ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ವರದಿಯಾಗಿದೆ. ಜ್ವರದ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವೈದ್ಯರ ಸಲಹೆಯ ನಂತರ ಡಿಸ್ಚಾರ್ಜ್ ಆಗಿದ್ದಾರೆ. ಒಂದೆರಡು ತಿಂಗಳಿನಿಂದ ಪಂಚರತ್ನ ಯಾತ್ರೆ ಕೈಗೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು. … Continued