ಕುಂದಾಪುರ : ಗಂಗೊಳ್ಳಿಯಲ್ಲಿ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

ಕುಂದಾಪುರ : ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ನೀರು ತುಂಬಿ ಮುಳುಗಡೆಯಾಗಿದೆ ಎಂದು ವರದಿಯಾಗಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಐವರು ಮೀನುಗಾರರನ್ನು ಮತ್ತೊಂದು ಬೋಟಿನಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ಬೋಟಿನಲ್ಲಿದ್ದ ಮೀನುಗಾರರಾದ ಪ್ರಕಾಶ, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಎಂಬವರನ್ನು ರಕ್ಷಿಸಲಾಗಿದೆ. ಫೆ.23ರ ರಾತ್ರಿ … Continued

ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

ಕಾರವಾರ : ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ವರದಿಯಾಗಿದ್ದು, ಬೋಟ್‌ನಲ್ಲಿದ್ದ ನಾಲ್ಕು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಾದೇವ ಖಾರ್ವಿ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಗಾಳಿಮಳೆಗೆ ಸಿಲುಕಿ ಮುಳುಗಡೆಯಾಗಿದೆ. … Continued

ಭಟ್ಕಳ: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿಗಳು, 10ಕ್ಕೂ ಹೆಚ್ಚು ಮೀನುಗಾರರ ರಕ್ಷಣೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಅಲೆಯ ರಭಸಕ್ಕೆ ಸಿಲುಕಿದ್ದ 10ಕ್ಕೂ ಹೆಚ್ಚು ಮೀನುಗಾರರನ್ನು ಭಟ್ಕಳ ಬಂದರು ಸಮೀಪದ ಅಳಿವೆ ಪ್ರದೇಶದಲ್ಲಿ ರಕ್ಷಿಸಲಾಗಿದೆ. ಅಬ್ಬರದ ಮಳೆಯಿಂದಾಗಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಲು ನಿರ್ಬಂಧವಿದ್ದರೂ, ಮೀನುಗಾರರು ಪಾತಿದೋಣಿ ಮೂಲಕ ಮೀನುಗಾರಿಕೆಗೆ ತೆರಳಿದ್ದರು ಎನ್ನಲಾಗಿದೆ. ಅರಬ್ಬೀ ಸಮುದ್ರದಲ್ಲಿ ಬಾರೀ ಗಾಳಿ ಸಹಿತ ಅಬ್ಬರದ ಮಳೆಯಾಗಿದ್ದರಿಂದ ಮೀನುಗಾರರು ಅಲೆಯ ರಭಸಕ್ಕೆ … Continued