ಕಾರವಾರ: ಮೀನುಗಾರಿಕಾ ಬೋಟ್‌ನಲ್ಲಿ ಉಸಿರುಗಟ್ಟಿ ಇಬ್ಬರು ಮೀನುಗಾರರು ಸಾವು

ಕಾರವಾರ: ಮೀನುಗಾರಿಕಾ ಬೋಟ್‌ನಲ್ಲಿ ಹಿಡಿದ ಮೀನುಗಳಿಂದ ಹೊರಸೂಸಿದ ವಿಷಾನಿಲ ಸೇವನೆಯಿಂದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮುದಗಾ ಬಂದರಿನಲ್ಲಿ ಸಂಭವಿಸಿದೆ. ಅಂಕೋಲಾ ತಾಲೂಕಿನ ಬೇಲೆಕೇರಿಗೆ ಸೇರಿದ ಮೂಕಾಂಬಿಕಾ ಮೀನುಗಾರಿಕಾ ಬೋಟ್‌ನಲ್ಲಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬೋಟ್‌ನ ಶೇಖರಣಾ ಘಟಕವನ್ನು ಸ್ವಚ್ಛಗೊಳಿಸುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. … Continued