ಅಯೋಧ್ಯೆಯ ರಾಮಪಥ-ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿದೀಪ ಕಳ್ಳತನ

ಅಯೋಧ್ಯೆ : ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ಪ್ರದೇಶದಲ್ಲಿರುವ ಭಕ್ತಿ ಪಥ ಮತ್ತು ರಾಮಪಥದಲ್ಲಿ ಈ ದೀಪಗಳನ್ನು ಅಳವಡಿಸಲಾಗಿತ್ತು. ಬೀದಿದೀಪ ಅಳವಡಿಕೆಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ಗುತ್ತಿಗೆ ನೀಡಿದ್ದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣ ಆಟೋಮೊಬೈಲ್ಸ್ … Continued

ವಾಲ್ಮೀಕಿ ನಿಗಮ ಹಗರಣ: ಇ.ಡಿ. ಅಧಿಕಾರಿಗಳ ವಿರುದ್ಧದ ಎಫ್​ಐಆರ್​ ಗೆ ಹೈಕೋರ್ಟ್ ತಡೆ

ಬೆಂಗಳೂರು : ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗೆ ವಿಚಾರಣೆಯ ನೆಪದಲ್ಲಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ. ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಮನೋಜ ಮಿತ್ತಲ್‌ ಮತ್ತು ಸಹಾಯಕ ನಿರ್ದೇಶಕ ಮುರಳಿ ಕಣ್ಣನ್‌ ವಿರುದ್ಧದ ತನಿಖೆ ನಡೆಸುವುದಕ್ಕೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ … Continued

ಡಿಸಿಎಂ ಡಿ ಕೆ ಶಿವಕುಮಾರ ವಿರುದ್ಧ ಸಿಬಿಐ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್‌ ನಕಾರ

ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿರುವುದನ್ನು ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. … Continued

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್ ದಾಖಲು

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್ ದಾಖಲಾಗಿದೆ. ನಿಗದಿತ ಸಮಯ ಮೀರಿ ಕಾರ್ಯನಿರ್ವಹಿಸಿದ್ದಕ್ಕಾಗಿ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ವಿರಾಟ್ ಕೊಹ್ಲಿ ಒಡೆತನದ ಒನ್8 ಕಮ್ಯೂನ್ ಪಬ್(One8 Commune Pub) ಮತ್ತು ಎಂಜಿ ರಸ್ತೆಯಲ್ಲಿರುವ ಹಲವಾರು ಸಂಸ್ಥೆಗಳ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದಾರೆ. ಡಿಸಿಪಿ ಸೆಂಟ್ರಲ್ ಪ್ರಕಾರ, … Continued

ಲೈಂಗಿಕ ದೌರ್ಜನ್ಯ ಆರೋಪ: ಡಾ.ಸೂರಜ ರೇವಣ್ಣ ವಿರುದ್ಧ ಪ್ರಕರಣ ದಾಖಲು

ಹಾಸನ: ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಅವರ ಎಫ್​ಐಆರ್ ದಾಖಲಾಗಿದೆ. ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377, 342 ಹಾಗೂ 506 ಅಡಿ ಕೇಸ್ ದಾಖಲು ಮಾಡಲಾಗಿದೆ. ಶುಕ್ರವಾರ (ಜೂ.21) ಬೆಂಗಳೂರಿನ ಡಿಜಿ ಕಚೇರಿಗೆ ದೂರು ನೀಡಿದ್ದ ಸಂತ್ರಸ್ತ … Continued

ಸೂರಜ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧ ಎಫ್‌ಐಆರ್

ಹಾಸನ : ಪ್ರಜ್ವಲ್‌ ಸಹೋದರ ಸೂರಜ್‌ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ (unnatural sexual abuse) ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಈ ಆರೋಪ ಮಾಡಿರುವ ಜೆಡಿಎಸ್​ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್‌ ಕಾರ್ಯಕರ್ತ ದೂರು … Continued

ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಠಾಣಾ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿದ್ದಲ್ಲದೆ, ಬೆದರಿಕೆ ಒಡ್ಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಮರಳುಗಾರಿಗೆ ಸಂಬಂಧ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ‌ ಮುಖಂಡನ ಪರ ಯಾವುದೇ ಅನುಮತಿ … Continued

ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಪೊಲೀಸರಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಕಲ್ಲು ಕ್ವಾರಿ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ ಶೆಟ್ಟಿ ಅವರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಗೆ ಬಂದು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ … Continued

ವಿಭವಕುಮಾರ 7-8 ಬಾರಿ ನನ್ನ ಕಪಾಳಕ್ಕೆ ಹೊಡೆದಿದ್ದಾನೆ, ಹೊಟ್ಟೆಗೆ ಒದ್ದಿದ್ದಾನೆ….: ಎಫ್‌ಐಆರ್‌ನಲ್ಲಿ ಸಂಸದೆ ಸ್ವಾತಿ ಮಲಿವಾಲ್ ಆರೋಪ

ನವದೆಹಲಿ : ಕಪಾಳಮೋಕ್ಷ, ಎಳೆದಾಡಿ, ಎದೆಗೆ ಒದ್ದಿದ್ದಾನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಆಪ್ತ ವಿಭವಕುಮಾರ ವಿರುದ್ಧ ಆಪ್‌ ನಾಯಕಿ ಸ್ವಾತಿ ಮಲಿವಾಲ್‌ ನೀಡಿರುವ ದೂರಿನಲ್ಲಿ ಗಂಭೀರ ಹಲ್ಲೆ ಆರೋಪ ಮಾಡಲಾಗಿದೆ. ಸೋಮವಾರ ಬೆಳಗ್ಗೆ, ಮುಖ್ಯಮಂತ್ರಿಯವರ ಅಧಿಕೃತ ನಿವಾಸದ ಡ್ರಾಯಿಂಗ್ ರೂಮಿನಲ್ಲಿ ವಿಭವಕುಮಾರ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಸ್ವಾತಿ ಮಲಿವಾಲ್ … Continued

ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಸಹಾಯಕನ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕನ ವಿರುದ್ಧ ಅನುಚಿತ ವರ್ತನೆ ಮತ್ತು ಹಲ್ಲೆ ಆರೋಪದ ಮೇಲೆ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಸಲ್ಲಿಸಿದ ಔಪಚಾರಿಕ ದೂರಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರು ಭಾರತೀಯ ಸೆಕ್ಷನ್ 354 (ಮಹಿಳೆಯ ವಿನಯವನ್ನು ಆಕ್ರೋಶಗೊಳಿಸುವುದು), 506 (ಅಪರಾಧ ಬೆದರಿಕೆ), 509 … Continued