದಡಿ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಗುರುವಾರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು … Continued

ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಪ್ರಕರಣದ ನಂತರ ಬಿಜೆಪಿ ಶಾಸಕ ಮುನಿರತ್ನಗೆ ಈಗ ಮತ್ತೊಂದು ಕಂಟಕ ಎದುರಾಗಿದೆ. ಬೆಂಗಳೂರು ಮೂಲದ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಶಾಸಕ … Continued

ನಾಗಮಂಗಲ‌ ಗಲಭೆ : ಆರ್ ಅಶೋಕ, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ ಐ ಆರ್‌

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ನಾಗಮಂಗಲ‌ ಕೋಮುಗಲಭೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ನಾಗಮಂಗಲ ಘಟನೆಗೆ ಸಂಬಂಧಿಸದೇ ಇದ್ದ ವೀಡಿಯೊ ಹಾಗೂ … Continued

ಬಿಜೆಪಿ ಶಿಸ್ತು ಸಮಿತಿಯಿಂದ ಶಾಸಕ ಮುನಿರತ್ನಗೆ ಶೋಕಾಸ್‌ ನೋಟಿಸ್

ಬೆಂಗಳೂರು : ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಂಕಷ್ಟ ಎದುರಾಗಿರುವ ಬೆನ್ನಲ್ಲೇ ಬಿಜೆಪಿಯಿಂದ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಯಾಗಿದೆ. ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ಮುನಿರತ್ನ ಮೇಲೆ ಕೇಳಿ ಬಂದಿರುವ ಆರೋ ಪದ ಬಗ್ಗೆ … Continued

ಗುತ್ತಿಗೆದಾರನಿಗೆ ಜೀವ ಬೆದರಿಕೆ ಆರೋಪ: ಶಾಸಕ ಮುನಿರತ್ನ ವಿರುದ್ಧ 2 ಎಫ್ಐಆರ್ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಆರ್‌ಐ ದಾಖಲಾಗಿವೆ ಎಂದು ತಿಳಿದುಬಂದಿದೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಅವರ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಶಾಸಕ ಮುನಿರತ್ನ ಎ1 … Continued

ಹಿರಿಯ ಅಧಿಕಾರಿ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ ಐಎಎಫ್ ಅಧಿಕಾರಿ

ಶ್ರೀನಗರ: ಭಾರತೀಯ ವಾಯುಪಡೆಯ ಮಹಿಳಾ ಫ್ಲೈಯಿಂಗ್ ಅಧಿಕಾರಿಯೊಬ್ಬರು ವಿಂಗ್ ಕಮಾಂಡರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವಿಂಗ್ ಕಮಾಂಡರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2) ರ ಅಡಿಯಲ್ಲಿ ಪೊಲೀಸ್ ಸ್ಟೇಷನ್ ಬದ್ಗಾಮ್‌ನಲ್ಲಿ … Continued

ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ ಐ ಆರ್ ದಾಖಲು

ಬೆಂಗಳೂರು : ಖ್ಯಾತ ಸಿನೆಮಾ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ. ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ … Continued