ಬೆಳಗಾವಿ ಅಗ್ನಿ ಅವಘಡ : ಗಾಯಗೊಂಡಿದ್ದ ತಂದೆ, ಮಗ ಸಾವು

ಬೆಳಗಾವಿ : ಬೆಳಗಾವಿಯಲ್ಲಿ ಸೋಮವಾರ ತಡರಾತ್ರಿ  ಶಂಕಿತ ಫ್ರಿಜ್‌ ಸ್ಫೋಟದಿಂದ ಮನೆಗೆ ಬೆಂಕಿ ಹತ್ತಿಕೊಂಡು ಸಂಭವಿಸಿದ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜಾನನ ರಾಜಾರಾಮ ಧಮೋನೆ (65)ಮತ್ತು ಅವರ ಮಗ ರೋಷನ್ (21) ಮೃತಪಟ್ಟವರು. ಈ ಘಟನೆಯಲ್ಲಿ ಸಾವಿನ ಸಂಖ್ಯೆ ಈಗ ಆರಕ್ಕೆ ಏರಿದೆ. ಗ ಸೋಮವಾರ … Continued

ವಿಡಿಯೊ | ಆನೇಕಲ್‌ ; ಧಗಧಗನೆ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು

ಬೆಂಗಳೂರು : ಆನೇಕಲ್ ತಾಲೂಕಿನ ಹಳೆ ಚಂದಾಪುರದಲ್ಲಿರುವ ಪಾರ್ಕಿಂಗ್ ಯಾರ್ಡ್‌ನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅಪರಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ. ಪಾರ್ಕ್ ಮಾಡಲಾಗಿದ್ದ ಒಂದು ಬಸ್ಸಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ.  ಬಳಿಕ ಅದರ ಪಕ್ಕದಲ್ಲಿದ್ದ ಇನ್ನೂ ಮೂರು ಬಸ್‌ಗಳಿಗೆ  ವ್ಯಾಪಿಸಿದ್ದರಿಂದ … Continued

ಭೀಕರ ಅಗ್ನಿ ದುರಂತ : ಕೋಚಿಂಗ್ ಸೆಂಟರ್‌ನಲ್ಲಿ 14 ಮಂದಿ ಸಜೀವ ದಹನ

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾಣಿಸಿಕೊಂಡ ಭಾರೀ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಬೆಂಕಿ ಅನಾಹುತದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಮತ್ತು ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದ್ದು, ಬೃಹತ್ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಫೈರ್ ಬ್ರಿಗೇಡ್ ಇಲಾಖೆಯ ಮಾಹಿತಿ … Continued

ಮೈಸೂರು: ಪಬ್‌ನಲ್ಲಿ ಭೀಕರ ಅಗ್ನಿ ಅನಾಹುತ; ಇಬ್ಬರುಸಜೀವ ದಹನ, ಹಲವರಿಗೆ ಗಾಯ

ಮೈಸೂರು: ಇಲ್ಲಿನ ರೆಸ್ಟೋ ಪಬ್‌ (Restopub) ಒಂದರಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರದೃಷ್ಟಕರ ಘಟನೆ ಮೈಸೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಾಹಿತಿ ಪ್ರಕಾರ, ಮೃತರನ್ನು ಡಾರ್ಜಿಲಿಂಗ್ ಮೂಲದ 26 ವರ್ಷದ ಸಾಹಿನ್ ಮತ್ತು ನೇಪಾಳ ಮೂಲದ 24 ವರ್ಷದ ಪ್ರಕಾಶ ಎಂದು ಗುರುತಿಸಲಾಗಿದೆ. ಮೃತರಿಬ್ಬರೂ … Continued

ದೆಹಲಿ ಹೊಟೇಲ್‌ ಅಗ್ನಿ ದುರಂತ : ಐಸಿಯುನಲ್ಲಿದ್ದ ತಂದೆ ಸನಿಹ ಇರಲು ಹೊಟೇಲ್‌ನಲ್ಲಿ ತಂಗಿದ್ದ ಸಿಎ ಕುಟುಂಬದ 8 ಮಂದಿ ಸಾವು

ನವದೆಹಲಿ: ಇಲ್ಲಿನ ದಕ್ಷಿಣ ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ‘ಫ್ಲರಿಶ್ ಸ್ಟೇ’ (Flourish Stay) ಹೋಟೆಲ್‌ನಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಎಂಟು ಸದಸ್ಯರು ಸೇರಿದಂತೆ ಕನಿಷ್ಠ 21 ಜನರು ಜೀವಂತವಾಗಿ ದಹನವಾಗಿದ್ದಾರೆ. ಮೃತರ ಪೈಕಿ 12 ಮಂದಿ ವಿದೇಶಿ ಪ್ರಜೆಗಳಾಗಿದ್ದಾರೆ ಎಂದು ವರದಿಯಾಗಿದೆ. ಗುರುಗ್ರಾಮದ ಸೆಕ್ಟರ್ 46 … Continued

ದೆಹಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ : 21 ಮಂದಿ ಸಾವು ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಧುಮುಕಿದ ಇಬ್ಬರು ಮಹಿಳೆಯರು

ನವದೆಹಲಿ: ದೆಹಲಿಯ ಮಾಳವೀಯ ನಗರ ಪ್ರದೇಶದ ರೆಸ್ಟೋರೆಂಟಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 21 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ರೆಸ್ಟೋರೆಂಟ್‌’ನಲ್ಲಿ ಈ ದುರಂತ ಸಂಭವಿಸಿದೆ. ಮೃತರ ಪೈಕಿ ಹಲವರು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಗ್ನಿ ದುರಂತವು … Continued

ಬೆಂಗಳೂರು : ಸಚಿವ ದಿನೇಶ ಗುಂಡೂರಾವ್ ಕಾರ್ಯಕ್ರಮದಲ್ಲಿ ಹೊತ್ತಿಕೊಂಡ ಬೆಂಕಿ

ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವಾದ ಗುರುವಾರ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮಕರ ಸಂಕ್ರಾಂತಿ ಸಂಭ್ರಮದ ನಡುವೆ ಚಿಕ್ಕಪೇಟೆಯಲ್ಲಿರುವ ಬಳೇಪೇಟೆಯ ದೇವಸ್ಥಾನದ ಮುಂದೆ ಹಚ್ಚಿದ ಪಟಾಕಿ ಕಿಡಿಯಿಂದ ಬ್ಯಾನರ್ ಹೊತ್ತಿ ಉರಿದಿದೆ ಎಂದು ಹೇಳಲಾಗಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ … Continued

ಸ್ವಿಟ್ಜರ್ಲೆಂಡ್ ಬಾರ್‌ನಲ್ಲಿ ಭೀಕರ ಅಗ್ನಿ ದುರಂತ: 40ಕ್ಕೂ ಹೆಚ್ಚು ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ-ವರದಿ

ಕ್ರಾನ್ಸ್ ಮೊಂಟಾನ (ಸ್ವಿಟ್ಜರ್ಲೆಂಡ್): ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಸ್ವಿಟ್ಜರ್ಲೆಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದ ಬಾರ್‌ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಸುಮಾರು 40ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಗುರುವಾರ ಮುಂಜಾನೆ ಸುಮಾರು 1:30ರ … Continued

ಕಾರವಾರ | ಅಮದಳ್ಳಿಯಲ್ಲಿ ಸುಟ್ಟು ಕರಕಲಾದ ಆಟೋ, ಎರಡು ಕಾರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯಲ್ಲಿತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಆಟೋ  ಮತ್ತು ಎರಡು ಕಾರುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ವಾಹನಗಳನ್ನು ಆವರಿಸಿಕೊಂಡಿದೆ. ಬೆಂಕಿಯ ತೀವ್ರತೆಯಿಂದಾಗಿ ಸ್ಥಳದಲ್ಲಿದ್ದ ಕಾರುಗಳು ಮತ್ತು ಆಟೋ ರಿಕ್ಷಾ ಸಂಪೂರ್ಣವಾಗಿ ನಾಶವಾಗಿವೆ. ಈ ಅವಘಡದಿಂದ … Continued

25 ಜನ ಸಾವಿಗೀಡಾದ ಗೋವಾ ನೈಟ್‌ಕ್ಲಬ್ ಬೆಂಕಿ ದುರಂತದ ಘಟನೆ ; ಮಾಲೀಕರು ದೇಶ ಬಿಟ್ಟು ಪಲಾಯನ

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ 25 ಜನರು ಸಾವಿಗೀಡಾಗಿ, ಆರು ಮಂದಿ ಗಾಯಗೊಂಡ ಕೆಲವೇ ಗಂಟೆಗಳ ನಂತರ, ನೈಟ್‌ಕ್ಲಬ್ ಮಾಲೀಕರಾದ ಸೌರಭ ಮತ್ತು ಗೌರವ್ ಲೂತ್ರಾ ಸಹೋದರರು ಥೈಲ್ಯಾಂಡಿನ  ಫುಕೆಟ್‌ಗೆ (Phuket) ವಿಮಾನದಲ್ಲಿ ಪರಾರಿಯಾಗಿರುವುದನ್ನು ಗೋವಾ ಪೊಲೀಸರು ಖಚಿತಪಡಿಸಿದ್ದು, ಅವರಿಗಾಗಿ ಅಂತಾರಾಷ್ಟ್ರೀಯ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಸೋಮವಾರ ತಿಳಿಸಿದ್ದಾರೆ. ಬೆಂಕಿ … Continued